ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ನಿಧನರಾಗಿದ್ದಾರೆ. ಇವರ ಸಾವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು, (ಅ.29): ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಎರಡು ಬಾರಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು. ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
undefined
ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದ ಮಾಜಿ ಸಿಎಂ ನಿಧನ: ಮೋದಿ ಸಂತಾಪ
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Deeply saddened by the demise of senior leader & former Gujarat Chief Minister Shri Keshubhai Patel ji. My heartfelt condolences to his family and followers. Om Shanti
— B.S. Yediyurappa (@BSYBJP)ಕೊರೋನಾ ವೈರಸ್‌ನಿಂದ ಚೇತರಿಸಿಕೊಳ್ಳುತ್ತಿದ್ದ ಕೇಶುಭಾಯಿ ಪಟೇಲ್ ಅವರಿಗೆ ದಿಢೀರ್ ಉಸಿರಾಟ ತೊಂದರೆಯಾಗಿ ಇಂದು (ಗುರುವಾರ)
ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೇಶುಭಾಯ್ ಪಟೇಲರು ಎರಡು ಅವಧಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕೇಶುಭಾಯ್ ಪಟೇಲರನ್ನು ಕಳೆದುಕೊಂಡ ಬಿಜೆಪಿಗೆ ದೊಡ್ಡ ನಷ್ಟವಾಗಿದೆ.