ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆಗೆ 40 ಸಾವಿರ ಜನ ನೋಂದಣಿ: ಡಿ.ಕೆ. ಶಿವಕುಮಾರ್‌

By Govindaraj S  |  First Published Aug 11, 2022, 4:30 AM IST

ಬೇರೆ ಪಕ್ಷದ ನಾಯಕರು ಏನೇ ಮಾತನಾಡಲಿ, ಎಷ್ಟಾದರೂ ಟೀಕೆ ಮಾಡಲಿ. ನಾವು ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಉದಯಪುರದಲ್ಲಿ ಸ್ವಾತಂತ್ರ್ಯ ನಡಿಗೆ ಘೋಷಿಸಿದ ಬಳಿಕ ಅವರು ‘ಹರ್‌ ಘರ್‌ ತಿರಂಗಾ’ ಘೋಷಿಸಿದರು. ಸ್ವಾತಂತ್ರ್ಯ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. 


ಬೆಂಗಳೂರು (ಆ.11): ಬೇರೆ ಪಕ್ಷದ ನಾಯಕರು ಏನೇ ಮಾತನಾಡಲಿ, ಎಷ್ಟಾದರೂ ಟೀಕೆ ಮಾಡಲಿ. ನಾವು ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಉದಯಪುರದಲ್ಲಿ ಸ್ವಾತಂತ್ರ್ಯ ನಡಿಗೆ ಘೋಷಿಸಿದ ಬಳಿಕ ಅವರು ‘ಹರ್‌ ಘರ್‌ ತಿರಂಗಾ’ ಘೋಷಿಸಿದರು. ಸ್ವಾತಂತ್ರ್ಯ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. 

ಆ.15 ರಂದು ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದವರೆಗೆ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಜನ ಸೇರಲು ಕರೆ ನೀಡಿದ್ದು, ಈವರೆಗೆ 40 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡಿರುವವರಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಕನ್ನಪಡರ ಸಂಘಟನೆಗಳು, ಯುವಕರು ಸೇರಿದಂತೆ ಎಲ್ಲ ವರ್ಗದ ಜನರಿದ್ದಾರೆ. ಅವರಿಗೆಲ್ಲರಿಗೂ ಉಚಿತವಾಗಿ ರಾಷ್ಟ್ರಧ್ವಜ, ಟಿ-ಶರ್ಟ್‌, ಟೋಪಿ ನೀಡಲಾಗುವುದು ಎಂದು ಹೇಳಿದ್ದಾರೆ.

Tap to resize

Latest Videos

ಡಿಕೆಶಿ ಮಾತಿಗೂ ಕ್ಯಾರೇ ಎನ್ನದ ಕಾಂಗ್ರೆಸ್ಸಿಗರು: ಮತ್ತೆ ಭುಗಿಲೆದ್ದ ಗುಂಪುಗಾರಿಕೆ

ಪಕ್ಷಾತೀತ ಕಾರ್ಯಕ್ರಮ: ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿದ್ದು ಎಲ್ಲಾ ವರ್ಗದವರೂ ಭಾಗವಹಿಸುವಂತೆ ಕರೆ ನೀಡಲಾಗಿದೆ. ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಹರಿಹರನ್‌ ಅವರ ತಂಡದಿಂದ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಲಾವಿದರು, ಸಾಹಿತಿಗಳು ಸೇರಿದಂತೆ ಎಲ್ಲ ರಂಗದವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಗಾಂಧೀಜಿ ಅವರು ಹೇಗೆ ಹೆಜ್ಜೆ ಹಾಕಿದರೋ ಅದೇ ರೀತಿ ನಾವು ಹೆಜ್ಜೆ ಹಾಕಬೇಕು ಎಂದರು.

1 ಲಕ್ಷ ಜನ ಸೇರಿಸುವ ಗುರಿ- ಡಿಕೆಶಿ: ಈ ಬಗ್ಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸುಮಾರು 75 ಸಾವಿರದಿಂದ 1 ಲಕ್ಷದವರೆಗೂ ಜನ ಸೇರಲಿದ್ದಾರೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಜನರು ಬಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದು, ಯಾರು ಭಾಗವಹಿಸಲಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದರು.  ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಕ್ರೀಡಾಪಟುಗಳು, ಕಲಾವಿದರು ಸೇರಿದಂತೆ ಎಲ್ಲರೂ ಭಾಗವಹಿಸಬಹುದು ಎಂದು ಕರೆ ನೀಡಿದರು. 

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವವನ್ನು ರಾಜ್ಯದಲ್ಲಿ ಪಾದಯಾತ್ರೆ ಮೂಲಕ ಆಚರಿಸಲು ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ. ಪಾದಯಾತ್ರೆ ಮಾಡಲಾಗುವುದು. ಈ ನಡಿಗೆಯನ್ನು ಒಂದು ಜಿಲ್ಲೆಯ ಎಷ್ಟುತಾಲೂಕುಗಳಲ್ಲಿ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಕಾಂಗ್ರೆಸ್‌ ನಾಯಕರ ಇಚ್ಛೆಗೆ ಬಿಟ್ಟಿದ್ದೇವೆ ಎಂದರು.  ಆ.1 ರಿಂದ ಆ.10ರವರೆಗೆ ಅಥವಾ ಅದಕ್ಕಿಂತ ಮುಂಚಿತವಾಗಿ ಬೇಕಾದರೂ ಈ ಪಾದಯಾತ್ರೆ ಮಾಡಬಹುದು. ಕೆಲವು ನಾಯಕರು ತಮ್ಮ ಕ್ಷೇತ್ರಗಳಲ್ಲೇ 75 ಕಿ.ಮೀ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದು, ಅದಕ್ಕೂ ಅನುಮತಿ ನೀಡಿದ್ದೇವೆ. 

ಸಿದ್ದು ಆಯ್ತು, ಈಗ ಡಿಕೆಶಿ ಶೋ: 1 ಲಕ್ಷ ಜನರನ್ನು ಸೇರಿಸಲು ಸಿದ್ಧತೆ..!

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ಕೊಡುಗೆ ಸಾಕಷ್ಟಿದೆ. ಈ ದೇಶಕ್ಕೆ ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ಕೊಡುಗೆಯಾಗಿ ನೀಡಿದ್ದು ಕಾಂಗ್ರೆಸ್‌. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಇದ್ದರೆ ಅವರನ್ನು ಅಥವಾ ಅವರ ಕುಟುಂಬದವರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಯಾ ತಾಲೂಕಿನ ಶಾಸಕರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

click me!