
ಬೆಂಗಳೂರು (ಡಿ.25): ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಆರು ತಿಂಗಳ ನಂತರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಆಯ್ಕೆ ಮಾಡಿತ್ತು. ಬಳಿಕ ವಿಧಾನ ಸಭೆಗೆ ವಿರೋಧ ಪಕ್ಷದ ನಾಯಕನನ್ನಾಗಿ ಆರ್ ಅಶೋಕ್ ಅವನ್ನು ಆಯ್ಕೆ ಮಾಡಿತ್ತು.
ಇದೀಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಿ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯಂತೆ ಈ ಆಯ್ಕೆ ನಡೆದಿದ್ದು, ಜೊತೆಗೆ ಬಿಜೆಪಿಗೆ ಹಲವು ನಾಯಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ. ಕೋಟಾ ಬಿಜೆಪಿಯ ಹಿರಿಯ ನಾಯಕರಾಗಿದ್ದು, ಸರಕಾರದ ವಿವಿಧ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. 2009 ರಲ್ಲಿ, ಅವರು ಮೊದಲ ಬಾರಿಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಹಲವು ಕಾರ್ಯಗಳನ್ನು ಮಾಡಿದ್ದಾರೆ.
ಇನ್ನುಳಿದಂತೆ ಸುನೀಲ್ ವಲ್ಯಾಪುರೆ ಅವರನ್ನು ಪರಿಷತ್ ಉಪನಾಯಕನನ್ನಾಗಿ ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಕೆಳಮನೆಯ ಉಪನಾಯಕ, ರವಿಕುಮಾರ್ ಪರಿಷತ್ ಸಚೇತಕ, ದೊಡ್ಡನಗೌಡ ಜಿ ಪಾಟೀಲ್ ಕೆಳಮನೆಯ ಸಚೇತಕ ನನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.