ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ’ ಎಂಟ್ರಿ..!| ಮಾಜಿ IPS ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ| ಬಿಜೆಪಿ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ| ಸುವರ್ಣ ನ್ಯೂಸ್ ಗೆ ಅಣ್ಣಾಮಲೈ ಸ್ಪಷ್ಟನೆ
ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ನೀಡುವುದಾಗಿ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಆದರೀಗ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಪಕ್ಷ ಸೇರಲಿದ್ದಾರೆ.
ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ಪ್ರವೇಶ!
undefined
ಈ ಸಂಬಂಧ ಸುವರ್ಣ ನ್ಯೂಸ್ಸ್‌ಗೆ ಸ್ಪಷ್ಟನೆ ನೀಡಿರುವ ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯವಾದಿ ಪಕ್ಷ, ನಾನೂ ರಾಷ್ಟ್ರೀಯವಾದಿ. ಬಿಜೆಪಿ ತಮಿಳುನಾಡು ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿದೆ ಎಂದಿದ್ದಾರೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಸ್ಪರ್ಧಿಸಲಿದ್ದು, ಈಗಾಗಲೇ ಚುನಾವಣಾ ಸಿದ್ಧತೆಯನ್ನೂ ಆರಂಭಿಸಿದ್ದಾರೆ. ಅಲ್ಲದೇ ಈಗಾಗಲೇ ದೆಹಲಿ ತಲುಪಿದ್ದಾರೆ.
ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ. pic.twitter.com/iDqL3SEoaf
ಸಚಿವ ಡಾ. ಕೆ. ಸುಧಾಕರ್ ಕೂಡಾ ಈ ಸಂಬಂಧ ಟ್ವೀಟ್ ಮಾಡಿದ್ದು, ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದಾರೆ.
ಕರ್ನಾಟಕದಲ್ಲಿ ಯಾಕೆ ಚುನಾವಣೆಗೆ ನಿಲ್ತಿಲ್ಲ ಅಣ್ಣಾಮಲೈ?
ಅಣ್ಣಾಮಲೈ ಮೂಲತಃ ತಮಿಳುನಾಡಿನ ಕರೂರು ಜಿಲ್ಲೆಯವರು. 2011ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಅವರು 2019 ಮೇ 28ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಡುಪಿ-ಚಿಕ್ಕಮಗಳೂರು ಎಸ್ಪಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದರು. ತಮ್ಮ ಸೇವಾ ಅವಧಿಯಲ್ಲಿ ಅಪರಾಧಿಗಳಲ್ಲಿ ನಡುಕ ಹುಟ್ಟಿಸಿದ್ದರು.