ಶಿರಾ ಉಪಚುನಾವಣೆ: ಕುಮಾರಸ್ವಾಮಿಗೆ ತಿರುಗೇಟು ನೀಡಿದ ಡಿಕೆಶಿ

Suvarna News   | Asianet News
Published : Oct 07, 2020, 02:24 PM ISTUpdated : Oct 07, 2020, 02:44 PM IST
ಶಿರಾ ಉಪಚುನಾವಣೆ: ಕುಮಾರಸ್ವಾಮಿಗೆ ತಿರುಗೇಟು ನೀಡಿದ ಡಿಕೆಶಿ

ಸಾರಾಂಶ

ರಾಜೇಶ್ ಗೌಡ ಏನು ನಮ್ಮ ಪಕ್ಷದ ಸದಸ್ಯ ಅಲ್ಲ. ಅವರ ತಂದೆ ನಮ್ಮ ಪಕ್ಷದಲ್ಲಿ ಎಂಪಿ ಆಗಿದ್ದರು. ಇವಾಗ ರಾಜೇಶ್ ಗೌಡ ಬಿಜೆಪಿಗೆ ಹೋಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಯಾಕೆ ರಾಜೇಶ್ ಗೌಡರನ್ನು ಬಿಜೆಪಿ ಕಳುಹಿಸುತ್ತಾರೆ ಎಂದ ಡಿಕೆಶಿ  

ಬೆಂಗಳೂರು(ಅ.07): ಮಾಜಿ ಸಿಎಂ, ಜೆಡಿಎಸ್‌ ನಾಯಕ ಹೆಚ್.ಡಿ. ಕುಮಾರಸ್ವಾಮಿ ಏನು ಬೇಕಾದರೂ ಹೇಳಲಿ, ಬಿಜೆಪಿಯವರು ಕೂಡ ಏನು ಬೇಕಾದರೂ ಹೇಳಲಿ, ಬಿಜೆಪಿ ಹಾಗೂ ಜೆಡಿಎಸ್ ಚಟುವಟಿಕೆ ನಮಗೆ ಬೇಕಾಗಿಲ್ಲ ಸಿದ್ದರಾಮಯ್ಯ ನಮ್ಮ ಸಿಎಲ್‌ಪಿ ಲೀಡರ್ ಆಗಿದ್ದಾರೆ. ಅವರು ಯಾಕೆ ರಾಜೇಶ್ ಗೌಡರನ್ನು ಬಿಜೆಪಿ ಕಳುಹಿಸಿ ಕೊಡ್ತಾರೆ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತುಮಕೂರು ಜಿಲ್ಲೆಯ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ರಾಜೇಶ್ ಗೌಡ ಏನು ನಮ್ಮ ಪಕ್ಷದ ಸದಸ್ಯ ಅಲ್ಲ. ಅವರ ತಂದೆ ನಮ್ಮ ಪಕ್ಷದಲ್ಲಿ ಎಂಪಿ ಆಗಿದ್ದರು. ಇವಾಗ ರಾಜೇಶ್ ಗೌಡ ಬಿಜೆಪಿಗೆ ಹೋಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಯಾಕೆ ರಾಜೇಶ್ ಗೌಡರನ್ನು ಬಿಜೆಪಿ ಕಳುಹಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. 

2 ಬಾರಿ ಅಹಿಂದ ವರ್ಗಕ್ಕೆ ಮಣೆ ಹಾಕಿದ ಶಿರಾ : ಈ ಬಾರಿ ವಿಜಯ ಯಾರಿಗೆ?

ಶಿರಾದ ಅಭ್ಯರ್ಥಿ ಅತ್ಯಂತ ತಿಳುವಳಿಕಸ್ಥರಾಗಿದ್ದಾರೆ. ಅತ್ಯಂತ ಹಿರಿಯ ವ್ಯಕ್ತಿ, ನಾವೆಲ್ಲರೂ ಒಗ್ಗಟ್ಟಿನಿಂದ ಅವರನ್ನು ಕಣಕ್ಕೆ ಇಳಿಸಿದ್ದೇವೆ. ಶಿರಾ ಜನರು ದಡ್ಡರೇನು ಅಲ್ಲ, ಬಹಳ ಪ್ರಜ್ಞಾವಂತರು, ಬುದ್ದಿವಂತರಿದ್ದಾರೆ. ಶಿರಾ ಜನತೆ ಸೂಕ್ತ ಅಭ್ಯರ್ಥಿಯನ್ನೇ ಆಯ್ಕೆ ಮಾಡುತ್ತಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. 

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!