
ಹೊಸಪೇಟೆ(ಆ.11): ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿರುವುದರ ವಿಜಯನಗರದ ರಾಣಿ ಪೇಟೆಯಲ್ಲಿರುವ ಅವರ ಶಾಸಕರ ಕಚೇರಿಯ ಫಲಕವೂ ತೆರವುಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ಜತೆಗೆ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.
ತಮಗೆ ನೀಡಿರುವ ಅರಣ್ಯ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್ ಅವರು ಈ ಸಂಬಂಧ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಖುದ್ದು ಭೇಟಿಯಾಗಿ ಚರ್ಚಿಸಿದ್ದರು. ಈ ಮಧ್ಯೆ, ಮಂಗಳವಾರ ದಿಢೀರ್ ಆಗಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಹರಿದಾಡುತ್ತಿದ್ದಂತೆ ಸಂಜೆ 5.30ರ ವೇಳೆಗೆ ವಿಜಯನಗರದಲ್ಲಿರುವ ಅವರ ಕಚೇರಿಯಲ್ಲಿ ‘ಶಾಸಕರ ಕಾರ್ಯಾಲಯ’ ಎಂದು ದೊಡ್ಡ ಅಕ್ಷರಗಳಲ್ಲಿದ್ದ ಬೋರ್ಡ್ ಅನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ತಮ್ಮ ಹಳೆಯ ಮನೆಯಲ್ಲೇ ಶಾಸಕರ ಕಚೇರಿ ಮಾಡಿಕೊಂಡಿದ್ದ ಆನಂದ್ ಸಿಂಗ್ ಇದೀಗ ದಿಢೀರ್ ಆಗಿ ಬೋರ್ಡ್ ತೆರವುಗೊಳಿಸಿರುವುದು ಕಾರ್ಯಕರ್ತರು, ಬೆಂಬಲಿಗರಲ್ಲಿ ಅಚ್ಚರಿ, ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಕೆಲ ಮುಖಂಡರು ಅವರನ್ನು ಭೇಟಿ ಮಾಡಲು ಮುಂದಾದರೂ ಅವರು ಯಾರ ಸಂಪರ್ಕಕ್ಕೂ ಸಿಗಲಿಲ್ಲ.
ವಿಜಯನಗರದ ರಾಣಿಪೇಟೆಯಲ್ಲಿರುವ ಆನಂದ್ ಸಿಂಗ್ ಅವರ ಕಾರ್ಯಾಲಯದ ಬೋರ್ಡ್ ಅನ್ನು ಮಂಗಳವಾರ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.