ಬರ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಬೇಡ: ಕೋಟ ಶ್ರೀನಿವಾಸ್ ಪೂಜಾರಿ

By Govindaraj S  |  First Published Dec 30, 2023, 4:23 AM IST

ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರವನ್ನ ದೂರುತ್ತಿದೆ. ಅದರ ಬದಲು ರಾಜ್ಯ ಸರ್ಕಾರವೇ 10 ಸಾವಿರ ಕೋಟಿ ರು. ಘೋಷಿಸಲಿ, ಕೇಂದ್ರ ಸರ್ಕಾರದ ಜತೆ ನಾವು ನೀವು ಒಟ್ಟಾಗಿ ಮಾತನಾಡೋಣ. 
 


ಮಂಗಳೂರು (ಡಿ.30): ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರವನ್ನ ದೂರುತ್ತಿದೆ. ಅದರ ಬದಲು ರಾಜ್ಯ ಸರ್ಕಾರವೇ 10 ಸಾವಿರ ಕೋಟಿ ರು. ಘೋಷಿಸಲಿ, ಕೇಂದ್ರ ಸರ್ಕಾರದ ಜತೆ ನಾವು ನೀವು ಒಟ್ಟಾಗಿ ಮಾತನಾಡೋಣ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವಕರು ಕಾಂಗ್ರೆಸ್‌ಗೆ ಬುದ್ಧಿಮಾತು ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಯುವನಿಧಿ ಯೋಜನೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ ಹಣ ಕೊಡುತ್ತೇವೆ ಎಂದು ಹೇಳಿದ್ದರು. 

ಆದರೆ ಈಗ 2022-23ರಲ್ಲಿ ಪದವಿ ಪೂರೈಸಿದ ನಿರುದ್ಯೋಗಿಗಳಿಗೆ ಮಾತ್ರ ಎನ್ನುತ್ತಿದ್ದಾರೆ. ಕರ್ನಾಟಕ ಸರ್ಕಾರ ಆಡಳಿತದಲ್ಲಿ ವಿಫಲವಾಗಿ ಅಸಹಾಯಕವಾಗಿದೆ. ಬರ ನಿರ್ವಹಣೆ,‌ ಕಾನೂನು ಸುವ್ಯವಸ್ಥೆ ಎಲ್ಲ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸುವ ವಿಚಾರದಲ್ಲಿ ಸರ್ಕಾರ ಮುಳುಗಿದೆ ಎಂದರು. ಶಾಸಕ ಬಸನಗೌಡ ಪಾಟೀಳ್‌ ಯತ್ನಾಳರ ಹೇಳಿಕೆ ಪ್ರಕರಣ ನಮ್ಮ ವರಿಷ್ಠರ ಮುಂದಿದೆ. ಅವರು ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಾವು ಕಾಯುತ್ತಿದ್ದೇವೆ. ಬಹಳ ದಿನಗಳಿಂದ ಇಂಥದ್ದೆಲ್ಲ ನಡೆಯುತ್ತಿದೆ. ಸದ್ಯದಲ್ಲೇ ಅದೆಲ್ಲಾ ಅಂತ್ಯ ಕಾಣುತ್ತದೆ ಎಂದರು.

Tap to resize

Latest Videos

1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್‌ ಗಡುವು: ಸಿಎಂ ಸಿದ್ದರಾಮಯ್ಯ ಸೂಚನೆ

ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬರ ಅಧ್ಯಯನ: ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಬರದಿಂದಾಗಿ ಒಣಗಿದೆ. ಇದರಿಂದಾಗಿ 33 ಸಾವಿರ ಕೋಟಿ ನಷ್ಟವಾಗಿದ್ದು, ಬಿಜೆಪಿ ಬರ ಅಧ್ಯಯನ ಆರಂಭಿಸಿದ ಬಳಿಕ ಜನರ ಕಣ್ಣಿಗೆ ಮಂಕು ಬಳಿಯಲು ಕೇವಲ 324 ಕೋಟಿ ಹಣ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆರೋಪಿದರು. ಹೋಬಳಿಯ ಕೊಯಿರ, ಶ್ಯಾನಪ್ಪನಹಳ್ಳಿ ಹೊಸಹಳ್ಳಿ ಭಾಗದ ರೈತರನ್ನು ಭೇಟಿ ಮಾಡಿ ಬರದಿಂದಾಗಿರುವ ನಷ್ಟವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಾವಿರಾರು ಎಕರೆ ಜೋಳ ಬೆಳೆದಿದ್ದ ರೈತನ ಕೈಯಲ್ಲಿ ಒಂದು ತೆನೆ ಫಸಲಿಲ್ಲ. ರಾಗಿ ಬೆಳೆದವರು ಸಂಪೂರ್ಣವಾಗಿ ಬತ್ತಿಹೋಗಿದ್ದಾರೆ. ಕಡಲೆ ಹಾಕಿದವರು ಭೂಮಿಯಲ್ಲಿ ಇಂಗಿ ಹೋಗಿದ್ದಾರೆ. ಇಂತಹ ಧಾರುಣ ಪರಿಸ್ಥಿತಿಯಲ್ಲಿ ರೈತರ ಬಳಿ ರಾಜ್ಯ ಸರ್ಕಾರ ಧಾವಿಸಿ ಬರಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ರಾಜಕಾರಣಿ ಎನ್ನುತ್ತಾರೆ, ಬಿಜೆಪಿ ಬರ ಅಧ್ಯಯನ ಕೈಗೊಳ್ಳುವ ಮುನ್ನವೇ ರಾಜ್ಯ ಸರ್ಕಾರ ಬರ ಪರಿಹಾರ ಘೋಷಿಸುತ್ತದೆ ಎಂದು ಭಾವಿಸಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ಬರದಲ್ಲಿ ಪರಿತಪಿಸುತ್ತಿರುವ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. 

ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ, ವಸೂಲಾತಿ ಮುಂದೂಡಿ: ಶಾಸಕ ಜಿ.ಟಿ.ದೇವೇಗೌಡ ಒತ್ತಾಯ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಮರ್ಥ ಆಡಳಿತ ನಡೆಸಲು ವಿಫಲವಾಗಿದೆ. ಈ ಹಿಂದೆ ಯಡಿಯೂರಪ್ಪನವರ ಅವಧಿಯಲ್ಲಿ ಪ್ರವಾಹದಿಂದ ಮನೆ ಹಾನಿಯ ಪರಿಹಾರವಾಗಿ 5 ಲಕ್ಷ ದುರಸ್ತಿದಾಗಿ ಹಣ ಬಿಡುಗಡೆ ಮಾಡಿದ್ದರು. ಆಗ ಕೇಂದ್ರದ ಕಡೆ ಬೆಟ್ಟು ಮಾಡಿ ತೋರಿಸಿರಲಿಲ್ಲ. ಅಪಾರ ಪ್ರಮಾಣದಲ್ಲಿ ಜಮೀನು ಮಳೆಯಿಲ್ಲದೇ ರೈತರು ನಲುಗಿದರೂ 1 ರುಪಾಯಿ ಪರಿಹಾರ ನೀಡಿಲ್ಲ. ಜಿಲ್ಲಾಡಳಿತದೊಂದಿಗೆ ಮಾತನಾಡಿದಾಗ ಅಲ್ಪ ಪ್ರಮಾಣದಲ್ಲಿ ಹಣ ನೀಡಿದ್ದರೂ, ಅದರ ಬಳಕೆಗೆ ಮುಕ್ತ ಹಸ್ತವನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂದು ಜಿಲ್ಲಾಡಳಿತಕ್ಕೆ ನೀಡಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

click me!