
ಬೆಂಗಳೂರು (ಜೂ.5): ‘ಕಾಂಗ್ರೆಸ್ ಶಕ್ತಿ ಅಹಿಂದ ವರ್ಗಗಳಲ್ಲಿದೆ. ಅಹಿಂದ ಸಮುದಾಯಗಳನ್ನು ಎಷ್ಟರಮಟ್ಟಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂಬುದರ ಮೇಲೆ ಪಕ್ಷ ಹಾಗೂ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ’ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ, ‘ಸರ್ಕಾರ ಮತ್ತು ಪಕ್ಷ ಉತ್ತಮ ಪ್ರದರ್ಶನ ನೀಡಿದರೆ ಜನರ ಬೆಂಬಲ ದೊರೆಯುತ್ತದೆ. ಇಲ್ಲದಿದ್ದರೆ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಆಯ್ಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜಣ್ಣ, ಹೈಕಮಾಂಡ್ ನಿರ್ಧಾರ ಮಾಡಿದ ಮೇಲೆ ಬ್ಯಾಡ್ ಚಾಯ್ಸ್ (ಕೆಟ್ಟ ಆಯ್ಕೆ) ಅಂತ ಹೇಳಲಾಗಲ್ಲ. ಆಯ್ಕೆಗೂ ಮುನ್ನ ಕೇಳಿದ್ದರೆ, ಗುಡ್ (ಒಳ್ಳೆಯದು) ಯಾವುದು ಮತ್ತು ಬ್ಯಾಡ್ (ಕೆಟ್ಟದ್ದು) ಯಾವುದು ಅಂತ ಹೇಳಬಹುದು’ ಎಂದರು.
ಇದೇ ವೇಳೆ ಬಿ.ಕೆ.ಹರಿಪ್ರಸಾದ್ ಆಯ್ಕೆ ಬಗ್ಗೆ ಕೇಳಿದಾಗ, ‘ಆಯ್ಕೆ ಬಹಳ ಸಂತೋಷ ತರುವಂತಹದ್ದು. ನಾವಿಬ್ಬರೂ ಜತೆಯಲ್ಲೇ ಯುವ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದೇವೆ. ಹೋರಾಟದಿಂದ ಬಂದ ಅವರು, ಸಾಕಷ್ಟು ಅನುಭವ ಹೊಂದಿದ್ದಾರೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.