* ಕರ್ನಾಟಕದಲ್ಲಿ ರಂಗೇರಿದ ವಿಧಾನಪರಿಷತ್ ಚುನಾವಣೆ ಕಾವು
* ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್
* ಮಲ್ಲಿಕಾರ್ಜುನ ಖರ್ಗೆಗೆ ಟ್ವೀಟ್ ಬಾಣ ಬಿಟ್ಟ ರಾಜ್ಯ ಬಿಜೆಪಿ
ಬೆಳಗಾವಿ, (ಡಿ.04): ಬಿಜೆಪಿ (BJP) ಪಕ್ಷದವರು ನನ್ನ ಸಂಪರ್ಕದಲ್ಲಿಯೂ ಇದ್ದು, ಆ ಪಕ್ಷದಲ್ಲಿ ಏನೇನು ನಡಿಯುತ್ತಿದೆ ಎಂದು ಅವರೇ ನನಗೆ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Habbalkar) ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು(ಶನಿವಾರ) ಚಿಕ್ಕೋಡಿಯ ಕಾಗವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh jarkiholi) ಹೇಳಿಕೆ ಸಂಬಂಧ ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಆ ಬಗ್ಗೆ ನಾನು ಏನೂ ಮಾತನಾಡಲು ಬಯಸುವುದಿಲ್ಲ'ಎಂದರು.
undefined
Karnataka Politics: ಬಿಎಸ್‌ವೈ ಮಹತ್ವದ ಸುಳಿವು, ಜಾರಕಿಹೊಳಿ, ಯತ್ನಾಳ್ ಹೇಳಿದ್ದು ನಿಜವಾಯ್ತಾ?
ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಸೋಲಿಸುವುದು ನಮ್ಮ ಗುರಿ ಎಂದು ಹೇಳುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದು, ಪಕ್ಷ ಇನ್ನೂ ಜೀವಂತವಾಗಿದೆ. ಮೊದಲು ಅವರು ತಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಆ ಬಳಿಕ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ಮಾಡಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ (MLC Election) ನಡೆಯಲಿರುವ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿ ಸ್ಥಳೀಯ ಸಂಸ್ಥೆಯ ಮತದಾರರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಖರ್ಗೆ ಟ್ವೀಟ್ ಬಾಣ ಬಿಟ್ಟ ಬಿಜೆಪಿ
ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಚಿನಿಂದ ಸೋತೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಈ ಸಂಬಂಧ ಸರಣಿ ಟ್ವೀಟ್ (Twee) ಮಾಡಿರುವ ಬಿಜೆಪಿ, ಮಾನ್ಯ ಖರ್ಗೆಯವರೇ, ನಿಮ್ಮ ಜಿಲ್ಲೆಯ ಗ್ರಾಮಗಳಿಗೆ ನೀರು, ರಸ್ತೆ ಸಂಪರ್ಕ ಕಲ್ಪಿಸುವುದಕ್ಕೆ ನಿಮಗಿನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗ ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುತ್ತೀರಿ. ಬಹುಶಃ ಈ ಭ್ರಮೆಯೂ ನಿದ್ರಾಹೀನತೆಯ ಸಮಸ್ಯೆ ಇರಬೇಕು. ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ ಎಂದು ಟಾಂಗ್ ಕೊಟ್ಟಿದೆ.
ಖರ್ಗೆಯವರೇ ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಿಮ್ಮ ಬಗ್ಗೆ ಒಂದು ಮಾತಿದೆ. ನಿಮಗೂ ಗೊತ್ತಿರಬಹುದು. ಖರ್ಗೆಯವರು ರಾಜಕೀಯಕ್ಕೆ ಬಂದಾಗಿನಿಂದ ಸರ್ಕಾರಿ ವೆಚ್ಚದಲ್ಲೇ ಬದುಕಿದ್ದು ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತದೆ. ಅಧಿಕಾರವಿಲ್ಲದೆ ಬದುಕು ಅಸಹನೀಯ ಅನ್ನಿಸುತ್ತಿರಬೇಕು, ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದು ಅದಕ್ಕಾಗಿಯಲ್ಲವೇ? ಖರ್ಗೆಯವರೇ, ನಿಮ್ಮ ಸೋಲಿಗೆ ನೀವು ಕೊಡುತ್ತಿರುವ ಕಾರಣ "ಪಿಳ್ಳೆ ನೆವ" ಎಂಬಂತಿದೆ ಎಂದು ವ್ಯಂಗ್ಯ ವಾಡಿದೆ.
ನಿಮ್ಮ ದುರಾಡಳಿತ, ಕುಟುಂಬ ರಾಜಕಾರಣ, ಪುತ್ರ ವ್ಯಾಮೋಹ, ಭ್ರಷ್ಟಾಚಾರದಿಂದ ರೋಸಿ ಹೋದ ಜನರು ನಿಮ್ಮನ್ನು ಸೋಲಿಸಿದ್ದರು. ಆ ಸೋಲಿಗೆ ನೀವು ಅನ್ಯರನ್ನು ಹೊಣೆಯಾಗಿಸಬೇಡಿ. ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಹಾಕುವುದೇ ಪ್ರತಿಸ್ಪರ್ಧಿಯನ್ನು ಸೋಲಿಸುವುದಕ್ಕೆ. ನೀವು ಈಗ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ. ನಾಳೆ ಆ ಅಭ್ಯರ್ಥಿ ಸೋತರೆ, ನಾನು ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ, ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ ಎಂದು ಬಿಜೆಪಿ ಲೇವಡಿ ಮಾಡಿದೆ.
ಖರ್ಗೆಯವರೇ ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಿಮ್ಮ ಬಗ್ಗೆ ಒಂದು ಮಾತಿದೆ. ನಿಮಗೂ ಗೊತ್ತಿರಬಹುದು.
ಖರ್ಗೆಯವರು ರಾಜಕೀಯಕ್ಕೆ ಬಂದಾಗಿನಿಂದ ಸರ್ಕಾರಿ ವೆಚ್ಚದಲ್ಲೇ ಬದುಕಿದ್ದು ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತದೆ.
ಅಧಿಕಾರವಿಲ್ಲದೆ ಬದುಕು ಅಸಹನೀಯ ಅನ್ನಿಸುತ್ತಿರಬೇಕು, ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದು ಅದಕ್ಕಾಗಿಯಲ್ಲವೇ?
ಮಾನ್ಯ ಖರ್ಗೆಯವರೇ,
ನೀವು ಈಗ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ.
ನಾಳೆ ಆ ಅಭ್ಯರ್ಥಿ ಸೋತರೆ, ನಾನು ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ.
ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ!
ಮಾನ್ಯ ಖರ್ಗೆಯವರೇ, ನಿಮ್ಮ ಜಿಲ್ಲೆಯ ಗ್ರಾಮಗಳಿಗೆ ನೀರು, ರಸ್ತೆ ಸಂಪರ್ಕ ಕಲ್ಪಿಸುವುದಕ್ಕೆ ನಿಮಗಿನ್ನೂ ಸಾಧ್ಯವಾಗಿಲ್ಲ.
ಹೀಗಿರುವಾಗ ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುತ್ತೀರಿ. ಬಹುಶಃ ಈ ಭ್ರಮೆಯೂ ನಿದ್ರಾಹೀನತೆಯ ಸಮಸ್ಯೆ ಇರಬೇಕು.
ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ.