ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ನಡೆಸಿರುವ ಹಣ ದುರುಪಯೋಗ ಹಾಗೂ ಮೈಸೂರು ಮುಡಾ ಹಗರಣದ ಬಗ್ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ಗಾಂಧಿ ಸೌಂಡ್‌ಲೆಸ್ ಆಗಿದ್ದರೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಯ್ಸ್‌ಲೆಸ್ ಆಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.
ಮಂಡ್ಯ (ಆ.09): ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ನಡೆಸಿರುವ ಹಣ ದುರುಪಯೋಗ ಹಾಗೂ ಮೈಸೂರು ಮುಡಾ ಹಗರಣದ ಬಗ್ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ಗಾಂಧಿ ಸೌಂಡ್‌ಲೆಸ್ ಆಗಿದ್ದರೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಯ್ಸ್‌ಲೆಸ್ ಆಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.
ಖರ್ಗೆ(Mallikarun kharge) ಮತ್ತು ರಾಹುಲ್(Rahul gandhi) ಅಂತಾರಾಷ್ಟ್ರೀಯ ಬೆಳವಣಿಗೆಗಳ ವಿಚಾರವಾಗಿ ಮಾತನಾಡುತ್ತಾರೆ. ಆದರೆ, ಕಾಂಗ್ರೆಸ್ ಸರ್ಕಾರ ನಡೆಸಿರುವ ಹಗರಣಗಳ ಬಗ್ಗೆ ಬಾಯಿ ಬಿಡುವುದಿಲ್ಲ. ಕರ್ನಾಟಕದಲ್ಲಿ ನಡೆದಿರುವ ಹಣದ ಲೂಟಿಯಲ್ಲಿ ಹೈಕಮಾಂಡ್(Congress highcommand) ಪಾಲೂ ಇದೆ ಎಂದಂತಾಗಿದೆ. ಭ್ರಷ್ಟಾಚಾರಕ್ಕೆ ಕೈಕಮಾಂಡ್ ಬೆಂಬಲವಾಗಿ ನಿಂತಿರುವುದು ಅವರ ಮೌನದಿಂದಲೇ ತಿಳಿಯುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಕುಟುಕಿದರು.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಬೇಕಾದಕ್ಕೆಲ್ಲಾ ಬಳಸಿಕೊಳ್ಳಬಹುದು ಎಂಬುದಕ್ಕಾಗಿಯೇ ಯೋಜನೆ ರೂಪಿಸಿದರೇ. ಹಾಗಾದರೆ ಆ ಯೋಜನೆ ಇರೋದು ದಲಿತರ ಉದ್ಧಾರಕ್ಕಲ್ಲ. ವಾಲ್ಮೀಕಿ ನಿಗಮ ಇರುವುದು ಆ ಸಮುದಾಯದವರ ಅಭಿವೃದ್ಧಿಗಲ್ಲ. ಯೋಜನೆಗಳ ಹೆಸರಿನಲ್ಲಿ ಇವರು ಕೊಳ್ಳೆ ಹೊಡೆಯುವುದಕ್ಕಾ ಇರೋದು ಎಂದು ಪ್ರಶ್ನಿಸಿದರು.
ದೆಹಲಿ ಹೈಕಮಾಂಡ್‌ನಿಂದ ನಮ್ಮ ತಂದೆಗೆ ಕ್ಲೀನ್‌ಚಿಟ್ ಸಿಕ್ಕಿದೆ: ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಬಿಜೆಪಿ-ಜೆಡಿಎಸ್‌ನವರದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ ಎಂದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಗಳಿಸಿರುವ ಪುಣ್ಯ ಎಷ್ಟು ಎನ್ನುವುದನ್ನು ಅವರ ಆ ದಿನಗಳ ಟ್ರ್ಯಾಪ್ ರೆಕಾರ್ಡ್ಸ್ ಹೇಳುತ್ತವೆ. ಅವರು ಗಳಿಸಿದ ಪುಣ್ಯದಿಂದಲೇ ತಿಹಾರ್ ಜೈಲ್‌ಗೆ ಹೋಗಿ ಬಂದಿದ್ದಾರೆ. ಇನ್ನೂ ಬೇಲ್ ಮೇಲೆ ಓಡಾಡುತ್ತಿದ್ದಾರೆ ಎಂದು ಮಾತಿನ ಈಟಿಯಿಂದ ತಿವಿದರು.