ಕರ್ನಾಟಕದಲ್ಲಿ ಮೇ 5ರ ನಂತರ ಕಾಂಗ್ರೆಸ್‌ ಸರ್ಕಾರ ಪತನ, 'ರಾಷ್ಟ್ರಪತಿ ಆಳ್ವಿಕೆ' ಜಾರಿ; ಶಾಸಕ ಸುರೇಶ್ ಗೌಡ ಹೊಸ ಬಾಂಬ್!

Published : Apr 24, 2026, 01:38 PM IST
Tumakuru MLA Suresh Gowda

ಸಾರಾಂಶ

ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟದಿಂದ ಪತನಗೊಂಡು, ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರು (ಏ.24): ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ತಿರುವುಗಳು ಸಿಗುತ್ತಿವೆ. ಗ್ಯಾರಂಟಿ ಯೋಜನೆಗಳ ಅಬ್ಬರದ ನಡುವೆಯೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಸ್ತಿತ್ವದ ಬಗ್ಗೆ ವಿರೋಧ ಪಕ್ಷದ ನಾಯಕರು ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈಗ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಮೇ 5ರ ನಂತರ ಕ್ರಾಂತಿ, ರಾಷ್ಟ್ರಪತಿ ಆಳ್ವಿಕೆ ಭವಿಷ್ಯ!

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುರೇಶ್ ಗೌಡ, "ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಕ್ರಾಂತಿಯಾಗಲಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದ ನಂತರ ಕರ್ನಾಟಕದಲ್ಲಿ ಅಲ್ಲೋಲ ಕಲ್ಲೊಲ ಸೃಷ್ಟಿಯಾಗಲಿದೆ. ಕಾಂಗ್ರೆಸ್ ಸರ್ಕಾರವು ಆಂತರಿಕ ಕಚ್ಚಾಟದಿಂದಾಗಿ ಪತನಗೊಳ್ಳಲಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದರೂ ಅಚ್ಚರಿಯಿಲ್ಲ" ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಪಂಚಕೋನ ಸ್ಪರ್ಧೆ?

ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆಯ ಕಿತ್ತಾಟದ ಬಗ್ಗೆ ವಾಗ್ದಾಳಿ ನಡೆಸಿದ ಸುರೇಶ್ ಗೌಡ, 'ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಮತ್ತು ಸಿದ್ದರಾಮಯ್ಯ ಅವರ ಆಪ್ತ ಬಳಗದ ಜೊತೆಗಿನ ಸಭೆಗಳನ್ನು ಗಮನಿಸಿದರೆ ಸರ್ಕಾರ ಸುಭದ್ರವಾಗಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅತ್ತ ಡಿಕೆಶಿ ನಾನು ಮುಖ್ಯಮಂತ್ರಿ ಆಗಬೇಕು ಎಂದು ತಯಾರಿ ನಡೆಸಿದ್ದಾರೆ. ಮೇ 10ನೇ ತಾರೀಖು ಅವರು ಸಿಎಂ ಆಗಲು ದಿನಾಂಕ ಕೂಡ ಫಿಕ್ಸ್ ಆಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇತ್ತ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜೊತೆ ಗುಪ್ತವಾಗಿ ಸಭೆ ನಡೆಸುತ್ತಿದ್ದಾರೆ' ಎಂದು ಲೇವಡಿ ಮಾಡಿದರು.

ಕೇವಲ ಸಿದ್ದರಾಮಯ್ಯ ಮತ್ತು ಡಿಕೆಶಿ ಮಾತ್ರವಲ್ಲದೆ, ಮುಖ್ಯಮಂತ್ರಿ ರೇಸ್‌ನಲ್ಲಿ ಹಲವು ನಾಯಕರಿದ್ದಾರೆ ಎಂದು ಸುರೇಶ್ ಗೌಡ ಪಟ್ಟಿ ಮಾಡಿದರು. 'ನಮ್ಮ ಜಿಲ್ಲೆಯ ಪರಮೇಶ್ವರ್ ಅವರು ನಾನು ಮುಖ್ಯಮಂತ್ರಿ ಆಗಬೇಕು ಎಂದು ಓಡಾಟ ನಡೆಸುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಮತ್ತು ಎಂಬಿ ಪಾಟೀಲ್ ಕೂಡ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈ ಆಂತರಿಕ ಕಚ್ಚಾಟವೇ ಸರ್ಕಾರಕ್ಕೆ ಮುಳುವಾಗಲಿದೆ' ಎಂದರು.

ಮತ್ತೆ ಚುನಾವಣೆ ನಡೆದರೆ ಮೈತ್ರಿಗೆ 175 ಸೀಟು!

ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ರೋಸಿ ಹೋಗಿದ್ದಾರೆ ಎಂದು ಕಿಡಿಕಾರಿದ ಸುರೇಶ್ ಗೌಡ, 'ಇವತ್ತು ರಾಜ್ಯದಲ್ಲಿ ಚುನಾವಣೆ ನಡೆದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 175ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ, ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಕೇವಲ ಕುರ್ಚಿ ಉಳಿಸಿಕೊಳ್ಳುವ ಆಟದಲ್ಲಿ ಸರ್ಕಾರ ಮಗ್ನವಾಗಿದೆ' ಎಂದು ಭವಿಷ್ಯ ನುಡಿದರು. ಶಾಸಕ ಸುರೇಶ್ ಗೌಡ ಅವರ ಈ ಹೇಳಿಕೆಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ನಾಯಕರು ಇದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆಯಾಗಿ ಮೇ 5ರ ನಂತರದ ರಾಜಕೀಯ ಬೆಳವಣಿಗೆಗಳ ಮೇಲೆ ಇಡೀ ರಾಜ್ಯದ ಕಣ್ಣು ನೆಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

West Bengal Elections ಮಮತಾ ಸರ್ಕಾರದ ಮೇಲೆ ಜನರಿಗೆ ಸಿಟ್ಟಿದೆ, ಅದಕ್ಕೇ ಇಷ್ಟೊಂದು ವೋಟಿಂಗ್: ಮಹಾರಾಷ್ಟ್ರ ಸಚಿವ ಸ್ಫೋಟಕ ಹೇಳಿಕೆ!
ಸಚಿವರ ಸಭೆ ಜನರಲ್ ಚೆಕಪ್ ಎಂದ ಸತೀಶ್ ಜಾರಕಿಹೊಳಿ ಸಂಪುಟ ಪುನರ್‌ ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೇಳಿದ್ದೇನು?