* ರಾಜ್ಯ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ
* ಸ್ವಪ್ರತಿಷ್ಠೆಗಾಗಿ ಬಿಜೆಪಿಯನ್ನೇ ಸೋಲಿಸಿದ್ರಾ ರಮೇಶ್ ಜಾರಕಿಹೊಳಿ?
* ಲಕ್ಷ್ಮೀಗೆ ಶಾಕ್ ನೀಡಲು ಹೋಗಿ ಕೈಸುಟ್ಟುಕೊಂಡ ರಮೇಶ್ ಜಾರಕಿಹೊಳಿ
ಬೆಂಗಳೂರು, (ಡಿ.14): ಬೆಳಗಾವಿ ರಾಜಕಾರಣ (Belagavi Politics) ಅಂದ್ರೆ ಒಂದು ಖದರ್, ಗತ್ತು ಇರುತ್ತೆ. ಇಲ್ಲಿ ಕುಟುಂಬ ರಾಜಕಾರಣ ಬಹಳ ಸದ್ದು ಮಾಡುತ್ತದೆ. ಜಿಲ್ಲೆಯಲ್ಲಿ ಯಾವುದೇ ಒಂದು ಸಣ್ಣ ಎಲೆಕ್ಷನ್ ನಡೆದರೂ ಪ್ರತಿಷ್ಠಯಾಗಿರುತ್ತೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ರಾಜಕೀಯ ರಾಜ್ಯಟ್ಟದರೆಗೂ ಸುದ್ದಿಯಾಗುತ್ತೆ. ಇದೀಗ ವಿಧಾನರಪರಿಷತ್ ಚುನಾವಣೆಯಲ್ಲೂ ಅದೇ ಆಗಿದೆ.
ಹೌದು... ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ವಿಧಾನಪರಿಷತ್ (Belagavi MLC Election) ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ (BJP) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಸೋಲಾಗಿದೆ.ಇದು ರಾಜ್ಯ ಮಟ್ಟದಲ್ಲಿ ಪ್ರಭಾವ ಬೀರಿದೆ.
MLC Election Result:ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ
undefined
ಬಿಜೆಪಿ ಹಾಗೂ ಬೆಳಗಾವಿ(Belagavi) ಭಾಗದ ಪ್ರಭಾವಿ ನಾಯಕ ರಮೇಶ ಜಾರಕಿಹೊಳಿ(Ramesh Jarkiholi) ಸವಾಲನ್ನು ಎದುರಿಸಿಯೂ ಲಕ್ಷ್ಮೀ ಹೆಬ್ಬಾಳಕರ್(Laxmi Hebbalkar) ಗೆದ್ದು ಬೀಗಿದ್ದಾರೆ. ಈ ಫಲಿತಾಂಶ ಬಿಜೆಪಿ ನಾಯಕರಿಗೆ ಅಚ್ಚರಿ ಉಂಟುಮಾಡಿದೆ.
ಲಕ್ಷ್ಮೀಯನ್ನು ಸೋಲಿಸಲು ಹೋಗಿ ಬಿಜೆಪಿ ಬುಡಕ್ಕೆ ಬೆಂಕಿ
ಯೆಸ್...ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಈ ಚುನಾವಣೆಯಲ್ಲಿ ಸೋಲಿಸಲು ಹೋಗಿ ರಮೇಶ್ ಜಾರಕಿಹೊಳಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ(Mahantesh Kavatagimath) ಅವರನ್ನ ಬಲಿ ಪಡೆದುಕೊಂಡಿದ್ದು, ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ (Politics) ಗುದ್ದಾಟಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆಯ ಫಲಿತಾಂಶ ಎಲ್ಲಾ ಕ್ಷೇತ್ರಗಳಿಗಿಂತ ಅತಿ ಹೆಚ್ಚು ಮಹತ್ವ ಪಡೆದಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ಹೊರತಾಗಿಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರು. ಆದ್ರೆ, ಫಲಿತಾಂಶ ಬೇರೆಯೇ ಬಂದಿದೆ. ಇದರಿಂದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿಯೂ ಹಿನ್ನಡೆಯಾಗಿದೆ.
ರಮೇಶ್ ಜಾರಕಿಹೊಳಿ ಮೇಲೆ ಕ್ರಮವಾಗುತ್ತಾ?
ವಿಧಾನ ಪರಿಷತ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ರಮೇಶ್ ಜಾರಕಿಹೊಳಿ ನಿರ್ಧಾರ ಬಿಜೆಪಿಗೆ ಮುಳುವಾಗಿ ಪರಿಣಮಿಸಿದೆ. ತಮ್ಮ ಪ್ರತಿಷ್ಠಗಾಗಿ ಪಕ್ಷದ ಅಭ್ಯರ್ಥಿಯನ್ನು ಬಲಿ ಪಡೆದುಕೊಂಡ್ರು ಎನ್ನುವ ಮಾತುಗಳು ಬಿಜೆಪಿ ವಯದಲ್ಲಿ ಕೇಳಿಬರುತ್ತಿವೆ. ನಿಮ್ಮ ಸಹೋದರನನ್ನು ಕಣಕ್ಕಿಳಿಸುವುದು ಬೇಡ ಎಂದು ಬಿಜೆಪಿ ನಾಯಕರು ಪರಿಪರಿಯಾಗಿ ಬೇಡಿಕೊಂಡಿದ್ರು, ಆದ್ರೆ, ಅದ್ಯಾವುದಕ್ಕೆ ತಲೆಕೆಡಿಸಿಕೊಳ್ಳದ ರಮೇಶ್ ಜಾರಕಿಹೊಳಿ ತಮ್ಮ ಸಹೋದರ ಲಖನ್ ಅವರನ್ನ ಅಖಾಡಕ್ಕಿಳಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಚೆಕ್ ಚೆಕ್ ಮೇಟ್ ನೀಡಿದ್ರು, ಆದ್ರೆ, ರಿಸಲ್ಟ್ ಉಲ್ಟಾ ಹೊಡೆದಿದ್ದರಿಂದ ಸಾಹುಕಾರನಿಗೆ ಹಿನ್ನಡೆಯಾಗುವುದರ ಜೊತೆ ಬಿಜೆಪಿ ಸೋಲಿಗೆ ಕಾರಣರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ತೀವ್ರ ಕುತೂಹಲ ಮೂಡಿಸಿದ್ದ 25 ಸ್ಥಾನಗಳಿಗೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಇಂದು (ಡಿ.14) ಪ್ರಕರಣವಾಗಿದೆ. ಬಿಜೆಪಿ ಮೇಲುಗೈ ಸಾಧಿಸಿದ್ರೆ, ಕಾಂಗ್ರೆಸ್ ಭಾರೀ ಪೈಪೋಟಿ ನೀಡಿದೆ.ಬಿಜೆಪಿ 12,ಕಾಂಗ್ರೆಸ್ 11, ಜೆಡಿಎಸ್ 1 ಪಕ್ಷೇತರ 1 ಗೆಲುವು ಸಾಧಿಸಿದೆ.