
ಬೆಂಗಳೂರು, (ಜು.27): ಸಿಎಂ ಬದಲಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ಶಾಸಕರೊಬ್ಬರು ಬಿಜೆಪಿಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಹೌದು...ಕೊಳ್ಳೆಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಸೇರ್ಪಡೆಗೆ ಮನಸ್ಸು ಮಾಡಿದ್ದು, ಈಗಾಗಲೇ ಬಿಜೆಪಿ ನಾಯಕರ ಜೊತೆ ಮಾತುಕತೆಗಳು ಆಗಿವೆ.
ಹಿರಿಯ ಮುಖಂಡರೋರ್ವರ ಭೇಟಿಯಾದ ಶಾಸಕ : BJP ಸೆರ್ಪಡೆಯ ಚರ್ಚೆ?
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮಹೇಶ್, ಕೊಳ್ಳೆಗಾಲ ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ನಾನು ಇನ್ನೂ ಯೋಚನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎನ್.ಮಹೇಶ್ ಅವರು, ಕಳೆದ ಎರಡು ವರ್ಷಗಳಿಂದ ಕ್ಷೇತ್ರಕ್ಕೆ ಬೇಕಾದ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದರು. ರಾಜ್ಯದ ಬಗ್ಗೆ ಬಿಎಸ್‌ವೈ ಅವರಿಗೆ ಇರುವಷ್ಟು ಅರಿವು ಬೇರೆ ಯಾರಿಗೂ ಇಲ್ಲ. ಆದರೆ ಈಗ ಬಿಜೆಪಿ ಹೈಕಮಾಂಡ್ ಈ ರೀತಿ ತೀರ್ಮಾನ ಮಾಡಿದೆ ನೋಡೋಣ ಮುಂದೇ ಏನಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.