ಬಿಜೆಪಿ ಸಾಧನೆ ಮನೆ ಬಾಗಿಲಿಗೆ ತಲುಪಿಸಿ: ಬಾಲಚಂದ್ರ ಜಾರಕಿಹೊಳಿ

By Kannadaprabha NewsFirst Published Jan 5, 2023, 9:00 PM IST
Highlights

ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರಿಯ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರಚಾರ ಮಾಡಬೇಕು. ಶಿಸ್ತಿನಿಂದ ಬೂತ್‌ ಮಟ್ಟದಿಂದ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದ ಜಾರಕಿಹೊಳಿ 

ಮೂಡಲಗಿ(ಜ.05):  ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂತ್‌ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಬಾವಿ ಮಂಡಲದ ಬೂತ್‌ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡುವಂತೆ ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರಿಯ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರಚಾರ ಮಾಡಬೇಕು. ಶಿಸ್ತಿನಿಂದ ಬೂತ್‌ ಮಟ್ಟದಿಂದ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಪ್ರತಿಯೊಂದು ಮತಗಟ್ಟೆಗಳಲ್ಲಿ ವಾಟ್ಸ್‌ಅಪ್‌ ಗುಂಪುಗಳನ್ನು ರಚಿಸಬೇಕು. ಸಾಧ್ಯವಾದಷ್ಟು ಹೆಚ್ಚಿನ ಜನರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕಿಸಲು ಪ್ರಯತ್ನಿಸಬೇಕು. ಈ ಮೂಲಕ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಅಲ್ಲದೇ, ಚುನಾವಣೆ ತಾಯಾರಿ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲ ಪೂರ್ವನಿಗದಿತ ಕಾರ್ಯಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಅರಬಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನೀಲ ಪಾಶ್ಚಾಪೂರ, ಬಸವರಾಜ ಮಾಳೇದವರ, ಮೂಡಲಗಿ ತಾಲೂಕು ಭೂ ನ್ಯಾಯಮಂಡಳಿ ಸದಸ್ಯ ಬಸವರಾಜ ಕಾಡಾಪೂರ, ಶಬ್ಬೀರ್‌ ತಾಂಬಿಟಗಾರ, ರಾಮನಾಯ್ಕ ನಾಯ್ಕ, ಗಂಗಪ್ಪ ಡಬ್ಬನ್ನವರ, ನಿಜಗುಣಿ ಅಥಣಿ, ಮಹಾದೇವ ದಂಡಾಪೂರ, ಶಂಕರ ಇಂಚಲ, ಅಪ್ಪಯ್ಯ ಪಾಟೀಲ, ಸಲೀಮ ಜಮಾದಾರ, ಹಾಜಿ ನದಾಫ, ಪಾಂಡು ಮಹೇಂದ್ರಕರ, ಯುವಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಕೇದಾರಿ ಭಸ್ಮೆ, ಅಜೀತ ಪಾಟೀಲ, ಪರಪ್ಪ ಹಡಪದ, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಬಾವಿ ಮಂಡಲದ ಹುಣಶ್ಯಾಳ ಪಿಜಿ ಬೂತ್‌ ನಂ. 145 ಮತ್ತು 146 ರ ಬೂತ್‌ ಅಧ್ಯಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಬೂತ್‌ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದರು.

click me!