ಮಾಜಿ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಬೆಳಗಾವಿ, (ನ.01) : ಮಾಜಿ ಶಾಸಕ ಅರವಿಂದ ಪಾಟೀಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಖಾನಪುರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಮಾಜಿ ಶಾಸಕ ಅರವಿಂದ್ ಪಾಟೀಲ್ ಈಗ ಎಂಇಎಸ್ ಜೊತೆ ಗುರುತಿಸಿಕೊಂಡಿಲ್ಲ. ಅವರನ್ನು ಶೀಘ್ರವೇ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ
ಕನ್ನಡ ರಾಜ್ಯೋತ್ಸವದಂದು ಎಂಇಎಸ್ ಕರಾಳ ದಿನಾಚರಣೆ ಬೆಂಬಲಿ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ಹಿಸುತ್ತೇವೆ ಎಂಬ ಮಹಾರಾಷ್ಟ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ, ಶಿವಸೇನೆ ಸೇರಿದಂತೆ ಕೆಲವೊಂದು ಸಂಘಟನೆಗಳ ಕಾರ್ಯಸೂಚಿಯೇ ಕರ್ನಾಟಕದ ವಿರುದ್ಧ ಇರುವುದಾಗಿದೆ. ಅವರ ರಾಜ್ಯದ ಬಗ್ಗೆ ಅವರು ಮಾತನಾಡುತ್ತಾರೆ. ನಮ್ಮ ರಾಜ್ಯದ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.