Jalappa Hospitalized ಕರ್ನಾಟಕದ ಹಿರಿಯ ರಾಜಕಾರಣಿ ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ

By Suvarna News  |  First Published Dec 10, 2021, 12:14 AM IST

* ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ಆರೋಗ್ಯದಲ್ಲಿ ಏರುಪೇರು
* ಜಾಲಪ್ಪ ಆರೋಗ್ಯ ಪರಿಸ್ಥಿತಿ ಗಂಭೀರ
* ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ 


ಕೋಲಾರ, (ಡಿ.09):  ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ (RL Jalappa) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ (Hosptal) ದಾಖಲು ಮಾಡಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದರಿಂದ 98 ವರ್ಷ ವಯಸ್ಸಿನ ಆರ್.ಎಲ್ ಜಾಲಪ್ಪ ಅವರನ್ನ ಕೋಲಾರದ (ಖೊಲಾರ) ಜಾಲಪ್ಪ ಆಸ್ಪತ್ರೆಗೆ (Jalappa Hospital) ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

Tap to resize

Latest Videos

undefined

ಮಾಜಿ ಕೇಂದ್ರ ಸಚಿವ ಜಾಲಪ್ಪ ಆಸ್ಪತ್ರೆಗೆ ದಾಖಲು

ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದರಿಂದ  ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಬಿಗಡಾಯಿಸಿದೆ.

ಕರ್ನಾಟಕದ ಪ್ರಮುಖ ರಾಜಕಾರಣಿಯಾಗಿದ್ದ ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ(Chikkaballapur) ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 

ಇದೇ  ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕತ್ಸೆ ಮಾಡಲಾಗಿತ್ತು. 

ಆರ್.ಎಲ್.ಜಾಲಪ್ಪಾ ಅವರ ರಾಜಕೀಯ
1980-83 ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು
1983-96 ಸದಸ್ಯರು, ಕರ್ನಾಟಕ ವಿಧಾನಸಭೆ
1983-84 ಮತ್ತು 1985-86 ಮಂತ್ರಿ, ಸಹಕಾರ, ಕರ್ನಾಟಕ ಸರ್ಕಾರ
1986-87 ಮಂತ್ರಿ, ಗೃಹ ವ್ಯವಹಾರಗಳ, ಕರ್ನಾಟಕ ಸರ್ಕಾರ
1995-96 ಸಚಿವ, ಕಂದಾಯ, ಕರ್ನಾಟಕ ಸರ್ಕಾರ
1996 11 ನೇ ಲೋಕಸಭೆಗೆ ಚುನಾಯಿತ ಜವಳಿ
1996-98 ಕೇಂದ್ರ ಜವಳಿ ಸಚಿವ
1998 12 ನೇ ಲೋಕಸಭೆ ಮರುಚುನಾಯಿತರಾದವರು(2 ನೇ ಪದ)
1998-99 ಸದಸ್ಯರು, ಹಣಕಾಸು ಸಮಿತಿ ಸದಸ್ಯ, ಸಂಸತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದಸ್ಯರು ಸಮಿತಿ , ಸಲಹಾ ಸಮಿತಿಯ ಸದಸ್ಯರು ಕೃಷಿ ಸಚಿವಾಲಯ.
1999 ಮರುಚುನಾಯಿತರಾದವರು 13 ನೇ ಲೋಕಸಭೆ (3 ನೇ ಪದ)
1999-2000 ಸದಸ್ಯರು, ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರು.
2004 ಮರುಚುನಾಯಿತರಾದವರು 14 ಲೋಕಸಭೆ (4ನೇ ಅವಧಿಗೆ),
2006 ಮಾನವ ಸಂಪನ್ಮೂಲ ಅಭಿವೃದ್ಧಿ ಸಮಿತಿಯ ಸದಸ್ಯರು 

 ಜನ್ಮದಿನದಂದೇ ಕಾಂಗ್ರೆಸ್ ನಾಯಕ ನಿಧನ
ಧಾರವಾಡ, (ಡಿ.09): ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ (Congress) ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌(SR Morey) ವಿಧಿವಶರಾಗಿದ್ದಾರೆ.

ಇಂದು (ಡಿ.09) ಎಸ್.ಆರ್‌. ಮೋರೆ ಅವರು  ಧಾರವಾಡದ (Dharwad) ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವಿಧಿಯಾಟವೆಂಬಂತೆ ಇಂದು ಜನ್ಮದಿನದಂದೇ(Birthday) ಎಸ್.ಆರ್‌.ಮೋರೆ‌ ನಿಧನ ಹೊಂದಿದ್ದಾರೆ.

ಎಸ್. ಆರ್‌. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. 

click me!