
ಕೊಪ್ಪಳ(ಆ.07): ರಾಜ್ಯದಲ್ಲಿನ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಯಲ್ಲಿ ತೊಟ್ಟಿಲು ಕಟ್ಟುವಂತಾಗಿದೆ. ಇನ್ನೂ ಅನೇಕ ಯೋಜನೆಗಳಿಗೆ ಹಣವೇ ಇಲ್ಲ ಎನ್ನುವಂತಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಾರೆ. ಇದು ಸಲ್ಲದು ಎಂದು ಸಂಸದ ಸಂಗಣ್ಣ ಕರಡಿ ವಾಗ್ದಾಳಿ ನಡೆಸಿದರು.
ಅಮೃತ ಭಾರತ ರೈಲು ನಿಲ್ದಾಣ ಪುನಾಭಿವೃದ್ಧಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರಧಾನಿ ಮೋದಿ ಅವರನ್ನು ಇಡೀ ಜಗತ್ತೇ ಮೆಚ್ಚಿದೆ. ಅಸೂಯೆ ಇರಬೇಕು. ಆದರೆ, ಅಭಿವೃದ್ಧಿಗಾದರೂ ಸಹಕಾರ ನೀಡಬೇಕಾಗುತ್ತದೆ. ನೀವು ಖಜಾನೆಯನ್ನೇ ಹಂಚಲು ಹೊರಟಿದ್ದೀರಿ, ಇನ್ನೊಬ್ಬರಿಗೆ ಬುದ್ಧಿ ಹೇಳ್ತೀರಾ? ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ, ಅದಕ್ಕಾಗಿ ಹಣ ವಿನಿಯೋಗಿಸಿ ಎಂದರು.
ವರ್ಗಾವಣೆ ಹಿಂದಿನ ಯಾವ ಸರ್ಕಾರದಲ್ಲೂ ಆಗಿಲ್ವೇ?: ಶಿವರಾಜ ತಂಗಡಗಿ ಪ್ರಶ್ನೆ
ಯಾವ ರಾಷ್ಟ್ರವು ರೈಲು, ವಾಯುಮಾರ್ಗ, ಜಲಮಾರ್ಗ, ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚಿಸುತ್ತದೆಯೋ ಆ ದೇಶವು ಜಗತ್ತಿನ ಮುಂದುವರಿದ ರಾಷ್ಟ್ರಗಳ ಪಟ್ಟಿಯಲ್ಲಿದೆ. ಈ ದಿಶೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೇಶದ 508 ರೈಲು ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಆಯ್ಕೆ ಮಾಡಿ ರೈಲು ನಿಲ್ದಾಣಗಳಲ್ಲಿ ಆಸನಗಳು, ಲಿ¶್ಟ… ವ್ಯವಸ್ಥೆ, ಪ್ರಯಾಣಿಕರಿಗೆ ಸುಸಜ್ಜಿತ ಸೌಲಭ್ಯ ಜತೆಗೆ ಆಕರ್ಷಕ ವಾಸ್ತು ಶಿಲ್ಪ, ಪ್ರಯಾಣಿಕರ ಸ್ನೇಹಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.
ಕೊಪ್ಪಳ ರೈಲು ನಿಲ್ದಾಣವನ್ನು .21 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ, ಮುನಿರಾಬಾದ್ ರೈಲು ನಿಲ್ದಾಣವನ್ನು .20 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲಾಗುತ್ತಿದೆ. ಹನುಮ ಜನ್ಮಭೂಮಿ ಅಂಜನಾದ್ರಿಗೆ ಸುಲಭ ಸಂಪರ್ಕ ಕಲ್ಪಿಸಲು ಗಂಗಾವತಿ ರೈಲು ನಿಲ್ದಾಣ ಅಭಿವೃದ್ಧಿಗೆ ಕೇಂದ್ರ ರೈಲ್ವೆ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಆನೆಗುಂದಿಯಲ್ಲಿ ರೋಪ್‌ವೇ ನಿರ್ಮಾಣಕ್ಕೂ ಕ್ರಮ ವಹಿಸಲಾಗುತ್ತಿದೆ. ಭಾಣಾಪುರ ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ. ಹುಲಿಗಿ ಸೇತುವೆ ನಿರ್ಮಾಣಕ್ಕೂ ಕ್ರಮ ವಹಿಸಲಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.