
ಚಾಮರಾಜನಗರ(ನ.19): ನನಗೆ ಯಾವುದೇ ಆಫರ್ ಬಂದಿಲ್ಲ, ನನಗೆ ಬರುವುದೂ ಇಲ್ಲ. ನನ್ನನ್ನು ಯಾರೂ ಸಂಪರ್ಕಿಸಿಯೂ ಇಲ್ಲ. ನನ್ನ ಸಂಪರ್ಕ ಮಾಡಿದರೂ ಸಹ ನಾನು ಬಿಜೆಪಿಯ ಆಸೆ ಆಮಿಷಗಳಿಗೆ ಬಲಿಯಾಗುವವನಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ಬಿಟ್ಟು ಬಂದವನು ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದ್ದಾರೆ.
ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ವಿಚಾರದ ಬಗ್ಗೆ ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು, ಗ್ಯಾರಂಟಿ ಯೋಜನೆಗಳಿಂದ ಶಾಸಕರ ಅನುದಾನಕ್ಕೆ ಯಾವುದೇ ಕೊರೆತೆ ಆಗಿಲ್ಲ. ಮುಖ್ಯಮಂತ್ರಿಗಳು ಸೇರಿದಂತೆ ಇತರೆ ಇಲಾಖೆ ಸಚಿವರು ಸಾಕಷ್ಟು ಅನುದಾನ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. 136 ಶಾಸಕರಿಗೂ ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾಲದ ಕೋವಿಡ್ ಹಗರಣ: ನಮ್ಮ ಸರ್ಕಾರ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಸಚಿವ ಮಂಕಾಳ ವೈದ್ಯ
ಉಪಚುನಾವಣೆ ಫಲಿತಾಂಶ ಬಳಿಕ ಸಿದ್ದರಾಮಯ್ಯ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು, ಪಕ್ಷದ ತೀರ್ಮಾನದ ಆಧಾರದ ಮೇಲೆ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.