ಸಿ.ಟಿ.ರವಿ ವಿರುದ್ಧ ಮಾನನಷ್ಟ ಕೇಸ್‌ ಹಾಕುವೆ: ಡಿ.ಕೆ.ಶಿವಕುಮಾರ್‌

By Kannadaprabha NewsFirst Published Mar 27, 2023, 9:15 AM IST
Highlights

‘ರಾಜ್ಯದಲ್ಲಿ ಬಿಜೆಪಿ ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿ ಭ್ರಮಣೆಯಾಗಿದೆ. ಇದರಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಬೆಂಗಳೂರು (ಮಾ.27): ‘ರಾಜ್ಯದಲ್ಲಿ ಬಿಜೆಪಿ ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿ ಭ್ರಮಣೆಯಾಗಿದೆ. ಇದರಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಅದರ ವಿಚಾರಣೆ ಇನ್ನೂ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ ಎಂದರು.

ಚಿತ್ರದುರ್ಗ‌ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ರಾಹುಲ್‌ ಧ್ವನಿ ಹತ್ತಿಕ್ಕಲು ಬಿಜೆಪಿ ಯತ್ನ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾಂಗ್ರೆಸ್‌ ಹೆದರುವುದಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಗುರುಮಠಕಲ್‌ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ನಡೆದ ನೂತನ ಕಾಂಗ್ರೆಸ್‌ ಕಚೇರಿ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ರಾಜ್ಯದ ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಸಲಹೆಯಂತೆ 2000 ರು. ಹಾಗೂ ನಿರುದ್ಯೋಗಿ ಯುವಕರಿಗೆ ರಾಹುಲ್‌ ಗಾಂಧಿ ಸಲಹೆಯಂತೆ 4000 ರು. ನೀಡಲಾಗುವುದು. 

ಅಲ್ಲದೆ, ಉಚಿತ ವಿದ್ಯುತ್‌ ಕೊಡಲಾಗುವುದು ಎಂದು ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದರು. ಗುರುಮಠಕಲ್‌ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಭದ್ರಕೋಟೆ ಆಗುವಂತೆ ಮಾಡಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಿ, ಗೆಲುವಿನ ಕಾಣಿಕೆ ಕೊಡಬೇಕು ಎಂದು ಕಾರ‍್ಯಕರ್ತರಿಗೆ ಕರೆ ನೀಡಿದರು. ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್‌ ಕಾರ್ಯಕರ್ತರು ತಮ್ಮ ಮತ ವ್ಯರ್ಥ ಮಾಡಿಕೊಳ್ಳಬಾರದು ಎಂದ ಅವರು, ಕುಮಾರಸ್ವಾಮಿ ಅವರನ್ನು ಬಿಜೆಪಿ ಒಂದು ಸಲ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದರು. ನಾವೂ ಸಹ ನೀಡಿದ್ದೆವು. ಆದರೆ, ನಿಭಾಯಿಸಿಕೊಂಡು ಹೋಗಲು ಅವರಿಂದ ಆಗಲಿಲ್ಲ. ಮುಂದೆಯೂ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಡಿಕೆಶಿ ಸಿಎಂ ಆಗೋಕೆ ಸಾಧ್ಯವೇ ಇಲ್ಲ: ಡಿ.ಕೆ. ಶಿವಕುಮಾರ್‌ ಅವರು ಏನಾದರೂ ಮಾಡಿ ಸಿಎಂ ಆಗಬೇಕೆಂದು ಹೊರಟಿದ್ದಾರೆ. ನನ್ನ ಪ್ರಕಾರ ಈ ಬಾರಿ ಅದು ಆಗಲ್ಲ, ಅವರು ಸಿಎಂ ಆಗೋಕೆ ಸಾಧ್ಯವೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.  ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ, ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವ ಪ್ರಶ್ನೆಯೂ ಇಲ್ಲ ಎಂದರು. ಡಿ.ಕೆ.ಶಿವಕುಮಾರ್‌ ಅವರಿಗೆ ಚಿಕ್ಕಮಗಳೂರಿನ ಬಗ್ಗೆ ಯಾವುದೇ ತಿಳುವಳಿಕೆ ಇಲ್ಲ. 

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು. ಅವರು ತಮ್ಮ ಆಳ್ವಿಕೆಯಲ್ಲಿ ಏನು ಮಾಡಿದ್ದೇವೆ ಎಂದು ಮತವನ್ನು ಕೇಳುತ್ತಾರೆ. ಕಾಂಗ್ರೆಸಿಗರಿಗೆ ಇಲ್ಲಿ ಮತ ಕೇಳಲು ಮುಖವೇ ಇಲ್ಲ, ಮಾಡಿರುವ ಕೆಲಸವೂ ಇಲ್ಲ ಎಂದರು. ಶಿವಕುಮಾರ್‌ ಅವರಿಗೆ ಸವಾಲು ಹಾಕುತ್ತೇನೆ, ಅವರ ಕಾಲದಲ್ಲಿ ಇಂತದ್ದು ಮಾಡಿದ್ದೇವೆಂದು ನೈತಿಕತೆ ಇದ್ದರೆ ಹೇಳಿ, ಮತ ಕೇಳಲಿ, ನಾವು ಅಭಿವೃದ್ಧಿ ಹಾಗೂ ಸಿದ್ಧಾಂತವನ್ನು ಮುಂದಿಟ್ಟು ಕೊಂಡು ಮತ ಕೇಳುತ್ತೇವೆ ಎಂದರು. ಚಿಕ್ಕಮಗಳೂರಿಗೆ ಸಿ.ಟಿ.ರವಿ ಏನೆಂದು ಗೊತ್ತು, 

ಮೀಸಲಾತಿ ಜೇನುಗೂಡಿಗೆ ಕೈಹಾಕಿ ಸಿಹಿ ಹಂಚಿದ್ದೇನೆ: ಸಿಎಂ ಬೊಮ್ಮಾಯಿ

ನಾನು ಈ ಮಣ್ಣಿನ ಮಗ. ಅವರು ಚಾಲೆಂಜ್‌ ಹಾಕುವುದು ನನಗಲ್ಲ, ಚಿಕ್ಕಮಗಳೂರಿನ ಜನಕ್ಕೆ, ಜನ ಅವರ ಸವಾಲನ್ನು ಸ್ವೀಕರಿಸುತ್ತಾರೆ ಎಂದರು. ಡಿ.ಕೆ. ಶಿವಕುಮಾರ್‌ ದೇ ಆರ್‌ ಆಲ್‌ ಮೈ ಬ್ರದರ್ಸ್‌ ಅಂತ ಹೇಳಿದ್ದರು. ಡಿಜೆ, ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದವರಿಗೆ ಬೆಂಬಲ ನೀಡಿದ್ದು ಯಾರು, ತನ್ನದೇ ಪಕ್ಷದ ದಲಿತ ಶಾಸಕನಿಗೆ ರಕ್ಷಣೆ ನೀಡದೆ ರಾಜಕಾರಣ ಮಾಡಿದ್ಯಾರು, ಅವರು ಹೇಳುವ ಮೂಲಕ ಆತಂಕ ಹೊರ ಹಾಕಿದ್ದಾರೆ ಎಂದು ಹೇಳಿದರು.

click me!