ಸಂಸದ ಮುನಿಸ್ವಾಮಿಗೆ ಬಿಜೆಪಿ ಟಿಕೆಟ್‌ ಸಿಗುವುದಿಲ್ಲ: ಶಾಸಕ ನಾರಾಯಣಸ್ವಾಮಿ ಭವಿಷ್ಯ

Published : Jul 17, 2023, 09:03 PM IST
ಸಂಸದ ಮುನಿಸ್ವಾಮಿಗೆ ಬಿಜೆಪಿ ಟಿಕೆಟ್‌ ಸಿಗುವುದಿಲ್ಲ: ಶಾಸಕ ನಾರಾಯಣಸ್ವಾಮಿ ಭವಿಷ್ಯ

ಸಾರಾಂಶ

ಜೆಡಿಎಸ್‌ ಪಕ್ಷವು ಬಿಜೆಪಿಯ ಬಿ ಟೀಂ ಆಗಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲಿವೆ. ಹಾಲಿ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿಗೆ ಟಿಕೆಟ್‌ ದೊರೆಯುವುದಿಲ್ಲ. 

ಬಂಗಾರಪೇಟೆ (ಜು.17): ಜೆಡಿಎಸ್‌ ಪಕ್ಷವು ಬಿಜೆಪಿಯ ಬಿ ಟೀಂ ಆಗಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲಿವೆ. ಹಾಲಿ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿಗೆ ಟಿಕೆಟ್‌ ದೊರೆಯುವುದಿಲ್ಲ. ಒಂದು ವೇಳೆ ಟಿಕೆಟ್‌ ಸಿಕ್ಕರೂ ಕಾಂಗ್ರೆಸ್ಸಿನ ಸಾಮಾನ್ಯ ಕಾರ‍್ಯಕರ್ತನ ಎದುರು ಸೋಲುವುದು ಖಚಿತ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಭವಿಷ್ಯ ನುಡಿದರು.

ತಾಲೂಕಿನ ಡಿ.ಕೆ.ಹಳ್ಳಿ ಗ್ರಾಮ ಪಂಚಯ್ತಿ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಶಾಸಕರು ಹ್ಯಾಟ್ರಿಕ್‌ ಗೆಲುವು ಸಾಧಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡರ, ಕಾರ‍್ಯಕರ್ತರು ಹಮ್ಮಿಕೊಂಡಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಬಿಜೆಪಿ ಪಕ್ಷದ ಬಿ ಟೀಮ್‌ ಎಂದು ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ತಿಳಿಸಿದ್ದೆ, ಅದಕ್ಕೆ ಪುಷ್ಟಿನೀಡುವಂತೆ ಸದನದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ರಾಜಕಾರಣದಲ್ಲಿ ಹೊಂದಾಣಿಕೆ ಸಹಜ ಪ್ರಕ್ರಿಯೆ ಎನ್ನುವುದರ ಮೂಲಕ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದರು.

ಕಟ್ಟುನಿಟ್ಟಾಗಿ ತೆರಿಗೆ ವಸೂಲಿ ಮಾಡಲು ಸೂಚನೆ: ಶಾಸಕಿ ರೂಪಕಲಾ

360 ಭರವಸೆಯಲ್ಲಿ 30 ಈಡೇರಿಕೆ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಲ್ಲಿ 360ಕ್ಕೂ ಹೆಚ್ಚು ಭರವಸೆಗಳನ್ನು ನೀಡಿತ್ತು. ಆದರೆ, ಈಡೇರಿಸಿದ್ದು ಕೇವಲ 30 ಮಾತ್ರ. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗಾಗಿ ನೀಡಿದ್ದ 3 ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ. ಮೋದಿ ಅವರು ಒಂದು ರೂಪಾಯಿಯನ್ನು ಸಾಲ ಮನ್ನಾ ಮಾಡಲಿಲ್ಲ. ಇದರೊಂದಿಗೆ ರೈತರಿಗೆ ಮಾರಕವಾದ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತಂದು ಹಲವು ಜನರ ಸಾವಿಗೆ ಕಾರಣರಾದರು. ಇಂತಹ ಬಿಜೆಪಿ ನಾಯಕರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಬಿಜೆಪಿ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಈ ಅವಧಿಯಲ್ಲಿ ತಾಲೂಕಿನ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ನಕಲಿ ಇ- ಖಾತೆ, ಬಿಲ…, ಮತ್ತು 15ನೇ ಹಣಕಾಸು ಯೋಜನೆಯನ್ನು ಸಂಪೂರ್ಣವಾಗಿ ಅಧ್ಯಕ್ಷರು, ಸದಸ್ಯರು, ಕೆಲವು ಅಧಿಕಾರಿಗಳು ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ, ಇವರ ವಿರುದ್ಧ ಅತಿ ಶೀಘ್ರದಲ್ಲಿ ತನಿಖೆಗೆ ಆದೇಶ ನೀಡಲಾಗುವುದು ಎಚ್ಚರಿಸಿದರು.

ಗೋಪಾಲರೆಡ್ಡಿಗೆ ಜಿಪಂ ಟಿಕೆಟ್‌?: ಡಿ.ಕೆ.ಹಳ್ಳಿ ಗ್ರಾಪಂ ಸದಸ್ಯ ಗೋಪಾಲರೆಡ್ಡಿ ಹಲವು ವರ್ಷಗಳಿಂದ ನಿರಂತರ ಕಾಂಗ್ರೆಸ್‌ ಪಕ್ಷದ ಸೇವೆಯಲ್ಲಿ ಕಾರ‍್ಯಪ್ರವೃತ್ತರಾಗಿದ್ದಾರೆ ಹಾಗೂ ಡಿ.ಕೆ.ಹಳ್ಳಿ ಜಿಲ್ಲಾ ಪಂಚಾಯಿತಿಯ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ, ಕಾಂಗ್ರೆಸ್ಸಿನ ವರಿಷ್ಠ ನಾಯಕರು ಟಿಕೆಟ್‌ ನೀಡುವ ಸಾಧ್ಯತೆ ಹೆಚ್ಚಾಗಿದ್ದು ಎಲ್ಲಾ ಕಾರ್ಯಕರ್ತರು ಸಂಘಟನಾತ್ಮಕವಾಗಿ ಚುನಾವಣೆಗೆ ಕಾರ‍್ಯಪ್ರವೃತ್ತರಾಗಿ ಇವರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಕಾಂಗ್ರೆಸ್‌ ಮುಖಂಡ ಗೋಪಾಲರೆಡ್ಡಿ ಬೆಳ್ಳಿಯ ಗಧೆ ಹಾಗೂ ಕಿರೀಟವನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿದರು. 

ಸರ್ಕಾರ ಸಂಘರ್ಷಕ್ಕಿಳಿದರೆ ಎದುರಿಸಲು ಸಿದ್ಧ: ಕೆಂಪಣ್ಣ ಎಚ್ಚರಿಕೆ

ಈ ಕಾರ‍್ಯಕ್ರಮದಲ್ಲಿ ಡಿ.ಕೆ.ಹಳ್ಳಿ ಗ್ರಾಪಂ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಅಮರಪ್ಪ ಹಾಗೂ ಬಿಜೆಪಿ ಪಕ್ಷದ ಪ್ರಭು ಎಂಬುವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಈ ಕಾರ‍್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜುಲು, ತಾಪಂ ಮಾಜಿ ಅಧ್ಯಕ್ಷ ಟಿ.ಮಹದೇವ್‌, ಗೋಪಾಲರೆಡ್ಡಿ, ರಾಮಯ್ಯ, ದೇಶಿಹಳ್ಳಿ ವೆಂಕಟರಾಮ್‌, ಎಸ್‌.ನಾರಾಯಣಗೌಡ, ಆ.ನಾ.ಹರೀಶ್‌, ರಾಮಣ್ಣ, ಸೀನಪ್ಪ, ರಫೀಕ್‌, ವೆಂಕಟೇಶ್‌, ಬಾಬು, ಸುರೇಶ್‌, ಕರಪನಹಳ್ಳಿ ಚಂದ್ರಪ್ಪ, ರಾಜಶೇಖರ್‌ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!