ಬಿಜೆಪಿಗೆ ಸುದೀಪ್‌ ಬೆಂಬಲ ಸ್ವಾಗತಾರ್ಹ: ಬಿ.ಎಸ್‌.ಯಡಿಯೂರಪ್ಪ

By Kannadaprabha News  |  First Published Apr 7, 2023, 11:12 AM IST

ಚಿತ್ರನಟ ಸುದೀಪ್‌ ಬಿಜೆಪಿ ಬೆಂಬಲಿಸಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲನಚಿತ್ರ ರಂಗದಲ್ಲಿ ಖ್ಯಾತಿ ಗಳಿಸಿರುವ ಸುದೀಪ್‌ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. 


ಬೆಂಗಳೂರು (ಏ.07): ಚಿತ್ರನಟ ಸುದೀಪ್‌ ಬಿಜೆಪಿ ಬೆಂಬಲಿಸಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲನಚಿತ್ರ ರಂಗದಲ್ಲಿ ಖ್ಯಾತಿ ಗಳಿಸಿರುವ ಸುದೀಪ್‌ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಬಿಜೆಪಿಗೆ ಬೆಂಬಲ ಸಿಗುತ್ತಿರುವುದನ್ನು ಕಾಂಗ್ರೆಸ್‌ನವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ನವರು ತಲೆಕೆಟ್ಟು ಏನು ಬೇಕಾದರೂ ಮಾತನಾಡುತ್ತಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಟೀಕಿಸಿದರು. ಚಿತ್ರನಟ ಸುದೀಪ್‌ ನಮ್ಮ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದನ್ನು ನಾನು ಮುಕ್ತಕಂಠದಿಂದ ಶ್ಲಾಘಿಸುತ್ತೇನೆ. ಅವರಿಗೆ ಸಿಗುತ್ತಿರುವ ಜನಪ್ರಿಯತೆಯನ್ನು ಕಂಡು ಕಾಂಗ್ರೆಸ್‌ನವರು ಮನಬಂದಂತೆ ಮಾತನಾಡುತ್ತಿದ್ದಾರೆ. ಇದಕ್ಕೆ ಹೆಚ್ಚಿನ ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ನುಗ್ಗಿಕೇರಿ ಹನುಮಪ್ಪನ ದರ್ಶನ ಪಡೆದ ಬಿಎಸ್‌ವೈ: ಐತಿಹಾಸಿಕ ಹಿನ್ನೆಲೆಯುಳ್ಳ ಸಮೀಪದ ನುಗ್ಗಿಕೇರಿ ಹನುಮಪ್ಪ ದೇವಸ್ಥಾನಕ್ಕೆ ಗುರುವಾರ ಹನುಮ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಇತರೆ ಮುಖಂಡರು ದರ್ಶನ ಪಡೆದರು. ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ, ಹನುಮ ಜಯಂತಿ ನಿಮಿತ್ತ ತಮಗೆ ಹನುಮಂತ ದರ್ಶನದ ಸೌಭಾಗ್ಯ ದೊರಕಿದೆ. ಗುರುವಾರ ಶಿಕಾರಿಪುರದ ಹುಚ್ಚರಾಯ ಸ್ವಾಮಿ ಜಾತ್ರೆ ಇತ್ತು. ಸಾಮಾನ್ಯವಾಗಿ ಪ್ರತಿ ವರ್ಷ ಆ ಜಾತ್ರೆಗೆ ಹೋಗುತ್ತೇನೆ. ಆದರೆ, ಕಾರ‍್ಯಕ್ರಮ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಬಂದಿದ್ದರಿಂದ ನುಗ್ಗಿಕೇರಿ ಹನುಮಪ್ಪನ ದರ್ಶನ ಸಿಕ್ಕಿದ್ದು ಜೀವನ ಸಾರ್ಥಕವಾಗಿದೆ. ರಾಜ್ಯವು ಸುಭಿಕ್ಷೆಯಲ್ಲಿ ಇರಲಿ ಎಂದು ಹಾರೈಸಿದರು.

Tap to resize

Latest Videos

ನಂಬಿಸಿ ಕುತ್ತಿಗೆ ಕೊಯ್ದರು: ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ್ದಕ್ಕೆ ರಘು ಆಚಾರ್‌ ಕಿಡಿ

ಬಿಜೆಪಿಗೆ ಮತ ಹಾಕುವ ಮೂಲಕ ಋುಣ ಸಂದಾಯ: ಮೀಸಲಾತಿ ಹೆಚ್ಚಿಸಿ; ಒಳಮೀಸಲಾತಿ ಘೋಷಿಸಿದ್ದು ಬಿಜೆಪಿ ಸರ್ಕಾರ. ಅದಕ್ಕಾಗಿ ನಾವೆಲ್ಲ ಈ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ ಋುಣ ಸಂದಾಯ ಮಾಡಬೇಕಿದೆ ಎಂದು ಪರಿಶಿಷ್ಟಸಮುದಾಯಗಳ ಒಕ್ಕೂಟವು ಆಯೋಜಿಸಿದ್ದ ಸರ್ಕಾರಕ್ಕೆ ಅಭಿನಂದನಾ ಸಮಾರಂಭದಲ್ಲಿ ಒಕ್ಕೊರಲಿನ ಧ್ವನಿ ಕೇಳಿ ಬಂದಿತು. ಪರಿಶಿಷ್ಟಸಮುದಾಯಗಳ ಒಕ್ಕೂಟ ತನ್ನ ಶಕ್ತಿ ಪ್ರದರ್ಶಿಸುವಲ್ಲಿ ಯಶಸ್ವಿಯಾಯಿತು. ಬಿಜೆಪಿಗೆ ತಮ್ಮ ಮತ ಎಂದು ದಲಿತ ಸಮುದಾಯಗಳ ವಿವಿಧ ಮುಖಂಡರು ಘಂಟಾಘೋಷವಾಗಿ ಘೋಷಿಸಿದ್ದು ವಿಶೇಷ.

ಎಸ್ಸಿ ಸಮುದಾಯದ 101 ಜಾತಿಗಳಿಗೆ ಒಳಮೀಸಲಾತಿ ಘೋಷಣೆ ಮಾಡಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವ ಸಲ್ಲಿಸಿದೆ. ಜತೆಗೆ ಮೀಸಲಾತಿ ಪ್ರಮಾಣವನ್ನೂ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಹಲವರನ್ನು ಸಮುದಾಯಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಮಾದಿಗ ದಂಡೋರ, ಮಾದಿಗ ಮಹಾಸಭಾ, ಡೋಹರ ಕಕ್ಕಯ್ಯ, ಮಾಚಿಗ ಸಮುದಾಯ, ಬಂಜಾರ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಂಡಿದ್ದವು.

ಶಾಸಕಿ ಸೌಮ್ಯಾ ರೆಡ್ಡಿ ಕಾರಿನಲ್ಲಿ 20 ಸೀರೆ, 14 ಮೊಬೈಲ್‌ಗಳು ಪತ್ತೆ: ದೂರು ದಾಖಲು

ಈ ವೇಳೆ ಪಾಲ್ಗೊಂಡಿದ್ದ ದಲಿತ ಸಮುದಾಯಗಳ ವಿವಿಧ ಸಂಘಟನೆಗಳ ಮುಖಂಡರು, ಸಮುದಾಯದ ಸಚಿವರು ಬಿಜೆಪಿಗೆ ಮತ ಹಾಕುವ ಮೂಲಕ ಋುಣ ಸಂದಾಯ ಮಾಡಬೇಕು ಎಂದರು. ಇದಕ್ಕೆ ನೆರೆದಿದ್ದ ಜನತೆ ಕೂಡ ಶಿಳ್ಳೆ, ಕೇಕೆ ಹಾಕುವ ಹಾಗೂ ಚಪ್ಪಾಳೆ ತಟ್ಟುವ ಮೂಲಕ ತಮ್ಮ ಸಮ್ಮತಿ ಸೂಚಿಸಿದವು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಮೀಸಲಾತಿ ಹೆಚ್ಚಿಸಿದ್ದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ. ಕಳೆದ 30 ವರ್ಷಗಳ ಬೇಡಿಕೆಗೆ ಈಗ ಸ್ಪಂದನೆ ಸಿಕ್ಕಂತಾಗಿದೆ. ಮೀಸಲಾತಿ ಜತೆಗೆ ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳನ್ನು ಸರ್ಕಾರಿ ನೌಕರರನ್ನಾಗಿಸಿದ್ದಾರೆ. ನಾವೆಲ್ಲರೂ ಸೇರಿಕೊಂಡು ಬಿಜೆಪಿಯ ಋುಣ ತೀರಿಸುವ ಕೆಲಸ ಮಾಡಬೇಕಿದೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!