ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಮೊನ್ನೇ ಅಷ್ಟೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕನ ಮನೆಗೆ ಭೇಟಿ ನೀಡಿ ಜೆಡಿಎಸ್‌ಗೆ ಆಹ್ವಾನಿದ್ದರು. ಇದರ ಬೆನ್ನಲೇ ಡಿಕೆಶಿ ಶಿವಕುಮಾರ್ ತಮ್ಮ ನಾಯಕ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.13): ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಹೌದು... ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್‌ಗೆ ಆಹ್ವಾನ ಕೊಟ್ಟುಬಂದಿದ್ದಾರೆ. ಇದರ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮ ನಾಯಕನ ಮನೆ ಭೇಟಿ ನೀಡಿ ಸಂಧಾನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಹಿರಿಯ ನಾಯಕನನ್ನು ಭೇಟಿಯಾದ ಕುಮಾರಸ್ವಾಮಿ, ಜೆಡಿಎಸ್‌ಗೆ ಆಹ್ವಾನ..!
ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಅವರು ಕೆಲ ನಾಯಕರ ನಡೆಗೆ ಅಸಮಾಧಾನಗೊಂಡಿದ್ದು, ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಚಾನ್ಸ್ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಬ್ರಾಹಿಂ ಅವರನ್ನ ಜೆಡಿಎಸ್ ಕರೆತರಲು ಕಸರತ್ತು ನಡೆಸಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಬೆಂಗಳೂರಿನ ಬೆನ್ಸನ್ ಟೌನ್ ನಿವಾಸದಲ್ಲಿ ಶನಿವಾರ ರಾತ್ರಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಸಂಧಾನ ಮಾತುಕತೆ?
ಯೆಸ್ ಡಿಕೆ ಶಿವಕುಮಾರ್ ಅವರು ಸಿ.ಎಂ.ಇಬ್ರಾಹಿಂ ಅವರನ್ನ ಸಮಧಾನ ಮಾಡಲು ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪರೋಕ್ಷವಾಗಿ ಪಕ್ಷ ತೊರೆಯುವ ಸುಳಿವನ್ನು ನೀಡಿದ್ದರಿಂದ ಅವರ ಜೊತೆ ಸಂಧಾನ ಮಾತುಕತೆ ಮಾಡಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಸಿಎಂ ಇಬ್ರಾಹಿಂ ದಳ ಪಾಳಯ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕೇಂದ್ರ ಸಚಿವರೂ ಆಗಿದ್ದ ಅವರು ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿನ ದಿನಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ಜೊತೆಗಿನ ಅಸಮಾಧಾನವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಡಿಕೆ ಶಿವಕುಮಾರ್ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.