ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

Published : Sep 15, 2021, 03:50 PM IST
ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಸಾರಾಂಶ

* ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ * ಇಂದು (ಸೆ.15) ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಶ್ರೀನಿವಾಸ್ ಗೌಡ * ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಭೇಟಿ

ಬೆಂಗಳೂರು, (ಸೆ.15): ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹೌದು.. ಇಂದು (ಸೆ.15) ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರನ್ನ ಭೇಟಿ ಮಾಡಿ ಒಂದು ಗಂಟೆ ಕಾಲ ರಹಸ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ದೇವೇಗೌಡ ಖಡಕ್ ಸೂಚನೆ: ಪಕ್ಷದಿಂದ ಉಚ್ಛಾಟನೆ ಆಗ್ತಾರಾ ಜೆಡಿಎಸ್ ಶಾಸಕ?

ಶ್ರೀನಿವಾಸ್ ಗೌಡ ವಿರುದ್ಧ ಕ್ರಮಕೈಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ ಬೆನ್ನಲ್ಲೇ ದಿಢೀರ್ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಈಗಾಗಲೇ ಪಕ್ಷದ ವರಿಷ್ಠರ ವಿರುದ್ಧ ಶ್ರೀನಿವಾಸ್ ಗೌಡ ತಿರುಗಿಬಿದ್ದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದರಿಂದ ದೇವೇಗೌಡ್ರು ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು.

ಇದರ ಬೆನ್ನಲ್ಲೇ ಡಿಕೆಶಿ ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ