ಶಾಕ್ ಕೊಟ್ಟ ಕೋನರೆಡ್ಡಿ, ದೇವೇಗೌಡ್ರಿಗೆ ರಾಜೀನಾಮೆ ಸಲ್ಲಿಕೆ

Published : Sep 07, 2021, 04:11 PM IST
ಶಾಕ್ ಕೊಟ್ಟ ಕೋನರೆಡ್ಡಿ, ದೇವೇಗೌಡ್ರಿಗೆ ರಾಜೀನಾಮೆ ಸಲ್ಲಿಕೆ

ಸಾರಾಂಶ

* ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್​​ಗೆ ಹೀನಾಯ ಸೋಲು * ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜೀನಾಮೆ * ನೈತಿಕ ಹೊಣೆ ಹೊತ್ತು ಕೋನರೆಡ್ಡಿ ರಾಜೀನಾಮೆ‌

ಬೆಂಗಳೂರು, (ಸೆ.07): ಎನ್.ಎಚ್. ಕೋನರೆಡ್ಡಿ ಅವರು ತಮ್ಮ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಹೌದು...ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಸೋಲಿನ ಹೊಣೆಹೊತ್ತು ಇಂದು (ಸೆ.07) ರಾಜೀನಾಮೆ ನೀಡಿದ್ದಾರೆ. 

ಮಹಾನಗರ ಪಾಲಿಕೆ ಎಲೆಕ್ಷನ್ ರಿಸಲ್ಟ್: ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ನ ಹಿರಿಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಆದರೂ ನಿರೀಕ್ಷೆಗೆ ತಕ್ಕಂತೆ ಜೆಡಿಎಸ್ ಗೆಲುವು ಸಾಧಿಸಿಲ್ಲ ಎನ್ನುವ ಕಾರಣಕ್ಕೆ ಕೋನರೆಡ್ಡಿ ರಾಜೀನಾಮೆ ಕೊಟ್ಟಿದ್ದಾರೆ.

ಈ ಕುರಿತು ಕೋನರೆಡ್ಡಿ ಅವರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,25ನೇ ವಾರ್ಡ್ ನ ಜೆಡಿಎಸ್ ಅಭರ್ಥಿ ಲಕ್ಷ್ಮಿ ಮಾರುತಿ ಹಿಂಡಸಗೇರಿ ಓರ್ವರು ಮಾತ್ರ ಗೆಲುವು ಸಾಧಿಸಿದ್ದಾರೆ. ಅಭ್ಯರ್ಥಿಗಳ ಸೋಲು ನನ್ನ ಮನಸ್ಸಿಗೆ ನೋವು ತಂದಿದೆ. ಹಾಗಾಗಿ ಜೆಡಿಎಸ್​​ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿರೋದಾಗಿ ಸ್ಪಷ್ಟಪಡಿಸಿದ್ದಾರೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: 82(42 ಮ್ಯಾಜಿಕ್ ನಂಬರ್) ವಾರ್ಡ್‌ ಪೈಕಿ ಬಿಜೆಪಿ : 39, ಕಾಂಗ್ರೆಸ್: 33, ಪಕ್ಷೇತರ: 6, ಎಐಎಂಐಎಂ: 3, ಹಾಗೂ ಜೆಡಿಎಸ್: 1ರಲ್ಲಿ ಗೆಲ್ಲುವಲ್ಲಿ ಮಾತ್ರ ಸಾಧ್ಯವಾಗಿದೆ.  ಇನ್ನು ಯಾವ ಪಕ್ಷಕ್ಕೂ ಸ್ಪಷ್ಟಬಹುಮತ ಸಿಕ್ಕಿಲ್ಲ. ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ ಮತಗಳಿಂದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌