ಒಂದು ಕಡೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಸ್ವಪಕ್ಷದ ನಾಯಕರೇ ಸದ್ದಿಲ್ಲದೇ ಗದ್ದಲ ಎಬ್ಬಿಸುತ್ತಿದ್ದರೆ, ಮತ್ತೊಂದೆಡೆ ಕೆಪಿಸಿಸಿಗೆ ನೂತನ ಪದಾಧಿಕಾರಿಗಳಾಗಿ ನೇಮಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ರೆಸ್ ಕೋರ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದರು. ಈ ಮೂಲಕ ನಾಲ್ವರು ಒಗ್ಗಟ್ಟು ಪ್ರದರ್ಶನ ಮಾಡಿದರು.
ಬೆಂಗಳೂರು, (ಮಾ.16): ರಾಜ್ಯ ಬಿಜೆಪಿಯಲ್ಲಿ ಒಳಗಿಂದೊಳಗೆ ಅಸಮಾಧಾನದ ಹೊಗೆ ಆರಂಭಿಸಿದೆ. ಬಿಎಸ್‌ವೈ ವಿರುದ್ಧವಾಗಿ ಕೆಲವು ಅಸಮಾಧಾನಿತ ಶಾಸಕರು ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ.
ಮತ್ತೊಂದೆಡೆ ಕೊರೋನಾ ವೈರಸ್ ಲೆಕ್ಕಿಸದೇ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ನೂತನ ಪದಾಧಿಕಾರಿಗಳು ಒಗ್ಗಟ್ಟು ಪರದರ್ಶನ ಮಾಡಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದರು.
ಕೊರೋನಾ ವೈರಸ್ ಭೀತಿಯಿಂದಾಗಿ ರಾಜ್ಯದಲ್ಲಿ ಗುಂಪು-ಗುಂಪಾಗಿ ಸೇರುವುದು ಬೇಡ ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ, ಇದ್ಯಾವುದಕ್ಕೂ ಕ್ಯಾರೆ ಎನ್ನದ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಮತ್ತು ದಿನೇಶ್ ಗುಂಡೂರಾವ್ ಇಂದು (ಸೋಮವಾರ) ಇದೇ ಮೊದಲ ಬಾರಿಗೆ ಬೆಂಗಳೂರಿನ ರೆಸ್ ಕೋರ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದರು.
ಬಿಎಸ್‌ವೈ ವಿರುದ್ಧ ನಾನು ಪತ್ರ ಬರೆದಿಲ್ಲ: ಸಂತೋಷ್ ಆಣೆ
ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಮಾರ್ ಅವರು ಮೂವರು ಕಾರ್ಯಾಧ್ಯಕ್ಷರ ಜತೆ ಮೊದಲ ಸಭೆ ನಡೆಸಿದರು. ಇನ್ನ ಸಭೆಯಲ್ಲಿ ಪಕ್ಷ ಸಂಘಟನೆ, ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ನೂತನ ಕಾರ್ಯಾಧ್ಯಕ್ಷರ ಜತೆಗಿನ ಒಗ್ಗಟ್ಟು ಪ್ರದರ್ಶನದ ಕ್ಷಣವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಏಕತೆಯ ಮಂತ್ರ ಜಪಿಸಲು ಮುಂದಾದ ಡಿಕೆಶಿ
ಹೌದು..ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಸಿದ್ದರಾಮಯ್ಯ ಬಣದಿಂದ ತೀವ್ರ ಪ್ರಯತ್ನ ನಡೆಸಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಮಾಧಾನಪಡಿಸಿ ಒಟ್ಟಿಗೆ ಕರೆದೊಯ್ಯುವ ನಿಟ್ಟಿನಲ್ಲಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯತ್ನ ಆರಂಭಿಸಿದ್ದಾರೆ.
ಐವರು ಕಾಂಗ್ರೆಸ್ ಶಾಸಕರು ರಾಜೀನಾಮೆ: ಮತ್ತೆ ಅಖಾಡಕ್ಕಿಳಿಯುತ್ತಾರಾ ಡಿಕೆಶಿ..?
ಇನ್ನು ಕೆಪಿಸಿಸಿ ಅಧ್ಯಕ್ಷಗಾದಿಗಾಗಿ ಸಿದ್ದರಾಮಯ್ಯ ಬಣದಿಂದ ತೀವ್ರ ಪ್ರಯತ್ನ ನಡೆಸಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಮಾಧಾನಪಡಿಸಿ ಒಟ್ಟಿಗೆ ಕರೆದೊಯ್ಯುವ ನಿಟ್ಟಿನಲ್ಲಿ ಡಿಕೆಶಿ ಪ್ರಯತ್ನ ಆರಂಭಿಸಿದ್ದಾರೆ.
ಕೆಪಿಸಿಸಿ ನಾಯಕತ್ವಕ್ಕಾಗಿ ಸಾಕಷ್ಟು ಹೋರಾಟ ಮಾಡಿ ಲಿಂಗಾಯತ ಸಮುದಾಯದ ಪ್ರಭಾವ ಬೀರಲೆತ್ನಿಸಿದ್ದರೂ ಸಹ ಎಂ.ಬಿ.ಪಾಟೀಲ್ ಅವರಿಗೆ ಪಕ್ಷದ ಸಾರಥ್ಯ ದೊರೆಯಲಿಲ್ಲ.
ಹೀಗಾಗಿ ಡಿ.ಕೆ. ಶಿವಕುಮಾರ್ ತಾವು ಅಧಿಕಾರ ವಹಿಸಿಕೊಳ್ಳುವ ಮುನ್ನ ಎಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಿ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಖುದ್ದಾಗಿ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಸಹಕಾರ ಕೋರಿದರು. ಉಭಯ ನಾಯಕರು ಪರಸ್ಪರ ಏಕತೆಯ ಮಂತ್ರ ಜಪಿಸಿದ್ದಾರೆ.