ಸುರೇಶ್ ಅಂಗಡಿ ಅವರ ಹಠಾತ್ ನಿಧನ ಎಲ್ಲರನ್ನೂ ದಿಗ್ಬ್ರಮೆಗೊಳಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಶಾಸಕರು ಮತ್ತು ಸಚಿವರುಗಳು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು, (ಸೆ.23): ಸದಾ ಲವಲವಿಕೆಯಿಂದ ಇರುತ್ತಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ.
undefined
ಕಳೆದ ಒಂದು ವಾರದಿಮದ ಕೊರೋನಾ ಸೋಂಕಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಅಂಗಡಿ, ಇಂದು (ಬುಧವಾರ) ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಚಿವ ಸುರೇಶ್ ಅಂಗಡಿ ನಿಧನ
ಇನ್ನೇನು ಅವರು ಗುಣಮುಖರಾಗಿ ಹೊರ ಬರುತ್ತಾರೆಂದು ಭಾವಿಸಲಾಗಿರುವುದರ ಮಧ್ಯೆ ನಡೆದಿರುವ ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.
ರಾಜ್ಯ ನಾಯರ ಸಂತಾಪ
ಸುರೇಶ್ ಅಂಗಡಿ ಅವರ ಸಾವಿಗೆ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಶಾಸಕರು ಮತ್ತು ಸಚಿವರುಗಳು ಸಂತಾಪ ಸೂಚಿಸಿದ್ದಾರೆ.
ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
"ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ." (1/2) pic.twitter.com/2pAWOB0A2Z
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ದಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು,
ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/Q4VQWBoKxp
ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ.
1/3
I am shocked and deeply saddened by the demise of Union Minister of State for Railways and four-term MP from Belagavi Shri. Suresh Angadi .
He was like a younger brother to me. I feel terrible losing him. This is an unbearable loss to our nation.
1/2
ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರು ಕೋವಿಡ್ ಸೋಂಕಿನಿಂದ ನಿಧನರಾದ ಸುದ್ದಿ ತೀವ್ರ ಆಘಾತ ನೀಡಿದೆ.
ಸದಾ ಉಲ್ಲಸಿತರಾಗಿ ಜನಸೇವೆಯಲ್ಲಿ ತೊಡಗಿದ್ದ ಸರಳ ವ್ಯಕ್ತಿತ್ವದ ಅವರ ಅಗಲಿಕೆ ರಾಷ್ಟ್ರಕ್ಕೆ ಮತ್ತು ಭಾರತೀಯ ಜನತಾ ಪಕ್ಷಕ್ಕೆ ತುಂಬಲಾರದ ನಷ್ಟ.1/2 pic.twitter.com/Fwo7fmU5Jv