
ಮೈಸೂರು (ಮೇ.7): ಮೈಸೂರಿನ ಟಿ.ಕೆ. ಲೇಔಟ್‌ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಇಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಸಿಎಂ ಜೊತೆ ಸುದೀರ್ಘ ಮಾತುಕತೆ ನಡೆಸಿದ ರಾಜಣ್ಣ, ನಂತರ ಮಾಧ್ಯಮಗಳ ಮುಂದೆ ಹೈಕಮಾಂಡ್‌ಗೆ ನೇರ ಸಂದೇಶ ರವಾನಿಸಿದ್ದಾರೆ.
ಸಿಎಂ ಭೇಟಿಯ ಬಳಿಕ ಮಾತನಾಡಿದ ರಾಜಣ್ಣ, 'ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ, ಇರುತ್ತಾರೆ ಎಂದು ಕೂಡ ನಾನು ಹೇಳುವುದಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಅತಿ ಬೇಗ ಮತ್ತು ಜಾಗರೂಕವಾಗಿ ಒಂದು ಗಟ್ಟಿ ನಿರ್ಧಾರ ಕೈಗೊಳ್ಳಲಿ' ಎಂದು ಒತ್ತಾಯಿಸಿದರು.
ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ತಡವಾದಷ್ಟು ಅದು ಪಕ್ಷಕ್ಕೆ ಮತ್ತು ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರರು, ಅಧಿಕಾರ ಮುಂದುವರೆಸಿ ಎಂಬ 'ಗ್ರೀನ್ ಸಿಗ್ನಲ್' ಆದರೂ ಕೊಡಲಿ ಅಥವಾ ಬದಲಾವಣೆ ಮಾಡುತ್ತೇವೆ ಎಂಬ ನಿರ್ಧಾರವನ್ನಾದರೂ ಪ್ರಕಟಿಸಲಿ. ಈ ಎರಡು ಬಿಟ್ಟು ಬರಿ ಗೊಂದಲವೇ ಮುಂದುವರಿದರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ,' ಎಂದು ರಾಜಣ್ಣ ಎಚ್ಚರಿಸಿದರು.
ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಆಸೆಯ ಬಗ್ಗೆಯೂ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಆಸೆ ಇರುವುದು ಸಹಜ. ಅವರು ನಮ್ಮ ಪಕ್ಷದ ಅಧ್ಯಕ್ಷರು, ಹೀಗಾಗಿ ಅವರಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ. ಅದು ತಪ್ಪು ಕೂಡ ಅಲ್ಲ' ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.