Chamarajanagar: ಭಾರತ್‌ ಜೋಡೋ ನಡಿಗೆ ದೇಶಕ್ಕೊಂದು ಕೊಡುಗೆ: ಡಿ.ಕೆ.ಶಿವಕುಮಾರ್‌

By Govindaraj S  |  First Published Sep 15, 2022, 3:59 PM IST

ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿರುವ ಭಾರತ್‌ ಜೋಡೋ ನಡಿಗೆ ದೇಶಕ್ಕೊಂದು ಕೊಡುಗೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ನಡೆದ ಭಾರತ್‌ ಜೋಡೋ ಪಾದಯಾತ್ರೆ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.


ಚಾಮರಾಜನಗರ (ಸೆ.15): ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿರುವ ಭಾರತ್‌ ಜೋಡೋ ನಡಿಗೆ ದೇಶಕ್ಕೊಂದು ಕೊಡುಗೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ನಡೆದ ಭಾರತ್‌ ಜೋಡೋ ಪಾದಯಾತ್ರೆ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯವರು ದೇಶವನ್ನು ಇಬ್ಭಾಗ ಮಾಡಲು ಹೊರಟಿದ್ದಾರೆ, ಅದನ್ನು ತಪ್ಪಿಸಲು, ಹಿರಿಯರು ತಂದು ಕೊಟ್ಟಿರುವ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜ ಉಳಿಸಲು ಹಾಗೂ ಹೆಣ್ಣುಮಕ್ಕಳಿಗೆ, ಯುವಕರಿಗೆ ಶಕ್ತಿ ತುಂಬಲು ಭಾರತ್‌ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾಸು ಕೊಟ್ಟು ಜನರನ್ನು ಕರೆ ತರಬೇಡಿ: ಪುಟ್ಟರಂಗ ಶೆಟ್ಟರೇ ಕಾಸು ಕೊಟ್ಟು ಜನರನ್ನು ಕರೆ ತರಬೇಡಿ. ನಿಮ್ಮ ಕೈಯಲ್ಲಿ ಜನರನ್ನು ಸೇರಿಸೋಕೆ ಆಗದಿದ್ದರೆ ಹೇಳಿ ಕನಕಪುರದಿಂದ ಜನ ಕರೆ ತಂದು ಪಾದಯಾತ್ರೆ ಮಾಡಿಸುತ್ತೇನೆ ಎಂದರು. ಪ್ರತಿ ಮನೆಮನೆಗೂ ಅಹ್ವಾನ ಪತ್ರಿಕೆ ಕೊಟ್ಟು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿಸಿ ದೇಶಕ್ಕೆ ದೊಡ್ಡ ಸಂದೇಶ ಕೊಡುವ ಕೆಲಸವನ್ನು ಶಾಸಕ ಪುಟ್ಟರಂಗಶೆಟ್ಟರು ಮಾಡಬೇಕು ಎಂದರು.

Tap to resize

Latest Videos

undefined

Chamarajanagar: ಗರ್ಭಿಣಿ ಪತ್ನಿಗೆ ಮದ್ಯ ಕುಡಿಸಿ ಹತ್ಯೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಶೆಟ್ರು ಸ್ಟ್ರಾಂಗ್‌: ನನಗಿಂತ, ಸಿದ್ದರಾಮಯ್ಯ ಅವರಗಿಂತ ಪುಟ್ಟರಂಗಶೆಟ್ಟಿ ಸ್ಟ್ರಾಂಗ್‌ ಆಗಿದ್ದಾರೆ. ಪಾದಯಾತ್ರೆಯಲ್ಲಿ ರಾಷ್ಟ್ರ ನಾಯಕರೊಂದಿಗೆ ಹೆಜ್ಜೆ ಹಾಕಿದರೆ ಮದುವೆ ಗಂಡು ತರ ಕಾಣಬೇಕು. ಮತ್ತೊಂದು ಹೆಣ್ಣು ಕೊಡಂಗೆ ಇರಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು. ನಿಮ್ಮೊಂದಿಗೆ ಕೊಳ್ಳೇಗಾಲದ ಮಾಜಿ ಶಾಸಕರಾದ ಎ.ಆರ್‌. ಕೃಷ್ಣಮೂರ್ತಿ, ಬಾಲರಾಜು ಹೆಜ್ಜೆ ಹಾಕಲಿ, ಜಯಣ್ಣ ನಿಮ್ಮ ಸ್ಪೀಡ್‌ಗೆ ಬರಲು ಸಾಧ್ಯವಿಲ್ಲ. ಅವರನ್ನು ಬಿಟ್ಟು ಬಿಡೋಣ. ನಾನು, ಧ್ರುವ, ಸಿದ್ದರಾಮಯ್ಯ ಇತರೇ ನಾಯಕರು ಹಿಂದೆ ಬರುತ್ತೇವೆ. ಜಿಲ್ಲೆಯ ವ್ಯಾಪ್ತಿಯಲ್ಲಿ ನಿಮ್ಮದೇ ಹವಾ ಇರಬೇಕು. ಮುಂದಿನ ಚುನಾವಣೆಯಲ್ಲಿ 4 ವಿಧಾನಸಭೆ ಕ್ಷೇತ್ರಗಳಲ್ಲಿಲೂ 25 ಸಾವಿರ ಮತಗಳ ಅಂತರದಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಬೇಕು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮಾತನಾಡಿ, ಭ್ರಷ್ಟ್ರಚಾರ ತುಂಬಿ ತುಳುಕುತ್ತಿದೆ, ಮುಖ್ಯಮಂತ್ರಿ ಜಿಲ್ಲಾ ಕೇಂದ್ರಕ್ಕೆ ಬಂದಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ 12 ಬಾರಿ ಬಂದಿದ್ದು, ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಜಿಲ್ಲಾಭಿವೃದ್ದಿಗೆ ಒತ್ತು ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರು ತಳಮಟ್ಟದಿಂದ ಕಾಂಗ್ರೆಸ್‌ ಬಲಪಡಿಸಿದ್ದಾರೆ ಎಂದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು. ಡಿ.ಕೆ.ಶಿವಕುಮಾರ್‌,ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಐಸಿಸಿ ಕಾರ್ಯದರ್ಶಿ ರೋಜಿಜಾನ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ವಿರುದ್ದ ವಾಗ್ದಾಳಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ. ಮರಿಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್‌.ಸಿ.ಬಸವರಾಜು, ಮಂಜುಳ ಮಾನಸ, ಶಾಸಕ ಆರ್‌.ನರೇಂದ್ರ, ಮಾಜಿ ಶಾಸಕ ಎಸ್‌.ಬಾಲರಾಜ್‌, ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆರೆಹಳ್ಳಿ ನವೀನ್‌, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಮಹದೇವ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಲತಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಅಸ್ಗರ್‌, ಗುರುಸ್ವಾಮಿ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‌ ಕುಮಾರ್‌ ಮೊದಲಾದವರು ಇದ್ದರು.

ಯಾತ್ರೆಯಲ್ಲಿ 20ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಿ: ಗುಂಡ್ಲುಪೇಟೆಯಲ್ಲಿ 30ರಂದು ಬೆಳಗ್ಗೆ ಯಾತ್ರೆಗೆ ರಾಹುಲ್‌ ಗಾಂಧಿ ಪಾಲ್ಗೊಳ್ಳುವ ಹಿನ್ನೆಲೆ 20 ಸಾವಿರಕ್ಕೂ ಅಧಿಕ ಮಂದಿ, ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌ ಧ್ರುವನಾರಾಯಣ ಹೇಳಿದರು. ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಅಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಆದ ಮೇಲೆ ಮಿಂಚಿನ ಸಂಚಲನ ಉಂಟು ಮಾಡಿದ್ದಾರೆ. ಮೇಕೆ ದಾಟು ಪಾದಯಾತ್ರೆ ಮೂಲಕ ದಿಟ್ಟಹೋರಾಟ ನಡೆಸಿ ಗಮನ ಸೆಳೆದರು. ಕೋವಿಡ್‌ ವೇಳೆ ಸಾವಿಗೀಡಾದ 36 ಮಂದಿಗೆ 1 ಲಕ್ಷ ಚಕ್‌ ನೀಡಲು ಖುದ್ದು ಆಗಮಿಸಿದ್ದರು ಎಂದರು. 

ಮಲೆಮಹದೇಶ್ವರ ಜಾತ್ರಾ ಮಹೋತ್ಸವ ಸಿದ್ದತೆ ಕೈಗೊಳ್ಳಿ: ಸೋಮಣ್ಣ ಸೂಚನೆ

ಡಿಕೆಶಿ- ಸಿದ್ದರಾಮಯ್ಯ ಪೈಪೋಟಿ: ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಘಟನೆಗಳಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡ ಪರಿಣಾಮ ಸರ್ಕಾರಕ್ಕೆ ಪೈಪೋಟಿ ಕೆಲಸ ಮಾಡಿ, ವಿಧಾನಪರಿಷತ್‌ನಲ್ಲಿ ಬಿಜೆಪಿ ಸರ್ಕಾರವಿದ್ದರೂ 11 ಸ್ಥಾನಗಳಿಸವಂತೆ ಶ್ರಮಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದು, ಮುಂಬರುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.

click me!