ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಅದ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಹೀಗಾಗಿ, ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು (ಮಾ.13): ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಅದ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಹೀಗಾಗಿ, ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69 ಮತ್ತು ವಿಧಾನ ಪರಿಷತ್ತಿನಲ್ಲಿ ನಿಯಮ 330ರ ಮೇರೆಗೆ ವಿಪಕ್ಷಗಳು ಎತ್ತಿದ್ದ ಕೆಪಿಎಸ್ಸಿ ವಿಚಾರಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ, ಎರಡನೇ ಬಾರಿಯೂ ಆಗಿರುವ ತಪ್ಪುಗಳನ್ನು ಪರಿಶೀಲಿಸಲು ವಿಷಯತಜ್ಞರ ಸಮಿತಿಯನ್ನು ಕೆಪಿಎಸ್ಸಿ ರಚಿಸಿತ್ತು.
ಪರಿಶೀಲನೆ ಬಳಿಕ 6 ಪ್ರಶ್ನೆಗಳಿಗೆ ಕೃಪಾಂಕ ನೀಡಲಾಗಿದೆ. ಇಂತಹ ಪ್ರಕರಣಗಳಲ್ಲಿ ವಿಷಯ ತಜ್ಞರ ಸಮಿತಿ ನೀಡುವ ಅಭಿಪ್ರಾಯಗಳನ್ನು ಪರಿಗಣಿಸುವುದನ್ನು 'ಉತ್ತರ ಪ್ರದೇಶ ಸರ್ವಿಸ್ ಕಮಿಷನ್ ವಿರುದ್ಧ ರಾಹುಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮತ್ತೊಂದೆಡೆ, ಅಭ್ಯರ್ಥಿಗಳು ಕೂಡ ಕೆಎಟಿ ಮೊರೆ ಹೋಗಿರುವ ಕಾರಣ ಮರುಪರೀಕ್ಷೆಗೆ ಸೂಚನೆ ನೀಡಲಾಗದು ಎಂದರು. ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರದ ತಪ್ಪು ಗಳಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯ ವಾಗುತ್ತದೆ. ಹೀಗಾಗಿ, ಮತ್ತೊಮ್ಮೆ ಪರೀಕ್ಷೆ ನಡೆಸಲು ನನ್ನ ತಕರಾರು ಇಲ್ಲ.
ಕೆಎಟಿ ಆದೇಶ ಮಾಡಿದರೆ ಮರುಪರೀಕ್ಷೆ ನಡೆಸಲಾಗುತ್ತದೆ. ಇಲ್ಲದಿದ್ದರೆ ಸರ್ವಪಕ್ಷ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕನ್ನಡದ ಅಭ್ಯರ್ಥಿಗಳಿಗೆ ಆಗುವ ಅನ್ಯಾಯ ನೋಡಿಕೊಂಡು ಸುಮ್ಮನೆ ಸಹಿಸಿಕೊಂಡು ಕೂರುವುದಿಲ್ಲ ಎಂದು ತಿಳಿಸಿದರು. ಪೂರ್ವಭಾವಿ ಪರೀಕ್ಷೆ ಹಾಗೂ ಮರುಪರೀ ಕೈಯ ಪ್ರಶ್ನೆಪತ್ರಿಕೆಯಲ್ಲಿನ ಅದ್ವಾನಗಳಿಗೆ ಕಾರಣರಾದ ವಿಷಯತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳವಣಿಗೆ ಹಾದಿಯಲ್ಲಿ ಸಾಗುತ್ತಿರುವ ಬೆಂಗಳೂರು ನಗರ ವಿವಿಗೆ ಕಾಯಂ ಬೋಧಕರು, ಸಿಬ್ಬಂದಿಯೇ ಇಲ್ಲ!
ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದು ಭರವಸೆ ನೀಡಿದರು. ಕೆಪಿಎಸ್ಸಿಯಲ್ಲಿ 16 ಸದಸ್ಯರಿದ್ದು, ಅದನ್ನು ಕಡಿತಗೊಳಿಸುವುದು, ಸಿಬ್ಬಂದಿ ನೇಮಕ, ವರ್ಗಾವಣೆ ಇತ್ಯಾದಿಗಳ ವಿಚಾರ ಗಳ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರಲು ಉದೇಶಿಸಲಾಗಿದೆ. ಯುಪಿಎಸ್‌ಸಿ ಮಾದರಿ ಉತ್ತಮವಾಗಿದೆ ಎಂಬ ಅಭಿಪ್ರಾಯ ಇರು ವುದರಿಂದ ಯುಪಿಎಸ್ಸಿ ಮಾದರಿಯನ್ನು ಕೆಪಿಎಸ್‌ಸಿಯಲ್ಲಿ ಅನುಸರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.