ಎಸ್ಸಿ ಒಳ ಮೀಸಲಾತಿ ಜಾರಿಗೆ ಸಂವಿಧಾನದ ತಿದ್ದುಪಡಿ ನೆಪ ಹೇಳಬೇಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

By Sathish Kumar KH  |  First Published Aug 4, 2024, 1:19 PM IST

ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವುದಕ್ಕೆ ಸಂವಿಧಾನದ ತಿದ್ದುಪಡಿ ನೆಪ ಹೇಳಿದರೆ, ಈ ಸಮುದಾಯಗಳಿಗೆ ಮೂಗಿಗೆ ತುಪ್ಪ ಸವರಿದಂತಾಗುತ್ತದೆ. 


ಬೆಂಗಳೂರು (ಆ.04): ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಂಡರೆ ಆ ಸಮುದಾಯಗಳಿಗೆ ನ್ಯಾಯ ನೀಡಿದಂತಾಗುತ್ತದೆ. ಮತ್ತೆ ಸಂವಿಧಾನದ 341ನೇ ಕಲಂ ತಿದ್ದುಪಡಿ ನೆಪ ಹೇಳಿದರೆ, ಈ ಸಮುದಾಯಗಳಿಗೆ ಮೂಗಿಗೆ ತುಪ್ಪ ಸವರಿದಂತಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಕುರಿತು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮಾದರ ಚನ್ನಯ್ಯ ಗುರು ಪೀಠದ ಪೀಠಾಧ್ಯಕ್ಷ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ನೇತೃತ್ವದಲ್ಲಿ ಎಸ್ಸಿ ಸಮುದಾಯದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇತ್ತೀಚೆಗೆ ಸುಪ್ರೀ ಕೋರ್ಟ್ ನ ಏಳು ಜನ ನ್ಯಾಯಾಧೀಶರನ್ನೊಳಗೊಂಡ ಸಂವಿಧಾನಿಕ ಪೀಠ ಒಳ ಮೀಸಲಾತಿ ಕುರಿತು ಬಹಳ ಸ್ವಷ್ಟವಾದ ತೀರ್ಪು ನೀಡಿದೆ. ಈ ಜಿಜ್ಞಾಸೆ ಬಹಳ ದಿನಗಳಿಂದ ಇದೆ. ಎಲ್ಲ ರಾಜ್ಯಗಳಲ್ಲಿ ವಿಶೇಷವಾಗಿ ನಮಗೆ ಮೀಸಲಾತಿ ಇದ್ದರೂ ನ್ಯಾಯ ಸಿಗುತ್ತಿಲ್ಲ ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮೂರು ದಶಕಗಳಿಂದ ಬಹಳ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿತ್ತು.

Tap to resize

Latest Videos

ಇದರ ಜೊತೆಗೆ ಐದು ಜನ ನ್ಯಾಯಾಧೀಶರ ಎರಡು ಪೀಠಗಳ ತೀರ್ಪು ಬಂದಿದ್ದವು. ಒಂದು ಸಂವಿಧಾನ ತಿದ್ದುಪಡಿ ಇಲ್ಲದೇ ಒಳ ಮೀಸಲಾತಿ ನೀಡಬಹುದು ಎಂದು ನ್ಯಾ. ಅರುಣ್ ಮಿಶ್ರಾ ಅವರು ತೀರ್ಪು ನೀಡಿದ್ದರು. ನ್ಯಾ. ಸಂತೋಷ್ ಹೆಗಡೆ ಅವರು 2004 ರಲ್ಲಿ ಒಳ ಮೀಸಲಾತಿ ಬೇಡ ಅಂತ ಹೇಳಿರಲಿಲ್ಲ. ಆದರೆ, ಸಂವಿಧಾನ ತಿದ್ದುಪಡಿ ಅಗತ್ಯವಿದೆ ಎಂದು ತೀರ್ಪು ಕೊಟ್ಟಿದ್ದರು. ಈ ಎರಡೂ ತೀರ್ಪಿನ ನಡುವೆ ಜಿಜ್ಞಾಸೆಯಾಯಿತು. ಈ ಹಿನ್ನೆಲೆಯಲ್ಲಿ ಸರ್ಕಾರಗಳ ನಡುವೆ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿತ್ತು. ಅದನ್ನು ಸ್ಪಷ್ಟಪಡಿಸುವ ಕಾನೂನಾತ್ವಕ ವಿಚಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ತು ಎಂದು ಹೇಳಿದರು.

ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು: ಸಂಸದ ಶೆಟ್ಟರ್

ನಾವು ಹಲವಾರು ಕ್ರಾಂತಿಕಾರಿಯಾದ ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ. ನಾವು ಸಂವಿಧಾನ ಬದ್ದವಾಗಿಯೇ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿಯೇ ನಾವು ವಿಧಾನಸಭೆಯಲ್ಲಿಯೇ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಸ್ಸಿ ಸಮುದಾಯಕ್ಕೆ ಶೇ 15 ರಿಂದ 17 % ಹಾಗೂ ಎಸ್ಟಿ ಸಮುದಾಯಕ್ಕೆ ಶೇ 3 ರಿಂದ ಶೇ 7 ಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅದು ಕೂಡ ಬರುವ ದಿನಗಳಲ್ಲಿ ಸಂಸತ್ತಿನಲ್ಲಿಯೂ ಚರ್ಚೆಯಾಗಿ ಇತ್ಯರ್ಥಕ್ಕೆ ಬರುವ ಸಂದರ್ಭ ಇದೆ. ಅದೇ ಹಿನ್ನೆಲೆಯಲ್ಲಿ ಒಳ ಮೀಸಲಾತಿಯನ್ನು ಯಾವ ರೀತಿ ಮಾಡಬೇಕು ಎಂದು ಶಿಫಾರಸ್ಸು ಮಾಡಿದ್ದೇವೆ. ಅದೇ ತತ್ವದಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಸಂದರ್ಭದಲ್ಲಿ ನಾವು ಉಳಿದ ಎಸ್ಸಿ ಎಸ್ಟಿ ಸಮುದಾಯಗಳಿಗೂ ನಾವು ನ್ಯಾಯ ಕೊಟ್ಟಿದ್ದೇವೆ. ಭೋವಿ, ಲಂಬಾಣಿ, ಕೊರಚ, ಕೊರಮ ಸಮುದಾಯಗಳಿಗೂ ಮೀಸಲಾತಿ ಹೆಚ್ಚಳ ಮಾಡಿ ನ್ಯಾಯ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ಐದು ಸಮುದಾಯಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಬೇಕು ಎಂದು ಕಾಂಗ್ರೆಸ್ ಬೆಂಬಲಿಗರು ಸುಪ್ರೀಂ ಕೋರ್ಟ್ ಗೆ  ಹೋಗಿದ್ದರು. ಕೋರ್ಟ್ ಎಸ್ಸಿ ಆಯೋಗಕ್ಕೆ ಸ್ಪಷ್ಟಣೆ ಕೇಳಿತ್ತು, ಆಯೋಗ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿತ್ತು. ಆದರೆ, ಯಾವುದೇ ಸರ್ಕಾರ ಅದರ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಂಡಿರಲಿಲ್ಲ. ನಾವು ಸ್ಪಷ್ಟ ನಿಲುವು ತೆಗೆದುಕೊಂಡು, ಮೈಸೂರು ಮಹಾರಾಜರ ಕಾಲದಿಂದಲೂ ಈ ಸಮುದಾಯಗಳು ಎಸ್ಸಿ ಸಮುದಾಯದಲ್ಲಿ ಇರುವುದರಿಂದ ಎಲ್ಲಿಯವರೆಗೂ ಮೀಸಲಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೂ ಲಂಬಾಣಿ, ಭೋವಿ, ಕೊರಚ, ಕೊರಮ, ಭಜಂತ್ರಿ ಸಮುದಾಯಗಳು ಮೀಸಲಾತಿಯಲ್ಲಿ ಮುಂದುವರೆಯುತ್ತವೆ ಎಂದು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಪರೀಕ್ಷೆಯಲ್ಲಿ ನಕಲು ಮಾಡ್ತೀರಾ ಅಂತ ಏಳು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

ಈ ಸಮುದಾಯಗಳಲ್ಲಿಯೂ ಪ್ರತಿಭೆ ಇದೆ. ಅವರಿಗೆ ಅವಕಾಶ ಕೊಡಬೇಕಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವರಿಗೆ ಹೆಚ್ಚಿನ ಅವಕಾಶ ಸಿಕ್ಕರೆ ಸಂಪೂರ್ಣ ಭಾರತದ ಅಭಿವೃದ್ಧಿಯಾಗುತ್ತದೆ. ಈ ಸಮುದಾಯಗಳು ಅಭಿವೃದ್ಧಿ ಹೊಂದಿದಾಗ ಸ್ವಾವಲಂಬನೆಯ ಸ್ವಾಭಿಮಾನದ ಬದುಕು ನಡೆಸಿದಾಗ ಸಂಪೂರ್ಣ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ. ಅಂಬೇಡ್ಕರ್ ಅವರ ಮನದಾಳದ ಇಂಗಿತದಂತೆ ಅವರು ಸಂವಿಧಾನದಲ್ಲಿ 341ನೇ ಕಲಂ ಅಳವಡಿಸಿದ್ದರು. ಅಂಬೇಡ್ಕರ್ ಅವರ ಚಿಂತನೆಗೆ ಇವತ್ತಿನ ಕಾಲದಲ್ಲಿ ಬೆಲೆ ಸಿಕ್ಕಿದೆ. ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಯಶಸ್ವಿಯಾಗಿದೆ. ಅದಕ್ಕಾಗಿ ಸುಪ್ರೀಂ ಕೊರ್ಟ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

click me!