ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಬಿಎಸ್‌ವೈ ಪರ ಅಖಾಡಕ್ಕಿಳಿದ ಮಠಾಧೀಶರು

By Suvarna News  |  First Published Aug 2, 2020, 3:16 PM IST

ರಾಜ್ಯದಲ್ಲಿ ಯಡಿಯೂರಪ್ಪ ಅವರ ಬದಲಿಗೆ ಬೇರೆ ನಾಯಕ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಆದ್ರೆ, ಮತ್ತೊಂದೆಡೆ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪರ ನಿಂತಿದ್ದಾರೆ. 


ಬೆಂಗಳೂರು, (ಆ.02): ರಾಜ್ಯ ಬಿಜೆಪಿಯಲ್ಲಿ ನಾಯಕಯತ್ವ ಬದಲಾವಣೆ ಚರ್ಚೆ ತೀವ್ರಗೊಳ್ಳುತ್ತಿದ್ದು, ಬಿಎಸ್‌ವೈ ಸರ್ಕಾರಕ್ಕೆ ಒಂದು ವರ್ಷ ಆಗುತ್ತಿದ್ದಂತೆ ಸಿಎಂ ಬದಲಾವಣೆಯ ಮಾತು ಮುನ್ನೆಲೆಗೆ ಬಂದಿದೆ. 

ಪಕ್ಷದಲ್ಲಿ ಆಂತರಿಕವಾಗಿ ಈ ವಿಚಾರ ಭಾರೀ ಸದ್ದು ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷಗಳ ಬಳಿಕ ನಾಯಕತ್ವ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಬಿ.ಎಸ್‌ ಯಡಿಯೂರಪ್ಪ ಅಧಿಕಾರ ಹಸ್ತಾಂತರದ ಮಾತುಕತೆಯೂ ನಡೆದಿತ್ತು ಎನ್ನಲಾಗಿದೆ. 

Tap to resize

Latest Videos

ಯಡಿಯೂರಪ್ಪಗೆ ಕೌಂಟರ್ ಕೊಡೋಕೆ ಡಿಸಿಎಂಗಳನ್ನ ಮಾಡಿದ್ದು: ಜಾರಕಿಹೊಳಿ

ಇದರ ಪರಿಣಾಮವಾಗಿಯೇ ಈ ಚರ್ಚೆಗಳು ಶುರುವಾಗಿದೆ. ಆದರೆ ಬಿಎಸ್‌ವೈ ಬದಲಾವಣೆಗೆ ಪಕ್ಷದಲ್ಲಿ ಒಂದು ಬಣದ ವಿರೋಧವಿದೆ. ಅಲ್ಲದೇ ಇದೀಗ ವೀರಶೈವ ಮಠಾಧೀಶರು ಸಹ ಬಿಎಸ್‌ವೈ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ.

ಬಿಎಸ್‌ವೈ ಪರ ಸ್ವಾಮೀಜಿ
ಹೌದು... ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಬಾರದು ಎಂದು ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ. 

ತುಮಕೂರು ಜಿಲ್ಲೆ ತಿಪಟೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ರುದ್ರಮುನಿ ಶ್ರೀಗಳು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಬಾರದು ಎಂದರು 

ಬಿ.ಎಸ್. ಯಡಿಯೂರಪ್ಪ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ. ಒಂದು ವೇಳೆ ಯಡಿಯೂರಪ್ಪ ಅವರನ್ನ ಸಿಎಂ ಕುರ್ಚಿಯಿಂದ ಕೆಳಗಿಳಿಸಿದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. 

click me!