ರಾಜ್ಯದಲ್ಲಿ 18500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Published : Oct 07, 2025, 09:26 AM IST
Madhu Bangarappa

ಸಾರಾಂಶ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಮಂಗಳೂರು (ಅ.07): ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ, ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕಾತಿ ನಡೆಯಲಿದೆ. ನ್ಯಾ. ನಾಗಮೋಹನ್‌ದಾಸ್‌ ಅವರ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕ ಮಾತ್ರ ಆಗಿತ್ತು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದಿದೆ. ಈಗ ಮತ್ತೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದರು.

ಮಕ್ಕಳ ಫಲಿತಾಂಶ ಏರಿಕೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಗೆ 3 ಸ್ತರದ ಪರೀಕ್ಷಾ ಪದ್ಧತಿ ಅಳವಡಿಸಿದ್ದರಿಂದ ಮಕ್ಕಳ ಫಲಿತಾಂಶವನ್ನು ಉತ್ತಮಪಡಿಸಲು ಸಾಧ್ಯವಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2ನೇ ಮತ್ತು 3ನೇ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 1,16,000 ಮಕ್ಕಳು ಉತ್ತೀರ್ಣರಾಗಿದ್ದು, ಪಿಯುಸಿಯಲ್ಲಿ 56,000ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಅವಕಾಶ ದೊರೆಯಿತು. ಈ ಪರೀಕ್ಷಾ ವ್ಯವಸ್ಥೆಯನ್ನು ಉಚಿತವಾಗಿ ಮಾಡುವ ಮೂಲಕ ಬಡ, ಹಿಂದುಳಿದ ಮಕ್ಕಳಿಗೆ ಭವಿಷ್ಯ ರೂಪಿಸಲು ಅನುವು ಮಾಡಿಕೊಡಲಾಗಿದೆ. ಈ ಮಾದರಿಯನ್ನು ಕೇಂದ್ರ ಸರ್ಕಾರ ಕಾಪಿ ಮಾಡಲು ಹೊರಟಿದೆ ಎಂದು ಹೇಳಿದರು.

ಮೋದಿಯ ಜಾತಿ ಗಣತಿ ವಿರೋಧಿಸ್ತಾರಾ?: ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷ ಬಿಜೆಪಿಯವರು ಬಲವಾಗಿ ವಿರೋಧಿಸಿದ್ದರು. ಈಗ ಮೋದಿ ಕೂಡ ಗ್ಯಾರಂಟಿ ನಕಲು ಮಾಡಿದ್ದರಿಂದ ರಾಜ್ಯ ಬಿಜೆಪಿಯವರು ಸುಮ್ಮನಾಗಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡುತ್ತೇವೆ ಎಂದಾಗ ಸಮೀಕ್ಷೆಗೆ ಸಹಕರಿಸದಂತೆ ಬಿಜೆಪಿ ನಾಯಕರು ವಿರೋಧಿಸಿದರು. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಾರಾ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಮುಖಂಡರಾದ ಪದ್ಮರಾಜ್‌, ಶುಭೋದಯ ಆಳ್ವ, ಪದ್ಮನಾಭ ಕೋಟ್ಯಾನ್‌, ಟಿ.ಕೆ. ಸುಧೀರ್‌, ನೀರಜ್‌ಪಾಲ್‌ ಮತ್ತಿತರರಿದ್ದರು.

8ರಂದೇ ಶಾಲೆ ಪುನಾರಂಭ: ಮಧು ಬಂಗಾರಪ್ಪ ಸ್ಪಷ್ಟನೆ

ದಸರಾ ರಜೆ ಮುಗಿದು ಶಾಲೆಗಳು ಅ.8ರಿಂದ ಪುನಾರಂಭಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದ ಸಚಿವ ಮಧು ಬಂಗಾರಪ್ಪ, ಸಮೀಕ್ಷೆ ಕಾರ್ಯ ಎಷ್ಟು ಪೂರ್ತಿಯಾಗಿದೆ ಎಂಬುದನ್ನು ನೋಡಿಕೊಂಡು ಆಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ. ಅದರ ಮೇರೆಗೆ ಮಕ್ಕಳ ಪಾಠ- ಚಟುವಟಿಕೆಗಳಿಗೆ ತೊಂದರೆ ಆಗದಂತೆ ಯಾವ ರೀತಿಯಲ್ಲಿ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ನಿರ್ಧರಿಸಲಿದೆ. ಈ ಕುರಿತು ಶಿಕ್ಷಕರ ಸಂಘದ ಜತೆ ಮಾತುಕತೆ ನಡೆಸಿ ಮುಂದುವರಿಯಲಾಗುವುದು. ಶೇ. 95ರಷ್ಟು ಶಿಕ್ಷಕರು ಸಮೀಕ್ಷೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸರ್ಕಾರದಿಂದ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯದ ಹಂಚಿಕೆಗಾಗಿ ನಡೆಯುತ್ತಿರುವ ಸಮೀಕ್ಷೆಗೆ ಎಲ್ಲರ ಸಹಕಾರ ಅಗತ್ಯವಿದೆ. ದ.ಕ.ದ ಮಂಗಳೂರು ನಗರ ಮತ್ತು ಉಡುಪಿಯಲ್ಲಿ ತಾಂತ್ರಿಕ ಕಾರಣದಿಂದ ಸಮೀಕ್ಷೆ ವಿಳಂಬವಾಗಿದೆ. ರಾಜ್ಯದಲ್ಲಿ ಭಾನುವಾರದವರಗೆ ಒಟ್ಟು ಶೇ.71.5ರಷ್ಟು ಸಮೀಕ್ಷೆ ನಡೆದಿದೆ. ಬಿಜೆಪಿ ಎಷ್ಟೇ ವಿರೋಧ ಮಾಡಿದರೂ ಜನರು ಸರ್ಕಾರದ ಜತೆ ಸ್ಪಂದಿಸಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ