ಒಳ ಮೀಸಲಾತಿಯಿಂದ ಅನ್ಯಾಯವಾಗಿದ್ರೆ ಸರಿ ಮಾಡೋಣ: ಸಚಿವ ಕೆ.ಎಚ್‌.ಮುನಿಯಪ್ಪ

Published : Sep 14, 2025, 01:38 AM IST
kh muniyappa

ಸಾರಾಂಶ

ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ರೀತಿಯಲ್ಲಿ ನಮ್ಮ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದ್ದು, ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಆ ತರಹ ಆಗಿದ್ದರೆ ಸರಿ ಮಾಡೋಣ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ದಾವಣಗೆರೆ (ಸೆ.14): ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ರೀತಿಯಲ್ಲಿ ನಮ್ಮ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದ್ದು, ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಆ ತರಹ ಆಗಿದ್ದರೆ ಸರಿ ಮಾಡೋಣ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ನಗರದಲ್ಲಿ ಮಾದಿಗ ಮಹಾಸಭಾ ಹಮ್ಮಿಕೊಂಡಿದ್ದ ಒಳ ಮೀಸಲಾತಿ ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾದಿಗ ಸಮುದಾಯದ 35 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಫಲವೇ ಒಳ ಮೀಸಲಾತಿ ಎಂದರು.

ಒಳ ಮೀಸಲಾತಿ ನೀಡುವಂತಹ ಐತಿಹಾಸಿಕ ತೀರ್ಮಾನವನ್ನು ನಮ್ಮ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದೆ. 101 ಜಾತಿಗಳಿಗೂ ಸಮಾನ ರೀತಿಯಲ್ಲಿ ಮೀಸಲಾತಿ ಹಂಚಿಕೆ ಮಾಡಿದ್ದೇವೆ. ಒಳ ಮೀಸಲಾತಿ ಜಾರಿಗೊಂಡ ಬಳಿಕ ದಾವಣಗೆರೆಯಲ್ಲಿ ಇಂದು ಮೊದಲ ಕಾರ್ಯಕ್ರಮ ನಡೆಯುತ್ತಿದ್ದು, ಸಮಾಜದ ಮುಖ್ಯಸ್ಥರಿಂದ ಇಂತಹದ್ದೊಂದು ಬೃಹತ್ ಸಮಾರಂಭ ಆಯೋಜನೆಗೊಂಡಿದೆ ಎಂದು ಅವರು ತಿಳಿಸಿದರು.

ಯಾರಿಗೂ ಅನ್ಯಾಯವಾಗಿಲ್ಲ

ತಮ್ಮ ಸರ್ಕಾರ ಜಾರಿಗೊಳಿಸಿದ ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಒಂದು ವೇಳೆ ಅನ್ಯಾಯವಾಗಿದ್ದರೆ ಸರಿಪಡಿಸುವ ಕೆಲಸವನ್ನೂ ನಮ್ಮ ಸರ್ಕಾರ ಸರಿ ಮಾಡುತ್ತದೆ ಎಂದು ಕೆಲ ಸಮುದಾಯಗಳು ಒಳ ಮೀಸಲಾತಿಯಿಂದ ತಮಗೆ ಅನ್ಯಾಯವಾಗುತ್ತಿದೆಯೆಂದು ಹೋರಾಟ ಮಾಡುತ್ತಿರುವ ಕುರಿತಂತೆ ಅವರು ಪ್ರತಿಕ್ರಿಯಿಸಿದರು.

ಪಡಿತರ ಚೀಟಿಗಳನ್ನು ರದ್ಧುಪಡಿಸಿರುವುದು ಕೇಂದ್ರ ಸರ್ಕಾರದ ತೀರ್ಮಾನವಾಗಿದೆ. ಕೇಂದ್ರ ಸರ್ಕಾರದವರೇ ಸರ್ವೇ ಮಾಡಿದ್ದಾರೆ. ಅದರ ಪ್ರಕಾರವೇ ಪಡಿತರ ಚೀಟಿಗಳನ್ನು ರದ್ದುಪಡಿಸಿದ್ದಾರೆ. 1.20 ಲಕ್ಷ ರು.ಗೂ ಅದಿಕ ಆದಾಯವಿದ್ದರೆ ರದ್ಧು ಮಾಡಬೇಕೆಂದು ಮಾಡಿದ್ದಾರೆ. ಅದರ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಕಾರ್ಡ್ ರದ್ದತಿ ಮಾಡಬೇಕಾಗುತ್ತದೆ ಎಂದು ಹೇಳಿದರು.

ಗಣೇಶ ಹಬ್ಬದಲ್ಲಿ ಒಂದಲ್ಲ ಒಂದು ಸಮಸ್ಯೆಯಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ ಗಣೇಶೋತ್ಸವದಲ್ಲಿ ಆದ ಅಪಘಾತದ ಘಟನೆಯೂ ನಿದರ್ಶನವಾಗಿದೆ. ಗಣೇಶೋತ್ಸವ ವೇಳೆ ಪೂರ್ಣ ಪ್ರಮಾಣದಲ್ಲಿ ಬಂದೋಬಸ್ತ್ ಮಾಡಬೇಕಾಗುತ್ತದೆ. ಪಟಾಕಿ ಹೊಡೆಯುವುದನ್ನು ನಿಲ್ಲಿಸದಿದ್ದರೆ ಇದೆಲ್ಲವೂ ಸರಿ ಹೋಗುವುದಿಲ್ಲ ಎಂದು ಕೆ.ಎಚ್. ಮುನಿಯಪ್ಪ ಪ್ರತಿಕ್ರಿಯೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌ನ ಲೋಕಾಯುಕ್ತರ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!