ವಿಧಾನ ಪರಿಷತ್ ಸಭಾಪತಿ ಚುನಾವಣೆ ದಿನಾಂಕ ಪ್ರಕಟ/ ಮಂಗಳವಾರ ಫೆ. 9 ರಂದು ಚುನಾವಣೆ/ ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ/ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದರು
ಬೆಂಗಳೂರು(ಫೆ. 05) ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಮಂಗಳವಾರ ಫೆ. 9 ರಂದು ಚುನಾವಣೆ ನಡೆಯಲಿದೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ಮಂಡನೆ ಮಾಡಿದ್ದಕ್ಕೆ ಶೆಟಟ್ಟಿ ಗುರುವಾರ ರಾಜೀನಾಮೆ ನೀಡಿದ್ದರು.
ಪ್ರತಾಪ್ ಚಂದ್ರ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಜೀನಾಮೆಗೂ ಮುನ್ನ ಶೆಟ್ಟಿ ವಿದಾಯ ಭಾಷಣ ಮಾಡಿದ್ದರು. ಪರಿಷತ್ ಘನತೆ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದ್ದರು.
ಎಸ್‌ಸಿ ಎಸ್‌ಟಿ ಅನುದಾನ; ಬಿಎಸ್‌ವೈ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸಭಾತ್ಯಾಗ
ವಿಧಾನಪರಿಷತ್ ನಲ್ಲಿ ಸಭಾಪತಿ ಸ್ಥಾನಕ್ಕಾಗಿ ನಡೆದ ಗುದ್ದಾಟ ಇತಿಹಾಸದಲ್ಲಿಯೇ ಕಾರಳ ಚುಕ್ಕೆ ನಿರ್ಮಾಣ ಮಾಡಿತ್ತು. ಪರಿಷತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದ್ದು ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.