
ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಆದ್ರೆ, ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಈ ಬಗ್ಗೆ ಹೈಕಮಾಂಡ್ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಸಿಎಂ ಆಕಾಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಇನ್ನು ಕೆಲವರು ಸ್ವಾಮೀಜಿಗಳ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ.
ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ
ದೇಶಕ್ಕೆ ಮೋದಿ; ರಾಜ್ಯಕ್ಕೆ ಸವದಿ
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಚರ್ಚೆ ಹಿಂದೆಂದಿಗಿಂತಲೂ ಕಾವು ಪಡೆದುಕೊಂಡಿರುವ ಬೆನ್ನಲ್ಲೇ ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಮುಂದಿನ ಸಿಎಂ ಲಕ್ಷ್ಮಣ ಸವದಿ ಎಂಬ ಅವರ ಅಭಿಮಾನಿಗಳ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ದೇಶಕ್ಕೆ ಮೋದಿ, ರಾಜ್ಯಕ್ಕೆ ಸವದಿ ಎಂದು ಬರೆದಿರುವ ಚಿತ್ರಗಳನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆಂಬಲಿಗರು ಹರಿಬಿಟ್ಟಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬ ಪೋಸ್ಟ್‌ಗಳನ್ನು ವೈರಲ್ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.