ಚುನಾವಣಾ ಅಕ್ರಮ ತಡೆಯಲು ಬೂತ್‌ ಮಟ್ಟದಲ್ಲಿ ಕಾವಲು ಸಮಿತಿ ರಚನೆ: ಸಚಿವ ಮುನಿಯಪ್ಪ

Published : Aug 10, 2025, 06:12 AM IST
kh muniyappa

ಸಾರಾಂಶ

ರಾಹುಲ್‌ ಗಾಂಧಿ ಸಲಹೆಯಂತೆ ಚುನಾವಣಾ ಅಕ್ರಮ ತಡೆಯಲು ಬೂತ್‌ ಮಟ್ಟದಲ್ಲಿ ತಂಡ ರಚನೆ ಮಾಡಬೇಕಿದೆ. ಆ ತಂಡಗಳು ಮತಗಳ್ಳತನ ಆಗದಂತೆ ಎಚ್ಚರಿಕೆ ವಹಿಸಲಿವೆ ಎಂದು ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು.

ಬೆಂಗಳೂರು (ಆ.10): ಮತಗಳ್ಳತನ ಮತ್ತು ಚುನಾವಣಾ ಅಕ್ರಮ ತಡೆಯುವ ಉದ್ದೇಶದೊಂದಿಗೆ ಕಾಂಗ್ರೆಸ್‌ ಪಕ್ಷದಿಂದ ಪ್ರತಿ ಬೂತ್‌ ಮಟ್ಟದಲ್ಲಿ 10 ಜನರನ್ನೊಳಗೊಂಡ ಕಾವಲು ಸಮಿತಿ ರಚಿಸಲಾಗುವುದು ಎಂದು ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಕೆಪಿಸಿಸಿಯಲ್ಲಿ ಆಯೋಜಿಸಲಾಗಿದ್ದ ಕ್ವಿಟ್‌ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಹುಲ್‌ ಗಾಂಧಿ ಸಲಹೆಯಂತೆ ಚುನಾವಣಾ ಅಕ್ರಮ ತಡೆಯಲು ಬೂತ್‌ ಮಟ್ಟದಲ್ಲಿ ತಂಡ ರಚನೆ ಮಾಡಬೇಕಿದೆ. ಆ ತಂಡಗಳು ಮತಗಳ್ಳತನ ಆಗದಂತೆ ಎಚ್ಚರಿಕೆ ವಹಿಸಲಿವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರ ಸೇರಿ ಚುನಾವಣಾ ಕಾರ್ಯಗಳಲ್ಲಿ ವ್ಯಸ್ತರಾಗಿರುತ್ತಾರೆ. ಹೀಗಾಗಿ ಮತದಾರರ ಸೇರ್ಪಡೆ ಮತ್ತು ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಗಮನ ಕೊಡುವುದಿಲ್ಲ. ಅದನ್ನು ಗಮನಿಸಲು ಕಾವಲು ಸಮಿತಿ ರಚಿಸಲಾಗುವುದು ಎಂದರು.

10 ಮಂದಿಯ ಕಾವಲು ಸಮಿತಿ ಬೂತ್‌ಮಟ್ಟದಲ್ಲಿ ರಚನೆ: ನ್ಯಾ. ನಾಗಮೋಹನ್‌ದಾಸ್‌ ಆಯೋಗ ಸಲ್ಲಿಸಿರುವ ಒಳಮೀಸಲಾತಿ ಸಂಬಂಧ ವರದಿಯನ್ನು ಸರ್ಕಾರ ಶೇ.100ರಷ್ಟು ಜಾರಿ ಮಾಡಲಿದೆ. ಆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿ ಎಲ್ಲರೂ ಒಟ್ಟಾಗಿದ್ದೇವೆ. ವರದಿ ಅಧ್ಯಯನ ಮಾಡುತ್ತಿದ್ದೇವೆ. ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಶಿವರಾಜ್‌ ತಂಗಡಗಿ ಸೇರಿ ಎಲ್ಲರೂ ಅಭಿಪ್ರಾಯ ನೀಡಿದ್ದಾರೆ. ಒಳ ಮೀಸಲಾತಿಯಲ್ಲಿ ಯಾರನ್ನೂ ಕೈ ಬಿಡುವುದಿಲ್ಲ ಎಂದು ಮುನಿಯಪ್ಪ ಹೇಳಿದರು.

ಮತ ಕದ್ದಿದ್ದಾರೆ: ಬಿಜೆಪಿಯವರು ಇಡೀ ರಾಷ್ಟ್ರದಲ್ಲಿ ಸುಮಾರು 70 ರಿಂದ 100 ಕ್ಷೇತ್ರದಲ್ಲಿ ಮತಕದಿಯುವ ಕೆಲಸ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಮತ ಕದಿಯುವ ಕೆಲಸ ಆಗಿದೆ ಎಂದು ತಿಳಿಸಿದರು. ಬಿಜೆಪಿಯ ಮತ ಕಳ್ಳತನ ವಿರುದ್ಧ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ಗಾಂಧಿ ನೇತೃತ್ವದಲ್ಲಿ ಆ. 5 ರಂದು ಹಮ್ಮಿಕೊಂಡಿರುವ ಸಭೆಗೆ ಗ್ರಾಮಾಂತರ ಜಿಲ್ಲೆಯಿಂದ ತೆರಳು ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸಮೀಪ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನಂತರ ಮಾತನಾಡಿದರು.

ಆ. 5ರಂದು ಮತ ಕಳ್ಳತನದ ವಿರುದ್ಧ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ನಡೆಯುವ ಸಭೆಗೆ ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಮುಖಂಡರು ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ