MLC Elections Result: ರಾಜಕೀಯ ಇತಿಹಾಸದಲ್ಲೇ ದಾಖಲೆ ಬರೆದ ಹೊರಟ್ಟಿ

By Suvarna News  |  First Published Jun 15, 2022, 2:29 PM IST

* ಕರ್ನಾಟಕ ವಿಧಾನಪರಿಷತ್ ಚುನಾವಣೆ ಫಲಿತಾಂಶ
* ಹೊಸ ದಾಖಲೆ ಬರೆದ ಬಸವರಾಜ ಹೊರಟ್ಟಿ
* ಹೊರಟ್ಟಿ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ


ಬೆಳಗಾವಿ, (ಜೂನ್15): ಈ ಬಾರಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. 

ಈ ಬಾರಿ ಬಸವರಾಜ  ಹೊರಟ್ಟಿ ಅವರು ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದರು. ಇದೀಗ ಮತ್ತೊಮ್ಮೆ ಪರಿಷತ್‌ಗೆ ಪ್ರವೇಶ ಮಾಡಿದ ಹೊಸ ದಾಖಲೆ ಬರೆದಿದ್ದಾರೆ.

Tap to resize

Latest Videos

Karnataka MLC Election Results LIVE: ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಮತಪೆಟ್ಟಿಗೆಯಲ್ಲಿ ಹೆಚ್ಚುವರಿ 6 ಮತಗಳು!

ಮಾಹಿತಿ ಪ್ರಕಾರ 7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ  ಬಸವರಾಜ ಹೊರಟ್ಟಿ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ  ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 8ನೇ ಬಾರಿಗೆ ಗೆಲುವು ಸಾಧಿಸಿಸುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿಯೇ ದಾಖಲೆ‌ ನಿರ್ಮಿಸಿದ್ದೇನೆ.

ಇನ್ನು ಈ ಬಗ್ಗೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರತಿಕ್ರಿಯಿಸಿರುವ ಹೊರಟ್ಟಿ, 1890ರಿಂದ 2022 ರವರೆಗೆ ನಿರಂತರವಾಗಿ ಗೆಲುವು ಸಾಧಿಸಿದ್ದೇನೆ. ರಾಜಕೀಯದಲ್ಲಿ ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದು ಸಂತಸ ವ್ಯಕ್ತಪಡಿಸಿದರು,

ಚುನಾವಣೆಯಲ್ಲಿ ಚಲಾಯಿಸಿದ ಮತಗಳಲ್ಲಿ ಶೇ.50 ಮತ ಪಡೆದುಕೊಂಡವರು ಗೆಲುವು ಸಾಧಿಸಲಿದ್ದಾರೆ. ಈಗಾಗಲೇ ನಾನು 15 ಸಾವಿರ ಮತಗಳ ಪೈಕಿ 7500 ಮತಗಳನ್ನು ಪಡೆದು ಗೆದ್ದಿದ್ದೇನೆ ಎಂದು ಹೇಳಿದರು.

ಈ ಬಾರಿ ಚುನಾವಣೆಯಲ್ಲಿ 8 ರಿಂದ 10 ಸಾವಿರ‌ ಮತಗಳ ಬರುವ ನಿರೀಕ್ಷೆಯಿಟ್ಟುಕೊಳ್ಳಲಾಗಿತ್ತು. ಇದೀಗ 7 ಸಾವಿರ ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದೇನೆ. ಇನ್ನೂ 2 ಸಾವಿರ‌ ಮತಗಳು ಬರುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು(ಬುಧವಾರ) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಸಂಜೆ ಹೊತ್ತಿಗೆ ಅಧಿಕೃತ ಫಲಿತಾಂಶ ಹೊರಬರಲಿದೆ.

click me!