
ಬೆಂಗಳೂರು, (ಅ.03):ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ.
"
ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ಅವರ ತಂದೆ ನಮ್ಮ ಪಕ್ಷದಲ್ಲಿಯೇ ಇದ್ದರು. ಯಾವುದೋ ಕಾರಣಕ್ಕೋ ಬಿಟ್ಟು ಹೋಗಿದ್ದರು. ಪಾಪ ನೊಂದ ಆ ಹೆಣ್ಮಗಳಿಗೆ ಟಿಕೆಟ್ ಕೊಡಲು ಪರಿಗಣಿಸಿ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದ್ರೆ, ಪಕ್ಷದಿಂದ ನಾವಿನ್ನೂ ಚರ್ಚಿಸಿಲ್ಲ. ಏಕೆಂದ್ರೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಏಳೆಂಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದು ಸ್ಪಷ್ಟಪಡಿಸಿದರು.
RR ನಗರ ಉಪಕದನ: ಕುತೂಹಲ ಮೂಡಿಸಿದ ಡಿಕೆಶಿ-ಕುಸುಮಾ ಭೇಟಿ, ಯಾರಿಗೆ ಸಿಗಲಿದೆ ಕೈ ಟಿಕೆಟ್?
ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚಿಸಲು ಹಿರಿಯರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯಿಂದ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ, ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ. ಅಂತಿಮವಾಗಿ ಸಿದ್ದರಾಮಯ್ಯ ಸೇರಿ ಮುಖಂಡರೆಲ್ಲರೂ ಚರ್ಚಿಸಿ ಫೈನಲ್ ಮಾಡಲಿದ್ದೇವೆ ಎಂದು ಹೇಳಿದರು.
ಡಿ.ಕೆ. ರವಿ ಅವರ ಹೆಸರನ ಮೇಲೆ ಅನುಕಂಪದ ಅಲೆ ಸೃಷ್ಟಿಸಬಹುದು ಎನ್ನುವ ಪ್ಲಾನ್ ಕುಸುಮಾ ಹಾಗೂ ಕಾಂಗ್ರೆಸ್ ನಾಯಕರದ್ದಾಗಿದೆ. ಆದ್ರೆ, ಡಿ.ಕೆ. ರವಿ ಅವರ ತಾಯಿ ಗೌರಮ್ಮ ಮುಳುವಾಗಿದ್ದಾರೆ. ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ಸ್ಪರ್ಧಿಸಿದರೆ ಸರಿ ಇರುವುದಿಲ್ಲ. ಅಲ್ಲದೇ ಬ್ಯಾನರ್‌ಗಳಲ್ಲಿ ನನ್ನ ಮಗನ ಫೋಟೋ ಹಾಕಿದ್ರೆ ಬೆಂಕಿ ಹಚ್ಚುತ್ತೇನೆ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸುಮಾ ಅವರ ಸ್ಪರ್ಧೆಗೆ ಕೊಂಚ ಹಿನ್ನಡೆಯಾದಂತಾಗಿದೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.