ಸಿದ್ದು ಜೊತೆ ಮುನಿಸು, ಕಾಂಗ್ರೆಸ್‌ಗೆ ಗುಡ್‌ಬೈ ಹೇಳ್ತಾರಾ ಹೆಚ್.ಸಿ ಮಹದೇವಪ್ಪ? ಸಂಸದ ಮಹತ್ವದ ಹೇಳಿಕೆ!

Published : Oct 31, 2026, 12:35 PM IST
Karnataka Politics updates

ಸಾರಾಂಶ

ಸಚಿವ ಹೆಚ್.ಸಿ ಮಹದೇವಪ್ಪ ಕಾಂಗ್ರೆಸ್ ತೊರೆದು ಬಿಜೆಪಿ-ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಗಳನ್ನು ಅವರ ಪುತ್ರ, ಸಂಸದ ಸುನೀಲ್ ಬೋಸ್ ತಳ್ಳಿಹಾಕಿದ್ದಾರೆ. ತಮ್ಮ ತಂದೆ ಕಾಂಗ್ರೆಸ್ ಪಕ್ಷದಿಂದಲೇ ಟಿ. ನರಸೀಪುರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರು ಅ.31): ನಮ್ಮ ತಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡೊಲ್ಲ. ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ಸ್ಪಷ್ಟಪಡಿಸಿದರು.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದ ಬಳಿಕ ಕುಚಿಕು ಗೆಳೆಯರಿಂತಿದ್ದ ಸಿದ್ದರಾಮಯ್ಯ ಹೆಚ್‌ಸಿ ಮಹದೇವಪ್ಪ ನಡುವೆ ಅಂತರ ಹೆಚ್ಚಾಗಿದೆ ಎಂಬ ವಿಚಾರಕ್ಕೆ ನಂಜನಗೂಡಿನಲ್ಲಿ ಸಂಸದರು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಪಕ್ಷ ತಮ್ಮ ತಂದೆಗೆ ಅನ್ಯಾಯ ಮಾಡಿಲ್ಲ

ಕಾಂಗ್ರೆಸ್ ಪಕ್ಷದಿಂದ ನಮ್ಮ ತಂದೆ ಮಹದೇವಪ್ಪ ಅವರು ಎರಡು ಬಾರಿ ಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಯಾವತ್ತೂ ನಮ್ಮ ತಂದೆಗೆ ಅನ್ಯಾಯ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಜೊತೆಗೂಡಿ ನಂಜನಗೂಡಿನಲ್ಲಿ ಮಹದೇವಪ್ಪ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೆಲ್ಲ ಊಹಾಪೋಹ. ಇವೆಲ್ಲ ಸುಳ್ಳು ಸುದ್ದಿ ಎಂದು ತಳ್ಳಿಹಾಕಿದರು.

ನಂಜನಗೂಡು ಅಲ್ಲ ನರಸೀಪುರದಿಂದಲೇ ಸ್ಪರ್ಧೆ!

ವಿರೋಧಿಗಳು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ನಂಜನಗೂಡಿನಿಂದ ನಮ್ಮ ತಂದೆ ಸ್ಪರ್ಧಿಸುವುದಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷದಿಂದಲೇ ನರಸೀಪುರದಲ್ಲಿ ಸ್ಪರ್ಧಿಸಲಿದ್ದಾರೆ ಎಂದರು. ಇದೇ ವೇಳೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಪ್ರಸ್ತಾಪಿಸಿದ ಸಂಸದರು. ಬಿಜೆಪಿ-ಜೆಡಿಎಸ್ ಮೈತ್ರಿ ಮುಂದಿನ ದಿನಗಳಲ್ಲಿ ಯಾವ ದಿಕ್ಕಿಗೆ ತಲುಪಲಿದೆಯೋ ಗೊತ್ತಿಲ್ಲ. ಅವರ ನಡೆವಳಿಕೆಗಳು ಆ ರೀತಿ ಇವೆ. ಹೀಗಾಗಿ ರಾಜಕೀಯ ಧ್ರುವೀಕರಣ ಏನಿದ್ರೂ 2027 ರ ನಂತ್ರ ಆಗಬಹುದು. ಸದ್ಯಕ್ಕಂತೂ ಯಾರೂ ರಾಜೀನಾಮೆ ನೀಡಿ ಚುನಾವಣೆ ಎದುರಿಸುವ ಲಕ್ಷಣ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯೋತ್ಸವ ದಿನದಂದೇ ದೆಹಲಿಯಲ್ಲಿ ಪ್ರತಿಭಟನೆ: ರಾಹುಲ್ ಗಾಂಧಿ ಕೈನಲ್ಲೇ ಕಾಂಗ್ರೆಸಿನ ಅಂತ್ಯ ಎಂದ ಛಲವಾದಿ!
Save Democracy.. ಜೆನ್‌-ಜಿ ಯುವಕರನ್ನ ಸೆಳೆಯಲು ಬಿಜೆಪಿ ಹೊಸ ತಂತ್ರ! ನವೆಂಬರ್ ಪೂರ್ತಿ ನಡೆಯಲಿದೆ ಈ ಅಭಿಯಾನ