
ಬೆಂಗಳೂರು(ಆ.06)ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 2 ತಿಂಗಳು ಕಳೆದರು ಪ್ರತಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಇತ್ತ ಲೋಕಸಭಾ ಚುನಾವಣಾ ದೃಷ್ಟಿಯಿಂದ ಹಲವು ರಾಜ್ಯಗಳಲ್ಲಿ ರಾಜ್ಯಧ್ಯಕ್ಷರನ್ನು ನೇಮಕ ಮಾಡಿದ್ದರೂ ಇತ್ತ ಕರ್ನಾಟಕದಲ್ಲಿ ಆಗಿಲ್ಲ. ಹೀಗಾಗಿ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಅಂತಿಮ ಕಸರತ್ತು ನಡೆಯುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಪ್ರತಿಪಕ್ಷ ನಾಯಕ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಬೊಮ್ಮಾಯಿ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಿರುವ ಬೊಮ್ಮಾಯಿ, ನಾಳೆ ಬೆಳಗ್ಗೆ ಅಮಿತ್ ಶಾ ಜೊತೆ ಮಾತುಕತೆ ನಡೆಸಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಯಲಿದೆ. ಬೊಮ್ಮಾಯಿಗೆ ಬುಲಾವ್ ನೀಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಶುರುವಾಗಿದೆ.
ಬಿಜೆಪಿ ಜತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ: ಕುಮಾರಸ್ವಾಮಿ ಸಡ್ಡು
ಲಿಂಗಾಯಿತ ಸಮುದಾಯವನ್ನು ಬಿಜೆಪಿ ಕಡೆಗಣಿಸುತ್ತಿದೆ ಅನ್ನೋ ಆರೋಪವನ್ನು ಕಾಂಗ್ರೆಸ್ ಮತ್ತೆ ಕೆದಕಿದೆ. ಇದರ ನಡುವೆ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ ಲಿಂಗಾಯಿತ ಸಮುದಾಯದ ಮತಗಳನ್ನು ಕ್ರೋಢಿಕರಿಸಲು ಬಿಜೆಪಿ ಮುಂದಾಗಿದೆ. ಜೊತೆಗೆ 2024ರ ಲೋಕಸಭೆ ದೃಷ್ಟಿಯಿಂದಲೂ ಬಿಜೆಪಿ ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಿದೆ. ಸದ್ಯದ 2 ತಿಂಗಳು ಬಿಜೆಪಿಗಿಂತ ಜೆಡಿಎಸ್ ದಳಪತಿ ಕುಮಾರಸ್ವಾಮಿ ಅಬ್ಬರಿಸುತ್ತಿದ್ದಾರೆ. ಹೆಚ್‌ಡಿಕೆ ಅಬ್ಬರದ ನಡುವೆ ಬಿಜೆಪಿ ಮಂಕಾದಂತೆ ಕಾಣುತ್ತಿದೆ.
ಬಸವರಾಜ್ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನೀಡುವ ಸಾಧ್ಯತೆ ಹೆಚ್ಚಿದೆ. ಇತ್ತ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಹೆಸರು ಕೇಳಿಬರುತ್ತಿದೆ. ಇದರಲ್ಲಿ ಸಿಟಿ ರವಿ ಮುಂಚೂಣಿಯಲ್ಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿಟಿ ರವಿಯನ್ನು ಮುಕ್ತಗೊಳಿಸಲಾಗಿದೆ. ಈ ನಡೆ ಬಳಿಕ ಸಿಟಿ ರವಿ ರಾಜ್ಯಾಧ್ಯಕ್ಷ ಅನ್ನೋ ಮಾತುಗಳು ಕೇಳಿಬರುತ್ತಿದೆ.
ಸಿಟಿ ರವಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಯಾವುದೇ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುತ್ತಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಾನು ಆ ಹುದ್ದೆಯ ಆಕಾಂಕ್ಷಿ ಅಲ್ಲ. ಅದು ಕೇಳಿ ಪಡೆಯುವಂಥದ್ದೂ ಅಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಎಲ್ಲರಿಂದಲೂ ವರ್ಗಾವಣೆ ದಂಧೆ: ಮಾಜಿ ಸಚಿವ ಅಶ್ವತ್ಥನಾರಾಯಣ
ನಾನೀಗ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಭವಿಷ್ಯದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಒಂದು ದೊಡ್ಡ ಜವಾಬ್ದಾರಿ. ಅದು ಕೇಳಿ ಪಡೆಯುವ ಸಂಗತಿ ಅಲ್ಲ. ಯಾರಿಗೆ, ಯಾವಾಗ ಕೊಡಬೇಕು ಎಂಬುದನ್ನು ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಎರಡು ಪ್ರಮುಖ ಸ್ಥಾನಗಳಿಗೆ ಅರ್ಹರನ್ನು ಆಯ್ಕೆ ಮಾಡಲು ಹಲವು ಸುತ್ತಿನ ಮಾತುಕತೆ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.