ರಾಮನಗರ ಹೆಸರನ್ನು ಹೇಗೆ ಬದಲಿಸಬೇಕೆಂದು ಗೊತ್ತು: ಡಿ.ಕೆ.ಶಿವಕುಮಾರ್

Published : Apr 27, 2025, 05:25 AM ISTUpdated : Apr 27, 2025, 08:18 AM IST
ರಾಮನಗರ ಹೆಸರನ್ನು ಹೇಗೆ ಬದಲಿಸಬೇಕೆಂದು ಗೊತ್ತು: ಡಿ.ಕೆ.ಶಿವಕುಮಾರ್

ಸಾರಾಂಶ

ರಾಮನಗರ ಹೆಸರು ಬದಲಾವಣೆಯನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಶಿವಕುಮಾರ್  ಗುಡುಗಿದ್ದಾರೆ.

ಮೈಸೂರು (ಏ.27): ರಾಮನಗರ ಹೆಸರು ಬದಲಾವಣೆಯನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನು ಹೊರಗಿನಿಂದ ಬಂದವನಲ್ಲ. ನಮ್ಮ ಭೂಮಿ‌ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರೂ ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ: ಟೌನ್ ಶಿಪ್ ಪಿತಾಮಹ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ನಿರ್ಮಾಣ ಮಾಡುತ್ತೇವೆ. ಇದು ಮಾದರಿ ನಗರವಾಗಿರುತ್ತದೆ ಎಂದು ಶಿವಕುಮಾರ್‌ ಹೇಳಿದರು. ಬಿಡದಿ ಟೌನ್‌ಶಿಪ್‌ಗೆ ರೈತರು ಭೂಮಿ ಕೊಡದಂತೆ - ಯೋಜನೆ ಕೈಬಿಡುವಂತೆ ದೇವೇಗೌಡರು ಸಿಎಂಗೆ ಪತ್ರ ಬರೆದಿದ್ದಾರೆ. ಆದರೆ ಒಟ್ಟು 7 ಟೌನ್‌ಶಿಪ್‌ ಮಾಡಲು ಕುಮಾರಸ್ವಾಮಿ ಕಾಲದಲ್ಲಿಯೇ ತೀರ್ಮಾನ ಆಗಿತ್ತು. 

ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ನಾನು ಡಿನೋಟಿಫಿಕೇಷನ್‌ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು. ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲವಾದರೆ ಅಭಿವೃದ್ಧಿಪಡಿಸಿದ ಭೂಮಿ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಅವರು ತಿರುಗೇಟು ನೀಡಿದರು.

ದಸರಾ ವೇಳೆಗೆ ಕಾವೇರಿ ಆರತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ: ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗಿಯಾದರು. ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದ ನಂತರ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಂದ ಬೆಳ್ಳಿ ರಥೋತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಕೆ ಶಿವಕುಮಾರ್‌ಗೆ ಶ್ರೀಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಾದ್ಯ ಮೇಳಗಳೊಂದಿಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು. ಈ ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!