ಸಿದ್ದುಗೆ ಕಳಂಕ ಮೆತ್ತಲು ಬಿಜೆಪಿ ಯತ್ನ: ಡಿ.ಕೆ. ಶಿವಕುಮಾರ್‌

Published : Jan 10, 2023, 02:16 PM IST
ಸಿದ್ದುಗೆ ಕಳಂಕ ಮೆತ್ತಲು ಬಿಜೆಪಿ ಯತ್ನ: ಡಿ.ಕೆ. ಶಿವಕುಮಾರ್‌

ಸಾರಾಂಶ

ಜನರ ಬದುಕು ಕಟ್ಟಿ ಕೊಡುವುದನ್ನು ಬಿಟ್ಟು ಭಾವನೆ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಷ್ಟ್ರಪತಿಗಳಾಗಿದ್ದ ರಾಮನಾಥ್‌ ಕೋವಿಂದ್‌ ಅವರು ಟಿಪ್ಪು ಸುಲ್ತಾನ್‌ ಬಗ್ಗೆ ಸದನದಲ್ಲಿ ಹೊಗಳಿ ಹೋಗಿದ್ದರು. ಟಿಪ್ಪು ಇತಿಹಾಸ ನಾವು ಬರೆದಿದ್ವಾ? ಶೃಂಗೇರಿ ಹಾಗೂ ನಂಜನಗೂಡಿನಲ್ಲಿ ಸಲಾಂ ಆರತಿ ನಾವು ಮಾಡಿದ್ವಾ? ಎಂದು ಪ್ರಶ್ನಿಸಿದ ಡಿಕೆಶಿ. 

ಬೆಂಗಳೂರು(ಜ.10):  ‘ಬಿಜೆಪಿಯವರು ತಮ್ಮ ಕಳಂಕ ಮುಚ್ಚಿಕೊಳ್ಳಲು ನಮ್ಮ ನಾಯಕರ ಮೇಲೆ ಕಳಂಕ ಮೂಡಿಸಲು ಯತ್ನಿಸುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಪುಸ್ತಕ ಬರೆಯುವವರು ಚರ್ಚೆಗೆ ಬರಲಿ. ನಾವೂ ಚರ್ಚೆ ಮಾಡಲು ಸಿದ್ಧವಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬಿಜೆಪಿ ನಾಯಕರು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡುವ ಬಗ್ಗೆ ಮಾತನಾಡಿದ ಅವರು, ಭಾವನೆ ಮೇಲೆ ದೇಶ ಹಾಗೂ ಸಮಾಜವನ್ನು ಇಬ್ಭಾಗ ಮಾಡಲು ಬಿಜೆಪಿಗರು ಹೋಗುತ್ತಿದ್ದಾರೆ. ರಾಜ್ಯದಲ್ಲಿ 10 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಬಂದಿದೆ ಎನ್ನುತ್ತಾರೆ. ಶಿವಮೊಗ್ಗ, ಕರಾವಳಿ ಭಾಗದಲ್ಲಿ ಎಷ್ಟುಬಂಡವಾಳ ಹೂಡಿಕೆ ಆಗಿದೆ? ಶಿವಮೊಗ್ಗದಲ್ಲಿ ಯಾರಾದರೂ 500 ಕೋಟಿ ರು. ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದ್ದಾರಾ? ದಕ್ಷಿಣ ಕನ್ನಡದಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಈ ವೈಫಲ್ಯಗಳನ್ನು ಮುಚ್ಚಿಹಾಕಲು ನಮ್ಮ ನಾಯಕರ ಮೇಲೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಕಾಣುತ್ತಿರುವ ಸಿಎಂ ಕುರ್ಚಿ ಕನಸು ನನಸಾಗೋದಿಲ್ಲ: ಸಚಿವ ಕಾರಜೋಳ

ಜನರ ಬದುಕು ಕಟ್ಟಿ ಕೊಡುವುದನ್ನು ಬಿಟ್ಟು ಭಾವನೆ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಷ್ಟ್ರಪತಿಗಳಾಗಿದ್ದ ರಾಮನಾಥ್‌ ಕೋವಿಂದ್‌ ಅವರು ಟಿಪ್ಪು ಸುಲ್ತಾನ್‌ ಬಗ್ಗೆ ಸದನದಲ್ಲಿ ಹೊಗಳಿ ಹೋಗಿದ್ದರು. ಟಿಪ್ಪು ಇತಿಹಾಸ ನಾವು ಬರೆದಿದ್ವಾ? ಶೃಂಗೇರಿ ಹಾಗೂ ನಂಜನಗೂಡಿನಲ್ಲಿ ಸಲಾಂ ಆರತಿ ನಾವು ಮಾಡಿದ್ವಾ? ಎಂದು ಪ್ರಶ್ನಿಸಿದರು.

ನನ್ನ ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ದೇವಾಲಯ ಕಟ್ಟಲು ನಾನು ನೆರವು ನೀಡಿದ್ದು, ಈ ಬಗ್ಗೆ ಯಾರೂ ಮಾತನಾಡುವುದಿಲ್ಲ. ಆದರೆ ಒಂದು ಗ್ರಾಮದಲ್ಲಿ ಕ್ರೈಸ್ತರ ಶಿಲುಬೆ ನಿರ್ಮಿಸಲು ಮುಂದಾದಾಗ ನನ್ನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಡವರಿಗೆ ಊಟ ನೀಡುವುದು, ಕೊರೋನಾ ಅವಧಿಯಲ್ಲಿ ಸತ್ತವರಿಗೆ ಪರಿಹಾರ ನೀಡುವುದು, 2 ಕೋಟಿ ಉದ್ಯೋಗ, ಬ್ಯಾಂಕ್‌ ಖಾತೆಗೆ 15 ಲಕ್ಷ ಹಣದಂತಹ ವಿಚಾರಗಳನ್ನು ಕೇಳದಿರಲು ಇಂತಹ ವಿಚಾರಗಳನ್ನು ಮುಂದು ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರ ಈ ಪ್ರಯತ್ನಗಳು ಕೆಲಸಕ್ಕೆ ಬರುವುದಿಲ್ಲ. ಶೃಂಗೇರಿ, ನಂಜನಗೂಡಿನಲ್ಲಿ ಸಲಾಂ ಆರತಿಗೆ ನಾವು ಹೆಸರಿಟ್ಟಿದ್ದೆವಾ? ಟಿಪ್ಪು ಇತಿಹಾಸ ನಾವು ಬರೆದಿದ್ದೇವಾ? ಸ್ವಾತಂತ್ರ್ಯ ಬರುವ ಮುನ್ನವೇ ಟಿಪ್ಪು ಅವರ ಇತಿಹಾಸ ಬರೆಯಲಾಗಿತ್ತು. ರಾಷ್ಟ್ರಪತಿಗಳು ಟಿಪ್ಪು ತ್ಯಾಗದ ಬಗ್ಗೆ ಮಾತನಾಡಿದ್ದಾರೆ. ಅವರು ಪುಸ್ತಕ ಬರೆದು ಸಂತೋಷ ಪಡಲಿ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ