ಕರ್ನಾಟಕದ ಮತ್ತೋರ್ವ ಬಿಜೆಪಿ ಸಂಸದರಿಗೆ ಕೊರೋನಾ ದೃಢ

By Suvarna News  |  First Published Aug 19, 2020, 3:19 PM IST

ಕೊಪ್ಪಳ ಜಿಲ್ಲೆಯ ಮೂರು ಶಾಸಕರಿಗೆ ಕೊರೋನಾ ಸೋಂಕು ತಗುಲಿದ್ದ ಆಯ್ತು. ಇದೀಗ ಸಂಸದರಿಗೆ ಕೊರೋನಾ ಪಾಸಿಟಿವ್.


ಕೊಪ್ಪಳ, (ಆ.19): ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಒಳಗಾಗಿದ್ದಾರೆ. ಮಂಗಳವಾರ ಅಷ್ಟೇ ಕರಡಿ ಸಂಗಣ್ಣ ಅವರು ಸಿಂಧನೂರು ನಗರಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯರುಗಳನ್ನ ಸನ್ಮಾನಿಸಿದ್ದರು. ಅಲ್ಲದೇ ಹಲವರನ್ನ ಭೇಟಿ ಮಾಡಿದ್ದು, ಇದೀಗ ಅವರೆಲ್ಲರಿಗೂ ಕೊರೋನಾ ಆತಂಕ ಶುರುವಾಗಿದೆ.

Tap to resize

Latest Videos

ಸಂಸದ ಶ್ರೀನಿವಾಸ ಪ್ರಸಾದ್‌ಗೆ ಕೊರೋನಾ ದೃಢ: ಸಿಎಂ ಪುತ್ರ ವಿಜಯೇಂದ್ರಗೆ ಆತಂಕ..!

ಈ ಬಗ್ಗೆ  ಟ್ವೀಟ್ ಮಾಡಿರುವ ಸಂಗಣ್ಣ ಕರಡಿ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೊರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ.
ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು.

— KARADI SANGANNA (@SangannaKaradi)

ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕರುಗಳಿಗೆ ಕೊರೋನಾ ತಗುಲಿದ್ದನ್ನು ಇಲ್ಲಿ ಸ್ಮರಿಸಬಹುದು.

click me!