ಕೇರಳ ಸರ್ಕಾರ ಹಾಗೂ ಮೋದಿಯನ್ನು ಮೆಚ್ಚಿದ ಸಂಸದ ಶಶಿ ತರೂರ್‌ಗೆ 'ಕೈ' ಮುಖವಾಣಿ ವೀಕ್ಷಣಂ ಚಾಟಿ

Published : Feb 18, 2025, 07:34 AM ISTUpdated : Feb 18, 2025, 07:47 AM IST
ಕೇರಳ ಸರ್ಕಾರ ಹಾಗೂ ಮೋದಿಯನ್ನು ಮೆಚ್ಚಿದ ಸಂಸದ ಶಶಿ ತರೂರ್‌ಗೆ 'ಕೈ' ಮುಖವಾಣಿ ವೀಕ್ಷಣಂ ಚಾಟಿ

ಸಾರಾಂಶ

ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ಉದ್ಯಮಶೀಲತಾ ಬೆಳವಣಿಗೆಯನ್ನು ಶ್ಲಾಘಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್‌ ಬಗ್ಗೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ತಿರುವನಂತಪುರಂ: ಆಡಳಿತಾರೂಢ ಎಲ್‌ಡಿಎಫ್ ಸರ್ಕಾರದ ಅಡಿಯಲ್ಲಿ ಕೇರಳದ ಉದ್ಯಮಶೀಲ ಬೆಳವಣಿಗೆಯನ್ನು ಶ್ಲಾಘಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯಲ್ಲಿ ಬರೆದ ಲೇಖನವು ಕಾಂಗ್ರೆಸ್ ಪಕ್ಷದ ಕಣ್ಣು ಕೆಂಪಾಗಿಸಿದೆ. ಲೇಖನದಲ್ಲಿ ಎಲ್‌ಡಿಎಫ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಹೊಗಳಿದ ತರೂರ್, ಸರ್ಕಾರ ಉದ್ಯಮಶೀಲತೆಗೆ ಅಪಾರ ಕೊಡುಗೆ ಕೊಟ್ಟಿದೆ ಎಂದಿದ್ದರು. ಅದಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿ ಕುರಿತಾಗಿಯೂ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಇದು ಕೇರಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಕೇರಳ ಕಾಂಗ್ರೆಸ್ ಮುಖವಾಣಿ ವೀಕ್ಷಣಂ ದಿನಪತ್ರಿಕೆ ತರೂರ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆಯೇ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನ ಪಕ್ಷದ ಸಾವಿರಾರು ಕಾರ್ಯಕರ್ತರ ನಿರೀಕ್ಷೆಗಳಿಗೆ ದ್ರೋಹ ಬಗೆಯಬೇಡಿ ಎಂದು ತನ್ನ ಸಂಪಾದಕೀಯದಲ್ಲಿ ಚಾಟಿ ಬೀಸಿದೆ. ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸದಂತೆ ಎಚ್ಚರಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲಲು ವಿಫಲವಾದರೆ ಅದಕ್ಕೆ ನೇರ ಹೊಣೆಯಾಗಬೇಕಾದೀತು ಎಂದು ಎಚ್ಚರಿಸಿದೆ.

ಮುತ್ತು ಮತ್ತು ಮೂತ್ರವನ್ನು ಹೋಲಿಸಿದ ಸಂಸದ ಶಶಿ ತರೂರ್‌, ನೆಟಿಜೆನ್ಸ್‌ ಏನಂದ್ರು?

ಬರೋಬ್ಬರಿ 500 ಗ್ರಾಂ ಚಿನ್ನ ಕಳ್ಳಸಾಗಣೆ ವೇಳೆ ಶಶಿ ತರೂರ್‌ ಆಪ್ತನ ಸೆರೆ, ಸಂಸದ ಶಾಕ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌