*ರಂಗೇರಿದ ವಿಧಾನಪರಿಷತ್ ಚುನಾವಣೆ
* ಒಂದೇ ದಿನ ಎರಡೆರಡು ಅಚ್ಚರಿಯ ರಾಜಕೀಯ ಬೆಳವಣಿಗೆಗಳು
* ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್
ಕೋಲಾರ, (ನ.27): ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ (Karnataka MLC Election) ರಂಗೇರಿದೆ. ಇದರ ಮಧ್ಯೆ ನಾಯಕರ ಪಕ್ಷಾಂತರ ಪರ್ವ ಸಹ ಶುರುವಾಗಿದೆ.
ಹೌದು...ವಿಧಾನಪರಿಷತ್ ಚುನಾವಣೆ ನಡುವೆ ಕೋಲಾರ ಕಾಂಗ್ರೆಸ್ )Kolar Congress) ಜಿಲ್ಲಾಧ್ಯಕ್ಷ ದಿಢೀರ್ ಬಿಜೆಪಿ ಸೇರಿದ್ದು, ಅಚ್ಚರಿಗೆ ಕಾರಣವಾಗಿದೆ.
undefined
ಅನುಭವಿ, ಹಿರಿಯ ನಾಯಕ ಕಾಂಗ್ರೆಸ್‌ಗೆ ಬಂದ್ರೆ ಒಳ್ಳೆಯದು: ಜೆಡಿಎಸ್ MLAಗೆ ರಮೇಶ್ ಕುಮಾರ್ ಆಹ್ವಾನ
ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ(olar Congress President) ಚಂದ್ರಾರೆಡ್ಡಿ(Chandra Reddy) ಇಂದು (ನವೆಂಬರ್ 27) ರಾಜೀನಾಮೆ ಪತ್ರವನ್ನು ತಮ್ಮ ಆಪ್ತರ ಮೂಲಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಿಗೆ ತಲುಪಿಸಿ, ಬಳಿಕ ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಎರಡೆರಡು ಅಚ್ಚರಿಯ ರಾಜಕೀಯ ಬೆಳವಣಿಗೆಗಳು
ಒಂದೆಡೆ ಚಂದ್ರಾರೆಡ್ಡಿಯನ್ನು ಬುಟ್ಟಿಗೆ ಹಾಕಿಕೊಂಡಿರುವ ಬಿಜೆಪಿ (BJP)ನಾಯಕರು ಇದೀಗ ಕೋಲಾರದ ಮಾಜಿ ಶಾಸಕ ವರ್ತೂರ್ ಪ್ರಕಾಶ್‌ನ್ನು (Varthur Prakash) ಭೇಟಿಯಾಗಿ ಮತ್ತೊಂದು ಅಚ್ಚರಿ ಹುಟ್ಟಿಸಿದ್ದಾರೆ.
ಸಚಿವರಾದ ಕೆ. ಸುಧಾಕರ್(Dr K Sudhakar), ಮುನಿರತ್ನ, ಸಂಸದ ಮುನಿಸ್ವಾಮಿ, ಶಾಸಕ ಎಚ್. ನಾಗೇಶ್ ವರ್ತೂರ್ ಪ್ರಕಾಶ್ ಅವರ ಮನೆಗೆ ಭೇಟಿ ನೀಡಿ ಅವರ ಮನೆಯಲ್ಲಿ ಊಟ ಸೇವಿಸಿದ್ದಾರೆ. ಮಧ್ಯಾಹ್ನ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ನಾಯಕರಿಂದ ವರ್ತೂರ್ ಪ್ರಕಾಶ್ ಭೇಟಿ ನಡೆದಿದ್ದು ಕೋಲಾರದಲ್ಲಿ ಒಂದೇ ದಿನದಲ್ಲಿ ಎರಡೆರಡು ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆದಿವೆ.
MLC ಟಿಕೆಟ್ ಆಕಾಂಕ್ಷಿಯಾಗಿದ್ದ ಚಂದ್ರಾರೆಡ್ಡಿ
ಪರಿಷತ್ ಚುನಾವಣೆ ಟಿಕೆಟ್ ಅಕಾಂಕ್ಷಿಯಾಗಿದ್ದ ಚಂದ್ರಾರೆಡ್ಡಿ, ಟಿಕೆಟ್ ಕೈ ತಪ್ಪಿದ ಬಳಿಕ ಯಾರೋಬ್ಬರು ಮಾತನಾಡಿಸದ ಹಿನ್ನಲೆ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಬೆಂಬಲದ ನಿರೀಕ್ಷೆಯಲ್ಲಿದ್ದ ಚಂದ್ರಾರೆಡ್ಡಿ ಈಗ ಬಿಜೆಪಿಗೆ ಸೇರಿದ್ದಾರೆ. ಚಂದ್ರಾರೆಡ್ಡಿ ನಡೆಯಿಂದ ಕಾಂಗ್ರೆಸ್‌ಗೆ ಭಾರೀ ಹೊಡೆತಬಿದ್ದಿದೆ.
ಬಿಜೆಪಿ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಾರೆಡ್ಡಿ, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ ಆಗಿದೆ. ಹಾಗಾಗಿ ಬೇಸತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದೆ. ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
6 ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಟಿಕೆಟ್ ಕೊಡುವುದಾಗಿ ಹೇಳಿ ನನ್ನ ಕತ್ತಲಲ್ಲಿಟ್ಟರು. ಸ್ಥಳೀಯ ಶಾಸಕರು ನಮಗೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ನನ್ನ ಸೇವೆಯನ್ನು ಪರಿಗಣಿಸಿಲ್ಲ. ಹಾಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದೆ ಎಂದರು.
ಇದೇ ವೇಳೆ ಕೆಲವು ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪುರಸಭೆ ಸದಸ್ಯರು ಬಿಜೆಪಿಗೆ ಸೇರ್ಪಡೆಯಾದರು. ಚಂದ್ರಾರೆಡ್ಡಿ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ.
ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೆರೆ ಹಾನಿ ಪರಿಸ್ಥಿತಿ ಅವಲೋಕನಕ್ಕೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾಗ ಅವರನ್ನು ಸ್ವಾಗತಿಸಲೂ ಕೆ. ಚಂದ್ರಾರೆಡ್ಡಿ ಬಂದಿರಲಿಲ್ಲ. ಅಲ್ಲದೆ, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಿಂದಲೂ ಚಂದ್ರಾರೆಡ್ಡಿ ಅಂತರ ಕಾಪಾಡಿಕೊಂಡಿದ್ದರು.
ಇನ್ನು ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.
ಮಾಜಿ ಸ್ಪೀಕರ್ ಶಾಸಕ ರಮೇಶ್ ಕುಮಾರ್ ಅವರು, ಕಾಂಗ್ರೆಸ್‌ಗೆ ಬಂದ್ರೆ ಒಳ್ಳೆಯದು ಎಂದು ಶ್ರೀನಿವಾಸಗೌಡಗೆ ಬಹಿರಂಗವಾಗಿಯೇ ಆಹ್ವಾನ ಕೊಟ್ಟಿದ್ದಾರೆ.