ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ರಚನೆ

By Suvarna News  |  First Published Jul 9, 2022, 10:51 PM IST

* ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ, 
* ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ರಚನೆ:
* ಖರ್ಗೆ, ಸಿದ್ದು, ಡಿಕೆಶಿ, ಸೇರಿ 32 ಜನರ ನೇಮಕ


ಬೆಂಗಳೂರು, (ಜುಲೈ.09): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿದ್ದು, ಆಗಲೇ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕ ಕಾಂಗ್ರೆಸ್‌ನ ವಿವಿಧ ವಿಭಾಗ ಹಾಗೂ ಘಟಕಗಳಿಗೆ ಪದಾಧಿಕಾರಿಗಳನ್ನ ನೇಮಿಸಿದೆ.

ಅದರಂತೆ ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಲಾಗಿದ್ದು, ಖರ್ಗೆ, ಸಿದ್ದು, ಡಿಕೆಶಿ, ಸೇರಿ 32 ಜನರ ನೇಮಕ ಮಾಡಲಾಗಿದೆ.

Tap to resize

Latest Videos

ಅರಮನೆ ಮೈದಾನದಲ್ಲಿ ಜು.13ಕ್ಕೆ ಸಿದ್ದರಾಮೋತ್ಸವ ಪೂರ್ವಸಿದ್ಧತೆ ಸಭೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಮಾರ್ಗರೇಟ್‌ ಆಳ್ವಾ, ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ದಿನೇಶ್‌ಗುಂಡೂರಾವ್‌, ಕೆ.ಜೆ.ಜಾರ್ಜ್‌ , ಕೃಷ್ಣ ಬೈರೇಗೌಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್‌ ಖಂಡ್ರೆ, ಸಲೀಂ ಅಹಮದ್‌, ಸತೀಶ್‌ ಜಾರಕಿಹೊಳಿ, ಧ್ರುವನಾರಾಯಣ, ಸಂಸದ ಡಿ.ಕೆ.ಸುರೇಶ್‌, ಶಾಸಕರಾದ ಯು.ಟಿ.ಖಾದರ್‌, ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಸುನಿಲ್‌ ಕಾನುಗೋಳು, ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಎನ್‌.ಎಸ್‌.ಬೋಸರಾಜು, ಸಂದೀಪ್‌ ಸದಸ್ಯರಾಗಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಎಚ್‌.ಆಂಜನೇಯ, ರಮಾನಾಥ್‌ ರೈ, ವಿನಯ್‌ಕುಮಾರ್‌ ಸೊರಕೆ, ರಾಣಿ ಸತೀಶ್‌, ಉಮಾಶ್ರೀ , ಲಕ್ಷ್ಮಿ ಹೆಬ್ಟಾಳ್ಕರ್‌, ಡಾ.ಅಂಜಲಿ ನಿಂಬಾಳ್ಕರ್‌ ಅವರನ್ನು ನೇಮಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯ ಉಸ್ತವಾರಿಗಳಾಗಿ ಎಐಸಿಸಿ ಕಾರ್ಯದರ್ಶಿಗಳಾದ ಡಿ.ಶ್ರೀಧರ್‌ ಬಾಬು, ಪಿ.ಸಿ.ವಿಷ್ಣುನಂದನ್‌, ಎಂ.ಜಾನ್‌, ಮಯೂರ ಎಸ್‌.ಜಯಕುಮಾರ್‌, ಅಭಿಷೇಕ್‌ ದತ್‌ ಅವರನ್ನು ನೇಮಿಸಲಾಗಿದೆ.

ಇನ್ನು  ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಶಾಸಕ ಪ್ರಿಯಾಂಕ್ ಖರ್ಗೆ, ಸಹ ಅಧ್ಯಕ್ಷರಾಗಿ ಮನ್ಸೂರ್ ಅಲಿ ಖಾನ್ ಅವರನ್ನು ನೇಮಕ ಮಾಡಲಾಗಿದೆ. 

click me!