ಕಾಂಗ್ರೆಸ್‌ ಹಣ ಸಂಗ್ರಹಿಸಿದರೆ ಬಿಜೆಪಿಗೇಕೆ ನೋವು: ಡಿಕೆಶಿ

By Kannadaprabha NewsFirst Published Nov 5, 2022, 9:30 AM IST
Highlights

ಚುನಾವಣೆಗೆ ಬಾಂಡ್‌ನಲ್ಲಿ ಬಿಜೆಪಿಗೆ ಹಣ ಆದರೆ ನಮಗೆ ಯಾರೂ ಬಾಂಡ್‌ ಕೊಡಲ್ಲ, ಹೀಗಾಗಿ ನಾವು ಕಾರ್ಯಕರ್ತರಿಂದ ಹಣ ಕೇಳಿದ್ದೇವೆ. ಇದರಿಂದ ಬಿಜೆಪಿಗೆ ಏಕೆ ನೋವು?: ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ನ.05):  ಬಿಜೆಪಿಯವರು ಚುನಾವಣಾ ಬಾಂಡ್‌ ಹೆಸರಿನಲ್ಲಿ ಹಣ ಸಂಗ್ರಹಿಸಿದ್ದಾರೆ. ನಮಗೆ ಯಾರೂ ಬಾಂಡ್‌ ಕೊಡುವವರಿಲ್ಲ. ಆದ್ದರಿಂದ ನಾವು ವಿಧಾನಸಭಾ ಚುನಾವಣಾ ಟಿಕೆಟ್‌ ನೀಡಲು ಕಾರ್ಯಕರ್ತರಿಂದ ಹಣ ಸಂಗ್ರಹಿಸುತ್ತಿದ್ದೇವೆ. ಇದರಿಂದ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು. 

ಬಿಜೆಪಿಯವರು ಏನಾದರೂ ಟೀಕಿಸಲಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ರು. ಹಾಗೂ ಅರ್ಜಿ ಸಲ್ಲಿಸುವಾಗ 1 ಲಕ್ಷ, 2 ಲಕ್ಷ ರು. ಡಿಡಿ ಪಡೆದರೆ ತಪ್ಪೇನು?’ ಎಂದು ಪ್ರಶ್ನಿಸಿದರು. ‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು.

ಸಿದ್ದು ರಾಜೀನಾಮೆ ಕೊಟ್ರೆ ನಾನೂ ಕೊಡುವೆ: ಸಚಿವ ಸುಧಾಕರ್‌

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜಿಪಿ ಸರ್ಕಾರವಿದ್ದು ಬಾಂಡ್‌ ಹೆಸರಿನಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಆದರೆ ನಮಗೆ ಬಾಂಡ್‌ ಕೊಡುವವರಿಲ್ಲ. ಹೀಗಾಗಿ ಪಕ್ಷ ಸಂಘಟನೆಗೆ ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು?. ‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು.

ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ:

ಕಾಂಗ್ರೆಸ್‌ ಬಾಗಿಲು ಕ್ಲೋಸ್‌ ಆಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಕಾಂಗ್ರೆಸ್‌ ಶಾಸಕರನ್ನು ಕಾಡಿ ಬೇಡಿ, ಕಾಲಿಗೆ ಬಿದ್ದು, ಹಣ ಕೊಟ್ಟು ಖರೀದಿ ಮಾಡಿದವರು ಬಿಜೆಪಿಯವರು. ಕಾಂಗ್ರೆಸ್‌ನ 13 ಹಾಗೂ ಜೆಡಿಎಸ್‌ನ ಮೂವರು ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರಲ್ಲ ಆಗ ಅವರ ಪಕ್ಷದ ಬಾಗಿಲು ಬಂದ್‌ ಆಗಿತ್ತಾ? ತಾಕತ್ತಿದ್ದರೆ ಜನಮತದ ಆಧಾರದ ಮೇಲೆ ಗೆಲ್ಲಬೇಕಿತ್ತು. ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದೆ. ಶಿವಕುಮಾರ್‌ ಭ್ರಷ್ಟಾಚಾರದ ಬ್ರ್ಯಾಂಡ್‌ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದಾರೆ. ನನ್ನನ್ನು ಟಾರ್ಗೆಟ್‌ ಮಾಡಿದರೆ ಅವರಿಗೆ ಮಾರ್ಕೆಟ್‌ ಇರುತ್ತದೆ’ ಎಂದು ವ್ಯಂಗ್ಯವಾಡಿದರು.

ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಪರದೇಶಿ ಗಿರಾಕಿ: ಸಚಿವ ಶ್ರೀರಾಮುಲು

‘ಶಾಸಕ ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇಂತಹ ಘಟನೆ ಆಗಬಾರದಿತ್ತು. ಹೇಗೆ ಆಯಿತು ಎಂದು ಎಲ್ಲರಿಗೂ ಅನುಮಾನ ಬರುತ್ತದೆ. ಸರ್ಕಾರ ತನಿಖೆ ನಡೆಸಿ ನ್ಯಾಯ ಒದಗಿಸಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.

ವಲಸಿಗರ ಬಗ್ಗೆ ಕಾಲ ಉತ್ತರ ನೀಡಲಿದೆ: ಡಿಕೆಶಿ

ಸಚಿವ ಎಂ.ಟಿ.ಬಿ.ನಾಗರಾಜ್‌ ನಿಮ್ಮ ಸಂಪರ್ಕದಲ್ಲಿದ್ದಾರಾ. ಕಾಂಗ್ರೆಸ್‌ ತೊರೆದ ವಲಸಿಗರೂ ನಿಮ್ಮನ್ನು ಸಂಪರ್ಕಿಸುತ್ತಿದ್ದಾರಾ?’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಕಾಲ ಎಲ್ಲರಿಗೂ ಉತ್ತರ ನೀಡುತ್ತದೆ ಎಂದು ಒಗಟಾಗಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದರು.
 

click me!