ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳನ್ನು ಅಮಾಯಕರೆಂದು ಪರಿಗಣಿಸುವುದು ಅಪಾಯಕಾರಿ: ಸಿ.ಟಿ.ರವಿ

By Kannadaprabha News  |  First Published Jul 27, 2023, 9:43 PM IST

ಕಾನೂನು ಬಾಹಿರ ಘಟನೆಗಳಲ್ಲಿ ಭಾಗಿಯಾಗಿದ್ದವರು ಅಮಾಯಕರು ಎಂದು ಪರಿಗಣಿಸಿ ಅವರನ್ನು ಕೇಸ್‌ನಿಂದ ಕೈಬಿಡಲು ಹೊರಟಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಷ್ಟೇ ಅಲ್ಲ, ದೇಶದ ಸಮಗ್ರತೆಗೂ ಅಪಾಯಕಾರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. 
 


ಚಿಕ್ಕಮಗಳೂರು (ಜು.27): ಕಾನೂನು ಬಾಹಿರ ಘಟನೆಗಳಲ್ಲಿ ಭಾಗಿಯಾಗಿದ್ದವರು ಅಮಾಯಕರು ಎಂದು ಪರಿಗಣಿಸಿ ಅವರನ್ನು ಕೇಸ್‌ನಿಂದ ಕೈಬಿಡಲು ಹೊರಟಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಷ್ಟೇ ಅಲ್ಲ, ದೇಶದ ಸಮಗ್ರತೆಗೂ ಅಪಾಯಕಾರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೆ.ಜೆ.ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡುವಂತೆ ಶಾಸಕ ತನ್ವೀರ್‌ ಸೇಠ್‌ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿ, ಈ ಪ್ರಕರಣದಲ್ಲಿ ಇಡೀ ಊರಿಗೆ ಬೆಂಕಿ ಹಾಕಿ 250 ಕ್ಕೂ ಹೆಚ್ಚು ವಾಹನಗಳನ್ನು ಸುಟ್ಟು ಹಾಕಿ, ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಿ ರಾಜ್ಯದ ಇತಿಹಾಸದಲ್ಲೇ ಭೀಕರ ಘಟನೆ ನಡೆಸಿದ್ದಾರೆ. 

ಶಿವಮೊಗ್ಗದಲ್ಲಿ ಹರ್ಷ ಕೊಲೆ ನಂತರದ ಗಲಭೆ, ಹುಬ್ಬಳ್ಳಿಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಿದಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿ ಆಗಿರುವವರನ್ನು ಕಾಂಗ್ರೆಸ್‌ನವರು ಅಮಾಯಕರೆಂದು ಪರಿಗಣಿಸುವುದು ಅಪಾಯಕಾರಿ ಎಂದರು. ಇಂತಹ ರಾಜಕಾರಣದ ಆಟ ಖಂಡನೀಯ, ನಿಮ್ಮ ಓಲೈಕೆ ರಾಜನೀತಿ ಪರಿಣಾಮ 2013 ರಿಂದ 2018ರ ವರೆಗೆ 32 ಕ್ಕೂ ಹೆಚ್ಚು ಜನ ಹಿಂದೂ ಸಂಘಟನೆ ಕಾರ್ಯಕರ್ತರ ಕೊಲೆಗೆ ಕಾರಣವಾಯಿತು. ಅಂದು ಮಾಡಿದ ತಪ್ಪನ್ನೇ ಮತ್ತೆ ಮಾಡಲು ಹೊರಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

undefined

ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಉಚಿತ ತರಬೇತಿ: ಶಾಸಕ ಪ್ರದೀಪ್‌ ಈಶ್ವರ್‌

ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಒಳಗೊಂಡಂತೆ ಎಲ್ಲ ರೀತಿಯ ಹೋರಾಟವನ್ನೂ ಮಾಡುತ್ತೇವೆ. ಗೃಹ ಸಚಿವರು ಒಳ್ಳೆಯದು ಯಾವುದು, ಕೆಟ್ಟದ್ದು ಯಾವುದೆಂದು ಅರ್ಥ ಮಾಡಿಕೊಳ್ಳದ ಸ್ಥಿತಿಗೆ ಬಂದಿರುವುದು ದುರ್ದೈವ. ನಿಮಗೆ ಓಟ್‌ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಎಲ್ಲಾ ಅಪರಾಧವನ್ನೂ ಮನ್ನಿಸಲು ಸಾಧ್ಯವೇ, ರಾಜ್ಯ, ದೇಶದ ಮೇಲೆ ಏನು ಪರಿಣಾಮ ಆಗುತ್ತದೆ ಎಂದು ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಅಮಾಯಕತೆ, ರಾಜ್ಯವನ್ನು ಅಸಹಾಯಕತೆಗೆ ದೂಡಬಾರದು. ಈ ವಿಷಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿಯೂ ನಿಮ್ಮ ಮೇಲಿದೆ ಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.

ನಾನು ಬಿಜೆಪಿಗೆ ಮರಳುವ ಪ್ರಶ್ನೆಯೇ ಇಲ್ಲ: ಜಗದೀಶ್‌ ಶೆಟ್ಟರ್‌

ಉಡುಪಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ಆಶ್ಲೀಲ ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್‌ನ್ನೇ ದಾಖಲಿಸಿರಲಿಲ್ಲ. ಸಂಸ್ಥೆಯವರು ಪೊಲೀಸರಿಗೆ ದೂರು ಕೊಟ್ಟಕೂಡಲೇ ಎಫ್‌ಐಆರ್‌ ದಾಖಲಿಸಬೇಕಿತ್ತು. ಆಪಾಧಿತರನ್ನು ಬೆನ್ನುಹತ್ತುವ ಬದಲು ಆಪಾಧಿತರ ಬಗ್ಗೆ ಟ್ವೀಟ್‌ ಮಾಡಿದವರನ್ನು ಬೆನ್ನು ಹತ್ತಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ನಿದರ್ಶನ ಎಂದರು. ಈ ಬಗ್ಗೆ ಸಮಗ್ರ ತನಿಖೆ ಆಗಲಿ, ಆರೋಪ ಸತ್ಯವಾಗಿದ್ದಲ್ಲಿ ಅಪಾಯ ಕಾರಿಯಾದದ್ದು, ಅವರ ಜಾಲ ಎಲ್ಲೆಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಪಾರದರ್ಶಕ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

click me!