
ಬೆಂಗಳೂರು (ಜು.25): ಮಂತ್ರಿ ಸ್ಥಾನ ಸಿಗದೇ ಇದ್ದ ಕಾರಣಕ್ಕೆ ತಮ್ಮ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಸರ್ಕಾರ ಹಾಗೂ ಸಿಎಂ ಸಿದ್ಧರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಮಂಗಳವಾರ ರಾತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆಸ ಡಿಕೆ ಶಿವಕುಮಾರ್ ಅವರ ಜೊತೆಯಲ್ಲಿ ಆಹಾರ ಹಾಗೂ ನಾಗರೀಕ ಖಾತೆ ಸಚಿವ ಕೆಎಚ್ ಮುನಿಯಪ್ಪ, ಕಾಂಗ್ರೆಸ್ ಹಿರಿಯ ನಾಯಕ ಬಿ ಎಲ್ ಶಂಕರ್ ಕೂಡ ಭಾಗಿಯಾಗಿದ್ದರು. ಹರಿಪ್ರಸಾದ್ ಅವರ ನಿವಾಸದಲ್ಲಿ ಭೇಟಿಯಾದ ಮೂವರು ನಾಯಕರು ಮಾತುಕತೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಅಬ್ಬರಿಸಿದ್ದರು. ಸಿದ್ದರಾಮಯ್ಯ ವಿರುದ ಆಕ್ರೋಶ ಹೊರಹಾಕಿದ ಬೆನ್ನಲ್ಲಿಯೇ ಹರಿಪ್ರಸಾದ್ ಹಾಗೂ ಡಿಕೆ ಶಿವಕುಮಾರ್ ಅವರ ಭೇಟಿ ಕುತೂಹಲ ಮೂಡಿಸಿದೆ.
ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್
ಇತ್ತೀಚಿಗೆ ಈಡಿಗ-ಬಿಲ್ಲವ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿಕೆ ಹರಿಪ್ರಸಾದ್, ನನಗೆ ಸಿಎಂ ಅನ್ನು ಮಾಡೋದು ಗೊತ್ತು, ಅವರನ್ನು ಇಳಿಸೋದು ಗೊತ್ತು ಎಂದಿದ್ದಲ್ಲದೆ, ಸಿದ್ಧರಾಮಯ್ಯ ಅವರಿಂದ ರಾಜಕೀಯವಾಗಿ ಯಾವುದೇ ಲಾಭವಾಗಿಲ್ಲ. ನಮ್ಮ ಸಮುದಾಯವನ್ನು ರಾಜಕೀಯವಾಗಿ ತಿಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.
ರಾಜ್ಯದಲ್ಲಿ ಬಜರಂಗದಳ ನಿಷೇಧವನ್ನು ಮತ್ತೆ ಬೆಂಬಲಿಸಿದ ಬಿಕೆ ಹರಿಪ್ರಸಾದ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.