- ಬೆಂಗಳೂರು ಏರ್‌ಪೋರ್ಚ್ ಲಾಂಜಲ್ಲಿ ಮಾತುಕತೆ
- ಇಬ್ಬರ ನಾಯಕರ ಭೇಟಿ ಕುರಿತು ಭಾರಿ ಕುತೂಹಲ
- ಭೇಟಿಯಲ್ಲಿ ವಿಶೇಷ ಇಲ್ಲ
ಬೆಂಗಳೂರು (ಮೇ. 8) ಪ್ರಸಕ್ತ ರಾಜಕೀಯ ವಿದ್ಯಮಾನಗಳ (Political developments) ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮತ್ತು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Minister of Parliamentary Affairs pralhad joshi) ಅವರು ಗೌಪ್ಯವಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ. ಈ ವೇಳೆ ‘ನನಗೆ ಸಿಎಂ ಆಗಲು 2500 ಕೋಟಿ ರು. ಕೇಳಲಾಗಿತ್ತು’ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( basanagouda patil yatnal) ಹೇಳಿಕೆ, ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.
ಆಡಳಿತಾರೂಢ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಪಕ್ಷಕ್ಕೆ ತೀವ್ರ ಮುಜಗರನ್ನುಂಟು ಮಾಡಿದೆ. ಇಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಸರ್ಕಾರಕ್ಕೂ ಮುಜುಗರವನ್ನುಂಟು ಮಾಡುತ್ತಿದೆ. ಈ ಬಗ್ಗೆ ಯತ್ನಾಳ್‌ಗೆ ಎಚ್ಚರಿಕೆ ನೀಡಬೇಕಾಗಿದೆ. ಅಲ್ಲದೆ, ರಾಜ್ಯವನ್ನೇ ತಲ್ಲಣಗೊಳಿಸಿರುವ ಪಿಎಸ್‌ಐ ನೇಮಕಾತಿ ಹಗರಣ, ಸಚಿವ ಸಂಪುಟ ಪುನಾರಚನೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ದೆಹಲಿಯ ವರಿಷ್ಠರಿಗೆ ಮಾಹಿತಿ ರವಾನಿಸುವುದರಿಂದ ಮುಖ್ಯಮಂತ್ರಿಗಳು ಅವರಿಗೆ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಮುಂದಿನ ಚುನಾವಣೆಗೆ ಸಿದ್ಧತೆ ಕಾರ್ಯಗಳನ್ನು ಆರಂಭಿಸಬೇಕಾಗಿದ್ದು, ಈ ಬಗ್ಗೆ ರಣತಂತ್ರ ರೂಪಿಸುವ ಕುರಿತು ಸಹ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಬೊಮ್ಮಾಯಿ ಜತೆ ನಡೆದದ್ದು ಸಹಜ ಭೇಟಿ. ಈ ರೀತಿ ಭೇಟಿಯಾಗುತ್ತಿರುತ್ತೇವೆ. ವಿಶೇಷತೆ ಏನಿಲ್ಲ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. 2023ರವರೆಗೂ ಬೊಮ್ಮಾಯಿ ಅವರೇ ಸಿಎಂ. ಸಂಪುಟ ವಿಸ್ತರಣೆ ಬಗ್ಗೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಚಿವ ಸ್ಥಾನಕ್ಕೆ ಒತ್ತಡ ಹಾಕಿಲ್ಲ: ವಿಜಯೇಂದ್ರ
ಶಿವಮೊಗ್ಗ: ನಾನಾಗಲೀ, ನಮ್ಮ ಕುಟುಂಬದವರಾಗಲಿ ತಮ್ಮನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಒತ್ತಡ ಹೇರಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಈಗಾಗಲೇ ಸೂಕ್ತ ಸ್ಥಾನಮಾನ ನೀಡಿದೆ. ಮುಂದಿನ ದಿನಗಳಲ್ಲಿ ತಮಗೇನು ಸ್ಥಾನಮಾನ ನೀಡಬೇಕೆಂಬುದನ್ನು ಪಕ್ಷ ತೀರ್ಮಾನಿಸಿ ನೀಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇವೇಳೆ ಶಿಕಾರಿಪುರ ಕ್ಷೇತ್ರದಲ್ಲಿ ನೀವು ಉತ್ತರಾಧಿಕಾರಿ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಶಿಕಾರಿಪುರ ಕ್ಷೇತ್ರದಲ್ಲಿ ಉತ್ತರಾಧಿಕಾರಿ ಪ್ರಶ್ನೆ ನಾನು ಒಪ್ಪುವುದಿಲ್ಲ. ಉತ್ತರಾಧಿಕಾರಿ ಎನ್ನಲು ಇದು ಪ್ರಾದೇಶಿಕ ಪಕ್ಷ ಅಲ್ಲ. ರಾಷ್ಟ್ರೀಯ ಪಕ್ಷದಲ್ಲಿ ಯಾರಿಗೆ ಯಾವ ಸ್ಥಾನ, ಎಲ್ಲಿಂದ ಸ್ಪರ್ಧೆ ಎಲ್ಲವನ್ನೂ ಪಕ್ಷ ನಿರ್ಧರಿಸುತ್ತದೆ ಎಂದರು.
ಚಿಕ್ಕ ಚಿಕ್ಕ ಮೀನುಗಳನ್ನು ಬಿಡಿ, ದೊಡ್ಡ ತಿಮಿಂಗಿಲಗಳನ್ನು ಹಿಡಿಯಿರಿ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಮುಸ್ಲಿಂ ಡಿಫೆನ್ಸ್ ಫೋರ್ಸ್ ತನಿಖೆ ನಡೆಸಿ: ಖಾದರ್
ಮಂಗಳೂರು: ಮುಸ್ಲಿಂ ಯುವತಿಯರು ಯುವಕರೊಂದಿಗೆ ಓಡಾಡುವಂತಿಲ್ಲ ಎಂದು ಮುಸ್ಲಿಂ ಡಿಫೆನ್ಸ್ ಫೋರ್ಸ್ (ಎಂಡಿಎಫ್) ಹೆಸರಿನಲ್ಲಿ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಯತ್ನಾಳ್ 2500 ಕೋಟಿ ಹೇಳಿಕೆ ತನಿಖೆಯಾಗಲಿ ಎಂದ ಸಿದ್ದರಾಮಯ್ಯ!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಭಯದ ವಾತಾವರಣ ಉಂಟುಮಾಡುವ ಇಂಥ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಸರ್ಕಾರ ದಿಟ್ಟಕ್ರಮ ಕೈಗೊಳ್ಳಬೇಕು. ಜಾಲತಾಣದಲ್ಲಿ ಯಾರದೋ ಹೆಸರಿನಲ್ಲಿ ಬೇರೆ ಯಾರೋ ಮಾಡಿರುವ ಸಾಧ್ಯತೆಗಳೂ ಇವೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಬೇಕಾದರೆ ಯಾವುದೇ ಮತೀಯ ಸಂಘಟನೆಯವರಾಗಿರಲಿ, ಪತ್ತೆ ಹಚ್ಚಲೇಬೇಕು ಎಂದು ಆಗ್ರಹಿಸಿದರು.